ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಏಪ್ರಿಲ್ 1, 2026 ರಿಂದ ಟೋಲ್ ದರಗಳನ್ನು ಪರಿಷ್ಕರಿಸಲಿದೆ. ಹಣದುಬ್ಬರ ಮತ್ತು ಸಗಟು ಬೆಲೆ ಸೂಚ್ಯಂಕದ ಆಧಾರದ ಮೇಲೆ ಈ ಏರಿಕೆ ಮಾಡಲಾಗುತ್ತಿದ್ದು, ವಾರ್ಷಿಕ ಪಾಸ್ ದರ ₹3,000 ದಿಂದ ₹3,075 ಕ್ಕೆ ಏರಿಕೆಯಾಗುವ ಸಾಧ್ಯತೆಯಿದೆ. ಇದು ಮುಖ್ಯವಾಗಿ ಫಾಸ್ಟ್ಯಾಗ್ ಹೊಂದಿರುವ ಖಾಸಗಿ ವಾಹನ ಸವಾರರಿಗೆ ಅನ್ವಯಿಸಲಿದೆ. ರಾಜ್ಯದ 66 ಟೋಲ್ ಪ್ಲಾಜಾಗಳಲ್ಲಿ ಶೇ. 3 ರಿಂದ 5% ರಷ್ಟು ದರ ಏರಿಕೆಯಾಗುವ ನಿರೀಕ್ಷೆಯಿದೆ. ಫಾಸ್ಟ್ಯಾಗ್ ಬ್ಲಾಕ್‌ಲಿಸ್ಟ್ ಆಗುವುದನ್ನು ತಪ್ಪಿಸಲು KYC ಅಪ್‌ಡೇಟ್ ಮಾಡುವುದು ಕಡ್ಡಾಯವಾಗಿದೆ.



