Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಬಸ್‌ನಲ್ಲಿ ಚಿನ್ನಾಭರಣ ಕಳವು ಮಾಡಿದ್ದ ಅಂತಾರಾಜ್ಯ ಕಳ್ಳನ ಬಂಧನ- 20 ಲಕ್ಷ ರೂ. ಮೌಲ್ಯದ ಸ್ವತ್ತು ವಶ
    ಇತ್ತೀಚಿನ ಸುದ್ದಿ

    ಬಂಟ್ವಾಳ: ಬಸ್‌ನಲ್ಲಿ ಚಿನ್ನಾಭರಣ ಕಳವು ಮಾಡಿದ್ದ ಅಂತಾರಾಜ್ಯ ಕಳ್ಳನ ಬಂಧನ- 20 ಲಕ್ಷ ರೂ. ಮೌಲ್ಯದ ಸ್ವತ್ತು ವಶ

    March 10, 2026
    Share

    ಬಂಟ್ವಾಳ: ಚಲಿಸುವ ಬಸ್‌ನಲ್ಲಿ ಬ್ಯಾಗ್ ಒಳಗಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳನನ್ನು ಬಂಧಿಸುವಲ್ಲಿ ಬಂಟ್ವಾಳ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ.
    ಬಂಧಿತ ಆರೋಪಿಯನ್ನು ಮಧ್ಯಪ್ರದೇಶ ರಾಜ್ಯದ ಧಾರಾ ಜಿಲ್ಲೆಯ ನಿವಾಸಿ ಸಮದ್ ಖಾನ್ (37) ಎಂದು ಗುರುತಿಸಲಾಗಿದೆ. ಈತನಿಂದ ಸುಮಾರು 20 ಲಕ್ಷ ರೂಪಾಯಿ ಮೌಲ್ಯದ 174 ಗ್ರಾಂ ತೂಕದ ಚಿನ್ನಾಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

    ಕಳೆದ ನವೆಂಬರ್ 19, 2025 ರಂದು ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಕಳವು ನಡೆದಿತ್ತು. ಪ್ರಯಾಣಿಕರೊಬ್ಬರು ಬಸ್‌ನಲ್ಲಿ ಬ್ಯಾಗ್ ಒಳಗೆ ಇರಿಸಿದ್ದ ಅಂದಾಜು 170 ರಿಂದ 180 ಗ್ರಾಂ ಚಿನ್ನಾಭರಣಗಳನ್ನು ಆರೋಪಿಯು ಚಾಣಾಕ್ಷತನದಿಂದ ಕಳವು ಮಾಡಿದ್ದನು. ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

    ಪ್ರಕರಣದ ಗಂಭೀರತೆ ಅರಿತ ಪೊಲೀಸರು ತನಿಖೆ ಚುರುಕುಗೊಳಿಸಿ, ತಾಂತ್ರಿಕ ಮಾಹಿತಿ ಹಾಗೂ ಖಚಿತ ಮೇರೆಗೆ ಆರೋಪಿಯನ್ನು ದಸ್ತಗಿರಿ ಮಾಡಿದ್ದಾರೆ. ಬಂಧಿತನಿಂದ ಕಳವು ಮಾಡಲಾಗಿದ್ದ ಪೂರ್ತಿ ಚಿನ್ನಾಭರಣಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
    ಅಂತಾರಾಜ್ಯ ಕಳ್ಳನ ಪತ್ತೆಯಾದ ಬೆನ್ನಲ್ಲೇ ಈತ ಇನ್ನುಳಿದ ಕಡೆಗಳಲ್ಲಿ ನಡೆಸಿರುವ ಕೃತ್ಯಗಳ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    Post Views: 96

    Related Posts

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026

    ರಾತ್ರಿ ವೇಳೆ ದೇವಾಲಯ ಪ್ರವೇಶಿಸಿದ ವ್ಯಕ್ತಿಯಿಂದ ವಿಗ್ರಹ ಧ್ವಂಸ

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.