Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»Uncategorized»ಮಂಗಳೂರು: ಹೈದರಾಬಾದ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸೈಬರ್ ವಂಚಕರ ಜಾಲವನ್ನು ಬೇಧಿಸಿದ ಮಂಗಳೂರು ಸೈಬರ್ ಅಪರಾಧ ಪೊಲೀಸ್ ಠಾಣೆಯ ಪೊಲೀಸರು- 6 ಮಂದಿ ಆರೋಪಿಗಳ ಬಂಧನ
    Uncategorized

    ಮಂಗಳೂರು: ಹೈದರಾಬಾದ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸೈಬರ್ ವಂಚಕರ ಜಾಲವನ್ನು ಬೇಧಿಸಿದ ಮಂಗಳೂರು ಸೈಬರ್ ಅಪರಾಧ ಪೊಲೀಸ್ ಠಾಣೆಯ ಪೊಲೀಸರು- 6 ಮಂದಿ ಆರೋಪಿಗಳ ಬಂಧನ

    February 28, 2026
    Share

    ಮಂಗಳೂರು: ಸೈಬರ್ ಅಪರಾಧ ಪೊಲೀಸ್ ಠಾಣೆಯ ಪೊಲೀಸರು ಹೈದರಾಬಾದ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸೈಬರ್ ವಂಚಕರ ಜಾಲವನ್ನು ಬೇಧಿಸಿ  6 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

    ಆಂಧ್ರಪ್ರದೇಶದ ಶೇಖ್ ಕರೀಮುಲ್ಲಾ @ ರಸೂಲ್ (27), ಬುಡಿದಿನ್ನೆ ವಂಶಿ @ ಗುರು (21), ಪಂಡಿತಿ ಕ್ರಾಂತಿ ಕುಮಾರ್ (36), ಬಡೆ ಶ್ರೀನಿವಾಸ್ (38), ಉತ್ಸಲ ಸಂತೋಷ್ ಕೃಷ್ಣ (35) ಬಂಧಿತರು.  ಇನ್ನು ವಂಚಕರಿಗೆ ಬ್ಯಾಂಕ್ ಖಾತೆ ನೀಡಿದ ಆರೋಪದ ಮೇಲೆ ಮಂಗಳೂರಿನ ಇಬ್ರಾಹಿಂ (35) ನ್ನು ಅರೆಸ್ಟ್ ಮಾಡಲಾಗಿದೆ.

    ಪ್ರಕರಣದ ವಿವರ:ಮಂಗಳೂರು ನಗರದ ಬಂದರು ನಿವಾಸಿ ಮೊಹಮ್ಮದ್ ಇಕ್ಬಾಲ್ ಅವರ ಕರೆಂಟ್ ಖಾತೆಯನ್ನು ವ್ಯವಹಾರ ಉದ್ದೇಶಕ್ಕಾಗಿ ನೀಡುವಂತೆ ಅವರ ಸ್ನೇಹಿತ ಇಬ್ರಾಹಿಂ ಕೇಳಿಕೊಂಡಿದ್ದನು. ಇಕ್ಬಾಲ್ ತಮ್ಮ ಬ್ಯಾಂಕ್ ಪಾಸ್‌ಬುಕ್, ಎಟಿಎಂ ಕಾರ್ಡ್, ಚೆಕ್‌ಬುಕ್ ಹಾಗೂ ಖಾತೆಗೆ ಲಿಂಕ್ ಆಗಿದ್ದ ಏರ್‌ಟೆಲ್ ಸಿಮ್ ಕಾರ್ಡ್ ಅನ್ನು ಇಬ್ರಾಹಿಂಗೆ ನೀಡಿದ್ದರು. ಬಳಿಕ ಆ ಖಾತೆಯನ್ನು ಸೈಬರ್ ವಂಚಕರು ದುರುಪಯೋಗಪಡಿಸಿಕೊಂಡಿರುವುದು ತಿಳಿದುಬಂದ ಹಿನ್ನೆಲೆಯಲ್ಲಿ ಇಕ್ಬಾಲ್ ಮಂಗಳೂರು ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

