Facebook Twitter Instagram
    Friday, July 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ನಾಪತ್ತೆಯಾಗಿದ್ದ ಯುವಕನ ಮೃತದೇಹ ಕೆರೆಯಲ್ಲಿ ಪತ್ತೆ
    ಇತ್ತೀಚಿನ ಸುದ್ದಿ

    ಮಂಗಳೂರು: ನಾಪತ್ತೆಯಾಗಿದ್ದ ಯುವಕನ ಮೃತದೇಹ ಕೆರೆಯಲ್ಲಿ ಪತ್ತೆ

    March 11, 2026
    Share

    ಮಂಗಳೂರು: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನೊಬ್ಬನ ಶವ ಕೊಣಾಜೆ ಠಾಣಾ ವ್ಯಾಪ್ತಿಯ ಸೋಮೇಶ್ವರ ಕೆರೆಯಲ್ಲಿ ಇಂದು ಬೆಳಿಗ್ಗೆ ಪತ್ತೆಯಾಗಿದೆ.

    ಕೊಣಾಜೆ ಗ್ರಾಮ ಮುಚ್ಚಿಲಕೋಡಿ ಮನೆ ನಿವಾಸಿ ದಿನೇಶ್ ಶೆಟ್ಟಿಗಾರ್ ಎಂಬವರ ಪುತ್ರ ವಿವೇಕ್ ಶೆಟ್ಟಿಗಾರ್ (32) ಮೃತ ಯುವಕ. ವಿವೇಕ್ ಶೆಟ್ಟಿಗಾರ್ ಅವರು ಮಂಗಳೂರಿನ ಕದ್ರಿ ಬಳಿ ಇರುವ ವೇದ ಮೊರ್ಟಾಸ್ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ಪ್ರತಿದಿನ ಬೆಳಿಗ್ಗೆ 11 ಗಂಟೆಗೆ ಕೆಲಸಕ್ಕೆ ತೆರಳಿ ರಾತ್ರಿ 9 ಗಂಟೆಗೆ ಮನೆಗೆ ವಾಪಸ್ಸಾಗುತ್ತಿದ್ದರು.

    ಅದರಂತೆ ಮಾರ್ಚ್ 9ರಂದು ಬೆಳಿಗ್ಗೆ 11 ಗಂಟೆಗೆ ಕೆಲಸಕ್ಕೆ ತೆರಳಿದ್ದ ವಿವೇಕ್ ರಾತ್ರಿ ಸುಮಾರು 9.30ಕ್ಕೆ ತಾಯಿಗೆ ದೂರವಾಣಿ ಕರೆ ಮಾಡಿ ದೇವಸ್ಥಾನಕ್ಕೆ ಹೋಗುತ್ತಿರುವುದಾಗಿ ತಿಳಿಸಿದ್ದರು. ರಾತ್ರಿ 12 ಗಂಟೆಯಾದರೂ ಮನೆಗೆ ವಾಪಸ್ಸಾಗದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಅವರ ಮೊಬೈಲ್‌ಗೆ ಕರೆ ಮಾಡಿದರೂ ಅವರು ಕರೆ ಸ್ವೀಕರಿಸಿಲ್ಲ. 

    ಮರುದಿನ ಮಾರ್ಚ್ 10ರಂದು ಕೂಡ ಮೊಬೈಲ್‌ಗೆ ಕರೆ ಮಾಡಿದಾಗ ಸಂಪರ್ಕಕ್ಕೆ ಸಿಕ್ಕಿಲ್ಲ. ಈ ಬಗ್ಗೆ ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಅವರ ಶವ ಸೋಮೇಶ್ವರ ಕೆರೆಯಲ್ಲಿ ಪತ್ತೆಯಾಗಿದೆ. ನಾಪತ್ತೆಯಾದ ದಿನವೇ ವಿವೇಕ್ ತಮ್ಮ ಸ್ಕೂಟರನ್ನು ಸೋಮೇಶ್ವರ ರಥದ ಕೊಠಡಿ ಸಮೀಪ ನಿಲ್ಲಿಸಿದ್ದು ಕಂಡುಬOದಿದೆ.

    ಅಲ್ಲಿಯೇ ಅವರ ಮೊಬೈಲ್ ಫೋನ್ ಹಾಗೂ ಚಪ್ಪಲಿಗಳನ್ನು ಇಟ್ಟು ನಾಪತ್ತೆಯಾಗಿದ್ದರು.  ವಿವೇಕ್ ಶೆಟ್ಟಿಗಾರ್ ಅವರು ಸುಮಾರು ಎಂಟು ತಿಂಗಳ ಹಿಂದೆ ತಮ್ಮ ಪತ್ನಿಗೆ ವಿಚ್ಛೇದನ ನೀಡಿದ್ದರು. 

    Post Views: 147

    Related Posts

    AI ಬಳಸಿ 121 ನಕಲಿ ಬ್ಯಾಂಕಿಂಗ್ ಆ್ಯಪ್ ತಯಾರಿ : 17 ವರ್ಷದ ಬಾಲಕನಿಂದ ₹64.38 ಕೋಟಿ ವಂಚನೆ!!

    July 23, 2026

    ಪುತ್ತೂರು: ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ- ಅತ್ತೆ, ಮಾವ, ನಾದಿನಿ ಅರೆಸ್ಟ್

    July 23, 2026

    ಉಡುಪಿ: ಗಾಂಜಾ ಮಾರಾಟ: 625.83 ಗ್ರಾಂ ಗಾಂಜಾ ಸಹಿತ ಆರೋಪಿ ಬಂಧನ

    July 23, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    AI ಬಳಸಿ 121 ನಕಲಿ ಬ್ಯಾಂಕಿಂಗ್ ಆ್ಯಪ್ ತಯಾರಿ : 17 ವರ್ಷದ ಬಾಲಕನಿಂದ ₹64.38 ಕೋಟಿ ವಂಚನೆ!!

    July 23, 2026

    ಪುತ್ತೂರು: ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ- ಅತ್ತೆ, ಮಾವ, ನಾದಿನಿ ಅರೆಸ್ಟ್

    July 23, 2026

    ಉಡುಪಿ: ಗಾಂಜಾ ಮಾರಾಟ: 625.83 ಗ್ರಾಂ ಗಾಂಜಾ ಸಹಿತ ಆರೋಪಿ ಬಂಧನ

    July 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.