Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ರಸ್ತೆಯಲ್ಲಿ ಅಪಾಯಕಾರಿಯಾಗಿ ವೀಲಿಂಗ್- ಯುವಕ ಪೊಲೀಸರ ವಶಕ್ಕೆ
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ರಸ್ತೆಯಲ್ಲಿ ಅಪಾಯಕಾರಿಯಾಗಿ ವೀಲಿಂಗ್- ಯುವಕ ಪೊಲೀಸರ ವಶಕ್ಕೆ

    March 3, 2026
    Share

    ಬೆಳ್ತಂಗಡಿ: ಹಲವು ಸಮಯಗಳಿಂದ ಉಜಿರೆ-ಬೆಳ್ತಂಗಡಿಯ ರಸ್ತೆಗಳಲ್ಲಿ ವಿವಿಧ ಭಂಗಿಗಳಲ್ಲಿ ಅಪಾಯಕಾರಿ ಹಾಗೂ ನಿರ್ಲಕ್ಷ್ಯತನದಿಂದ ವೀಲಿಂಗ್ ರೀಲ್ಸ್ ಮಾಡಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುತ್ತಿದ್ದ ಯುವಕನನ್ನು ಬೆಳ್ತಂಗಡಿ ಸಂಚಾರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.


    ಬೆಳ್ತಂಗಡಿ ತಾಲೂಕಿನ ಉಜಿರೆ ಜಂಕ್ಷನ್ ರಸ್ತೆಯಲ್ಲಿ ಫೆ.8 ರಂದು ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಸಿಬ್ಬಂದಿ ಡ್ಯಾನಿ ಫ್ರಾನ್ಸಿಸ್ ತಾವ್ರೋ ಎಂಬವರು ಕರ್ತವ್ಯದ ವೇಳೆ ಹೆಲ್ಮೆಟ್ ಧರಿಸದೆ ಆಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ಸಾರ್ವಜನಿಕರಿಗೆ ಹಾಗೂ ಸಿಬ್ಬಂದಿಯ ಪ್ರಾಣಕ್ಕೆ ಹಾನಿಯಾಗುವಂತೆ ವೀಲಿಂಗ್ ಮಾಡಿಕೊಂಡು ಧರ್ಮಸ್ಥಳ ರಸ್ತೆಯ ಮೂಲಕ ಪರಾರಿಯಾಗಿದ್ದ ಬಗ್ಗೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ಘಟನೆಯ ವರದಿಯನ್ನು ಮಾಡಿದ್ದರು. ಬಳಿಕ ಈತ ವಿವಿಧ ಕಡೆಗಳಲ್ಲಿ ಅಪಾಯಕಾರಿಯಾಗಿ ವೀಲಿಂಗ್ ವಿಡಿಯೋಗಳನ್ನು ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿರುವ ವಿಡಿಯೋಗಳನ್ನು ಬೆಳ್ತಂಗಡಿ ಸಂಚಾರಿ ಪೊಲೀಸರಿಗೆ ಸಾರ್ವಜನಿಕರು ಮಾಹಿತಿ ನೀಡಿದ್ದರು ಅದ್ರೆ ಸವಾರ ಮಾತ್ರ ಪೊಲೀಸರ ಕೈಗೆ ಸಿಗುತ್ತಿರಲಿಲ್ಲ.

    ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಕಿಶೋರ್ ಕುಮಾರ್ ಪಿ ಅವರ ನೇತೃತ್ವದ ತಂಡ ಮಾ.೨ ರಂದು ಬೆಳ್ತಂಗಡಿ, ಉಜಿರೆ ಕಡೆ ಹುಡುಕಾಟ ನಡೆಸಿ ಸವಾರನ ಬಗ್ಗೆ ಮಾಹಿತಿದಾರರು ನೀಡಿದ ಖಚಿತ ಮಾಹಿತಿ ಮೇರೆಗೆ ಅಪಾಯಕಾರಿ ವೀಲಿಂಗ್ ಮಾಡುತ್ತಿದ್ದ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ನೂಜಿಲಾ ನಿವಾಸಿ ಬಾಸ್ಕರ ಗೌಡ ಎಂಬವರ ಪುತ್ರ ಸಂಪತ್(30) ಎಂಬಾತನನ್ನು ಪತ್ತೆ ಹಚ್ಚಿ ಆತ ವೀಲಿಂಗ್ ಮಾಡಲು ಬಳಸಿ ಕಪ್ಪು ಬಣ್ಣದ ಹಿಮಾಲಯನ್ KA-21-EE-1486 ನಂಬರಿನ ಬೈಕ್ ಸಮೇತ ವಶಕ್ಕೆ ಪಡೆದುಕೊಂಡು ಕಲಂ 281 BNS 184,189 IMV ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.


    ಬೆಳ್ತಂಗಡಿ ಉಪ ವಿಭಾಗದ ಡಿವೈಎಸ್ಪಿ ರೋಹಿಣಿ ಸಿ.ಕೆ. ಮತ್ತು ವೃತ್ತ ನಿರೀಕ್ಷಕ ರವಿ ಬಿ.ಎಸ್. ಮಾರ್ಗದರ್ಶನದಲ್ಲಿ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಕಿಶೋರ್ ಕುಮಾರ್ ಪಿ. ನೇತೃತ್ವದಲ್ಲಿ ಸಿಬ್ಬಂದಿ ಡ್ಯಾನಿ ಫ್ರಾನ್ಸಿಸ್ ತಾವ್ರೋ, ಇಬ್ರಾಹಿಂ, ಅಭಿಜಿತ್, ಹಿತೋಷ್, ಜಾವೀದ್ ಪಾಟೀಲ್, ಚಾಲಕ ಸತ್ಯಪ್ರಕಾಶ್ ಶೆಟ್ಟಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

    Post Views: 153

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.