    ತಾಂತ್ರಿಕ ಸಾಕ್ಷ್ಯಾಧಾರಗಳ ಆಧಾರದ ಮೇಲೆ ತನಿಖೆ ನಡೆಸಿದಾಗ, ವಂಚನಾ ಜಾಲವು ಹೈದರಾಬಾದ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವುದು ಪತ್ತೆಯಾಗಿದೆ. ಮಂಗಳೂರು ಪೊಲೀಸರ ವಿಶೇಷ ತಂಡ ಹೈದರಾಬಾದ್‌ಗೆ ತೆರಳಿ 5 ಮಂದಿಯನ್ನು ಅಲ್ಲಿ ಬಂಧಿಸಿದ್ದು, ಮತ್ತೋರ್ವ ಆರೋಪಿಯನ್ನು ಮಂಗಳೂರಿನಲ್ಲಿ ವಶಕ್ಕೆ ಪಡೆದಿದೆ.ಪೊಲೀಸರು ಆರೋಪಿತರಿಂದ 18 ಮೊಬೈಲ್ ಫೋನ್‌ಗಳು, 1 ಲ್ಯಾಪ್‌ಟಾಪ್, 12 ಸಿಮ್ ಕಾರ್ಡ್‌ಗಳು, 15 ಚೆಕ್‌ಬುಕ್‌ಗಳು, 12 ಬ್ಯಾಂಕ್ ಪಾಸ್‌ಬುಕ್‌ಗಳು ಹಾಗೂ 18 ಡೆಬಿಟ್ ಕಾರ್ಡ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

    ಆರೋಪಿಗಳು ಸಾಮಾಜಿಕ ಜಾಲತಾಣಗಳ ಮೂಲಕ 4 ರಿಂದ 6 ಶೇಕಡಾ ಕಮೀಷನ್ ನೀಡುವುದಾಗಿ ಜಾಹೀರಾತು ನೀಡಿ, ಲಾಭದ ಆಸೆಗೆ ಒಳಗಾದ ವ್ಯಕ್ತಿಗಳಿಂದ ಬ್ಯಾಂಕ್ ಖಾತೆಗಳ ಸಂಪೂರ್ಣ ವಿವರಗಳು ಮತ್ತು ಓಟಿಪಿ ಪಡೆದು, ವಿದೇಶದಲ್ಲಿದ್ದ ಸೈಬರ್ ವಂಚಕರಿಗೆ ರವಾನಿಸುತ್ತಿದ್ದರು. ನಂತರ ಆ ಖಾತೆಗಳ ಮೂಲಕ ಹಣಕಾಸು ವಂಚನೆ ಮಾಡುತ್ತಿದ್ದರು.

    ತನಿಖೆಯ ವೇಳೆ ಒಟ್ಟು 72 ಬ್ಯಾಂಕ್ ಖಾತೆಗಳ ವಿವರಗಳು ಪತ್ತೆಯಾಗಿದ್ದು, ಅವುಗಳಲ್ಲಿ 30 ಖಾತೆಗಳ ಮೇಲೆ NCRP ಪೋರ್ಟಲ್‌ನಲ್ಲಿ 272 ಕ್ಕೂ ಹೆಚ್ಚು ದೂರುಗಳು ದಾಖಲಾಗಿರುವುದು ಕಂಡುಬಂದಿದೆ. 26-02-2026 ರಂದು ಒಂದೇ ದಿನ 2 ಕೋಟಿಗೂ ಅಧಿಕ ಹಣಕಾಸು ವ್ಯವಹಾರ ನಡೆದಿರುವುದು ಬೆಳಕಿಗೆ ಬಂದಿದೆ.ಪ್ರಕರಣಕ್ಕೆ ಸಂಬಂಧಿಸಿದ ಇತರೆ ಹಣಕಾಸು ವ್ಯವಹಾರಗಳ ಕುರಿತು ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.

    Post Views: 196

    Related Posts

    ನ್ಯಾಯಾಲಯಕ್ಕೆ ಹಾಜರಾಗದೆ ಆರು ವರ್ಷಗಳಿಂದ ಪರಾರಿಯಾಗಿದ್ದ ಆರೋಪಿ ವಶಕ್ಕೆ

    May 16, 2026

    ಕಾಪು: ಸ್ಕೂಟಿಗೆ ಬಸ್ ಡಿಕ್ಕಿ- ಬಾಲಕಿ ಸಾವು

    April 22, 2026

    ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ- ಮೆಸ್ಕಾಂ ಸಿಬ್ಬಂದಿ ಮೃತ್ಯು

    March 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026

    ಮಂಗಳೂರು : ಭಜನೆ ಮಾಡುತ್ತಲೇ ಕುಸಿದು ಬಿದ್ದ ಯುವಕ, ಹೃದಯಾಘಾತದಿಂದ ಸಾವು

    September 5, 2026

    ಕಾಸರಗೋಡು: ರಕ್ತದ ಮಡುವಿನಲ್ಲಿ ಕಾರ್ಮಿಕನ ಮೃತದೇಹ ಪತ್ತೆ- ಕೊಲೆ ಶಂಕಿಸಿ ತನಿಖೆ, ಇಬ್ಬರು ಪರಾರಿ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.