ಕಾಸರಗೋಡು:ಕಾಸರಗೋಡು-ಕಾಂಞಗಾಡು ಮಧ್ಯೆ ಹಾದು ಹೋಗುವ ರೈಲ್ವೇ ಹಳಿಗಳಲ್ಲಿ ಕಾಂಕ್ರೀಟ್ ಒಳಗೊಂಡ ಕಬ್ಬಿಣದ ಬೀಮ್ ಇಟ್ಟು ಹಳಿ ತಪ್ಪಿಸಲು ಯತ್ನಿಸಲಾಗಿದೆ ಎಂದು ವರದಿಯಾಗಿತ್ತು.
ಇದೀಗ ಪ್ರಕರಣವನ್ನು ಬೇಧಿಸುವಲ್ಲಿ ಪೊಲೀಸರು ಯಶ್ವಿಯಾಗಿದ್ದಾರೆ. ಈ ಘಟನೆಗೆ ಸಂಬಂಧಿಸಿ ಬೇಕಲದ ಕ್ವಾಟರ್ಸ್‌ವೊಂದರಲ್ಲಿ ವಾಸವಾಗಿರುವ ತಮಿಳುನಾಡು ವಿಲ್ಲಾಪುರದ ಕನಕವಳ್ಳಿ (22) ಎಂಬಾಕೆಯನ್ನು ಪೊಲೀಸರು ಬಂಧಿಸಿ ವಿಚಾರಿಸಿದ್ದಾರೆ.
ಗುಜುರಿ ಹೆಕ್ಕುವ ಕೆಲಸ ಮಾಡುತ್ತಿದ್ದ ಈಕೆ ಸಿಮೆಂಟ್ ಒಳಗೊಂಡ ಕಬ್ಬಿಣದ ಸರಳುಗಳನ್ನು ರೈಲು ಹಳಿಯಲ್ಲಿಟ್ಟು ಸರಳಿನಿಂದ ಸಿಮೆಂಟ್ ಬೇರ್ಪಡಿಸಲು ಉದ್ದೇಶಿಸಿದ್ದಳು ಎಂದು ತನಿಖೆಯಲ್ಲಿ ತಿಳಿದುಬಂದಿದೆ.
ಹಳಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಈಕೆಯನ್ನು ಗಮನಿಸಿದ ಪೊಲೀಸರು ವಿಚಾರಣೆ ನಡೆಸಿದಾಗ ಕೃತ್ಯ ಬೆಳಕಿಗೆಬಂದಿದೆ. ಆ.21ರಂದು ಕಾಸರಗೋಡು-ಕಾಂಞಗಾಡು ಮಧ್ಯೆ ಹಾದು ಹೋಗುವ ಹಳಿಯಲ್ಲಿ ಬರುವ ಕೋಟಿಕುಳಂ-ಬೇಕಲ ನಡುವೆ ಮೊದಲು ಕಾಂಕ್ರೀಟ್ ಒಳಗೊಂಡ ಕಬ್ಬಿಣದ ಬೀಮ್ ಪತ್ತಯಾಗಿತ್ತು.ಬಳಿಕ ತೃಕ್ಕನ್ನಾಡ್ ದೇಗುಲದ ಹಿಂದೆ ರೈಲ್ವೆ ಹಳಿಗಳ ಮೇಲೆ ಕಬ್ಬಿಣದ ಸರಳುಗಳು ಮತ್ತು ಭೀಮ್ ಪತ್ತೆಯಾಗಿತ್ತು.