Facebook Twitter Instagram
    Monday, September 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಹಾಡುಹಗಲೇ ಮನೆಗೆ ನುಗ್ಗಿ 10 ಲಕ್ಷ ರೂ. ದೋಚಿದ ಖದೀಮರು 
    ಇತ್ತೀಚಿನ ಸುದ್ದಿ

    ಹಾಡುಹಗಲೇ ಮನೆಗೆ ನುಗ್ಗಿ 10 ಲಕ್ಷ ರೂ. ದೋಚಿದ ಖದೀಮರು 

    March 9, 2026
    Share

    ಉಡುಪಿ ಜಿಲ್ಲೆಯ ಅಮಾಸೆಬೈಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳ್ಳರ ಹಾವಳಿ ಮಿತಿಮೀರಿದ್ದು, ಇದೀಗ ಹಾಡುಹಗಲೇ ಮನೆಯೊಂದಕ್ಕೆ ನುಗ್ಗಿದ ದುಷ್ಕರ್ಮಿಗಳು ಬರೋಬ್ಬರಿ 10 ಲಕ್ಷ ರೂಪಾಯಿ ನಗದು ದೋಚಿರುವ ಘಟನೆ ರವಿವಾರ ನಡೆದಿದೆ.

    ಅಮಾಸೆಬೈಲು ಸಮೀಪದ ಕೊಟ್ಟಕ್ಕಿ ನಿವಾಸಿ, ಆನಂದ ಪೂಜಾರಿಯವರು ಅಮಾಸೆಬೈಲು ಮಾರುಕಟ್ಟೆಯಲ್ಲಿ ದಿನಸಿ ಅಂಗಡಿ ಮತ್ತು ಕೋಳಿ ಫಾರಂ ನಡೆಸುತ್ತಿದ್ದು, ಅಡಿಕೆ ವ್ಯಾಪಾರದಲ್ಲೂ ತೊಡಗಿಸಿಕೊಂಡಿದ್ದಾರೆ. ಮಧ್ಯಾಹ್ನ 3 ರಿಂದ 4 ಗಂಟೆಯ ನಡುವಿನ ಅವಧಿಯಲ್ಲಿ, ಮನೆಯಲ್ಲಿ ಯಾರೂ ಇಲ್ಲದ ಸಮಯ ಸಾಧಿಸಿ ನುಗ್ಗಿದ ಕಳ್ಳರು ಕಪಾಟಿನ ಬಾಗಿಲು ಮುರಿದು ಒಳಗಿದ್ದ ಹಣವನ್ನು ದೋಚಿದ್ದಾರೆ.

    ಬಲ್ಲ ಮೂಲಗಳ ಪ್ರಕಾರ, ಕಳುವಾದ 10 ಲಕ್ಷ ರೂಪಾಯಿ ಮೊತ್ತವು ಆನಂದ ಪೂಜಾರಿಯವರು ಇತ್ತೀಚೆಗಷ್ಟೇ ಅಡಿಕೆ ಮಾರಾಟ ಮಾಡಿ ತಂದಿದ್ದ ಹಣ ಎನ್ನಲಾಗಿದೆ. ಕಳ್ಳರಿಗೆ ಈ ಹಣದ ಬಗ್ಗೆ ಮೊದಲೇ ಮಾಹಿತಿ ಇತ್ತೇ ಎಂಬ ಸಂಶಯವೂ ವ್ಯಕ್ತವಾಗಿದೆ.

    ಕಳ್ಳರು ಅತ್ಯಂತ ಚಾಲಾಕಿತನದಿಂದ ವರ್ತಿಸಿದ್ದು, ಮನೆಯಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ತಮ್ಮ ಗುರುತು ಪತ್ತೆಯಾಗಬಾರದೆಂಬ ಉದ್ದೇಶದಿಂದ ಸಿಸಿಟಿವಿ ಡಿವಿಆರ್ ಅನ್ನು ಕೂಡ ಕಿತ್ತುಕೊಂಡು ಪರಾರಿಯಾಗಿದ್ದಾರೆ.

    ವಿಷಯ ತಿಳಿಯುತ್ತಿದ್ದಂತೆಯೇ ಅಮಾಸೆಬೈಲು ಪೊಲೀಸರು ಸ್ಥಳಕ್ಕೆ ಧಾವಿಸಿ ಮಹಜರು ನಡೆಸಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದ್ದು, ಶ್ವಾನದಳ ಮತ್ತು ಬೆರಳಚ್ಚು ತಜ್ಞರ ನೆರವಿನೊಂದಿಗೆ ತನಿಖೆ ಚುರುಕುಗೊಳಿಸಲಾಗಿದೆ.

    Post Views: 178

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.