Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು : ಇಂಟರ್ನ್‌ಶಿಪ್ ಹೆಸರಿನಲ್ಲಿ ಲಕ್ಷಾಂತರ ರೂ. ವಂಚನೆ : ‘ವೆಕ್ಸನ್’ ಮತ್ತು ‘ಬಿಎಂಪಿ’ ವಿರುದ್ಧ ಆರೋಪ
    ಇತ್ತೀಚಿನ ಸುದ್ದಿ

    ಮಂಗಳೂರು : ಇಂಟರ್ನ್‌ಶಿಪ್ ಹೆಸರಿನಲ್ಲಿ ಲಕ್ಷಾಂತರ ರೂ. ವಂಚನೆ : ‘ವೆಕ್ಸನ್’ ಮತ್ತು ‘ಬಿಎಂಪಿ’ ವಿರುದ್ಧ ಆರೋಪ

    February 27, 2026
    Share

    ಮಂಗಳೂರು : ಮಂಗಳೂರಲ್ಲಿ ನೂರಾರು ಮಂದಿ ವಿದ್ಯಾರ್ಥಿಗಳಿಗೆ ಹಣ‌ ವಂಚನೆ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. ಕುದ್ರೋಳಿಯ ಅಳಕೆ ಭಾಗದ ಶ್ರೇಯಾ ಸ್ವೀಟ್ಸ್ ಎದುರಿಗಿನ ಕಟ್ಟಡದಲ್ಲಿ ಮೊಕ್ಕಾಂ ಹೂಡಿರುವ ಮಹಾರಾಷ್ಟ್ರ ಮೂಲದ ‘ವೆಕ್ಸನ್’ ಹಾಗೂ ಬಿಎಂಪಿ ಎಂಬ ಹೆಸರಿನ ನೆಟ್‌ವರ್ಕಿಂಗ್ ಸಂಸ್ಥೆಯು ಇಂಟರರ್ನ್‌ಶಿಪ್ ಹೆಸರಿನಲ್ಲಿ ನೂರಾರು ಅಮಾಯಕ ವಿದ್ಯಾರ್ಥಿಗಳನ್ನು ಬಲೆಗೆ ಬೀಳಿಸಿಕೊಂಡು ಲಕ್ಷಾಂತರ ರೂಪಾಯಿ ಸುಲಿಗೆ ಮಾಡಿರುವ ಆರೋಪ ಕೇಳಿಬಂದಿದೆ. ಈ ಬಗ್ಗೆ ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸ್ವಸ್ತಿಕ ಕಾಲೇಜಿನ ವಿದ್ಯಾರ್ಥಿಗಳು ಪತ್ರಿಕಾಗೋಷ್ಠಿ ನಡೆಸಿ ಕಂಪೆನಿ ವಿರುದ್ಧ ಗಂಭೀರವಾದ ಆರೋಪ ಮಾಡಿದ್ದಾರೆ.

    ಚೈನ್ ಲಿಂಕ್ ಕಂಪೆನಿಯ ಅವ್ಯವಹಾರ ಕುರಿತು ಮಾತಾಡಿದ ಎಬಿವಿಪಿ ಬೆಂಬಲಿತ ಸರ್ವ ಕಾಲೇಜು ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷ ಮುಳಿಯ ಸಾತ್ವಿಕ್ ಅವರು, “ಪದವಿ ಓದುತ್ತಿರುವ ಅಥವಾ ಮುಗಿಸಿರುವ ಯುವ ಸಮೂಹಕ್ಕೆ ಮಾಸಿಕ 30,000 ರೂಪಾಯಿಗಳ ಆಕರ್ಷಕ ವೇತನದ ಆಮಿಷವೊಡ್ಡಿ ಈ ಸಂಸ್ಥೆ ಆಹ್ವಾನಿಸುತ್ತಿತ್ತು. ಆದರೆ, ಉದ್ಯೋಗದ ಆಸೆಯೊಂದಿಗೆ ಹೋದ ಪ್ರತಿ ವಿದ್ಯಾರ್ಥಿಗಳಿಂದಲೂ ಇಂಟರ್ನ್‌ಶಿಪ್ ಶುಲ್ಕದ ನೆಪದಲ್ಲಿ ಬರೋಬ್ಬರಿ 51,000 ರೂಪಾಯಿಗಳನ್ನು ಈ ಸಂಸ್ಥೆ ವಸೂಲಿ ಮಾಡಿದೆ“ ಎಂದು ಆರೋಪಿಸಿದರು.

    ನೂರಾರು ವಿದ್ಯಾರ್ಥಿಗಳು ಈ ‘ವೆಕ್ಸನ್’ ಹಾಗೂ ಬಿಎಂಪಿ ಕಂಪನಿಯ ಹೆಸರಿನಲ್ಲಿ ನಡೆಯುತ್ತಿದ್ದ ದಂಧೆಗೆ ಬಲಿಯಾಗಿದ್ದಾರೆ. ಮಂಗಳೂರಿನಂತಹ ಪ್ರಬುದ್ಧ ನಗರದಲ್ಲಿ ಹೊರರಾಜ್ಯದ ಕಂಪನಿಯೊಂದು ವಿದ್ಯಾರ್ಥಿಗಳನ್ನೇ ಗುರಿಯಾಗಿಸಿಕೊಂಡು ಇಂತಹ “ಚೈನ್ ಲಿಂಕ್” ಮಾಫಿಯಾ ನಡೆಸುತ್ತಿರುವುದು ತೀವ್ರ ಆತಂಕಕಾರಿ. ಹೀಗಾಗಿ ನಮಗೆ ನ್ಯಾಯ ಸಿಗಬೇಕು. ಈ ಹಿನ್ನೆಲೆಯಲ್ಲಿ ಕದ್ರಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾಗಿ ವಿದ್ಯಾರ್ಥಿಗಳು ತಿಳಿಸಿದ್ದಾರೆ. ಕೃಷ್ಣ, ಪ್ರೀತೇಶ್, ಸಿಂಚನ, ಸಿಂಧು, ಎನ್ ಎಸ್ ಯುಐ ಸಂಘಟನೆಯ ಕ್ರಿಸ್ಟನ್ ಮಿನೆಜಸ್ ಉಪಸ್ಥಿತರಿದ್ದರು.

    Post Views: 150

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.