Facebook Twitter Instagram
    Monday, September 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಡಬ: ಮಾರ್ಚ್ 31ರೊಳಗೆ ಇ-ಆಟೋಗಳ ಪರವಾನಿಗೆಗೆ ಅರ್ಜಿ ಸಲ್ಲಿಸಿ: ಜಿಲ್ಲಾಧಿಕಾರಿ ದರ್ಶನ್
    ಇತ್ತೀಚಿನ ಸುದ್ದಿ

    ಕಡಬ: ಮಾರ್ಚ್ 31ರೊಳಗೆ ಇ-ಆಟೋಗಳ ಪರವಾನಿಗೆಗೆ ಅರ್ಜಿ ಸಲ್ಲಿಸಿ: ಜಿಲ್ಲಾಧಿಕಾರಿ ದರ್ಶನ್

    March 15, 2026
    Share

    ಕಡಬ: ಪರವಾನಿಗೆ ಪಡೆಯಲು ಇಚ್ಚಿಸುವ ಎಲ್ಲಾ ಇಲೆಕ್ಟಿಕ್ ಆಟೋ (ಇ- ಅಟೋ) ರಿಕ್ಷಾ ಚಾಲಕ, ಮಾಲಕರು ಮಾರ್ಚ್ 31ರೊಳಗೆ ಪ್ರಾದೇಶಿಕ ಸಾರಿಗೆ ಕಚೇರಿಗೆ ಅರ್ಜಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ದರ್ಶನ್ ಎ ತಿಳಿಸಿದ್ದಾರೆ. ಪಡೀಲ್‌ ನ ಪ್ರಜಾಸೌಧದಲ್ಲಿ ಶುಕ್ರವಾರ ಆಟೋ ರಿಕ್ಷಾ ಸಂಘದ ಬೇಡಿಕೆಗಳು, ಇ-ಆಟೋ ರಿಕ್ಷಾಗಳಿಗೆ ಪರವಾನಿಗೆ ಕುರಿತಂತೆ ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

    ಆರ್‌ಟಿಒ ಅಂಕಿ ಅಂಶಗಳ ಪ್ರಕಾರ ಇ ಆಟೋ ರಿಕ್ಷಾಗಳಿಂದ ಈವರೆಗೆ ಕೇವಲ 250 ಅರ್ಜಿಗಳು ಮಾತ್ರವೇ ಬಂದಿವೆ. ಸುಮಾರು 3000ದಷ್ಟು ಇ ಆಟೋಗಳು ಸಂಚರಿಸುತ್ತಿದ್ದು, ರಾಜ್ಯ ಸರಕಾರ ಈಗಾಗಲೇ ವಾಣಿಜ್ಯ ಬಳಕೆಯ ಇ-ಆಟೋ ರಿಕ್ಷಾಗಳಿಗೆ ಪರವಾನಿಗೆಯನ್ನು ಕಡ್ಡಾಯಗೊಳಿಸಿದೆ. 2025ರ ಮೊದಲು ನೋಂದಣಿ ಆಗಿರುವ ಎಲ್ಲಾ ಇ ಆಟೋ ರಿಕ್ಷಾಗಳು ಪರವಾನಿಗೆಗೆ ಅರ್ಜಿ ಸಲ್ಲಿಸಬೇಕು ಎಂದು ಅವರು ಹೇಳಿದರು.

    ಸಭೆಯಲ್ಲಿ ವಿವಿಧ ಆಟೋ ರಿಕ್ಷಾ ಚಾಲಕ ಮಾಲಕರ ಸಂಘದ ಪ್ರತಿನಿಧಿಗಳು ಮಾತನಾಡಿ, ಪರವಾನಿಗೆಗೆ ಅರ್ಜಿ ಸಲ್ಲಿಕೆ ವೇಳೆ ಮಂಗಳೂರು ನಗರ ಪಾಲಿಕೆ ವ್ಯಾಪ್ತಿಯಲ್ಲಿ ಕನಿಷ್ಠ ಐದು ವರ್ಷಗಳ ವಾಸ್ತವ್ಯವನ್ನು ತೋರಿಸುವ ನಿವಾಸ ಪ್ರಮಾಣಪತ್ರವನ್ನು ಸಲ್ಲಿಸಬೇಕೆಂಬ ನಿಯಮವನ್ನು ಜಿಲ್ಲಾಡಳಿತ ಕಡ್ಡಾಯಗೊಳಿಸಿದೆ. ಆದರೆ ಬಹುತೇಕ ಆಟೋ ಚಾಲಕರು ಬಾಡಿಗೆ ಮನೆಗಳಲ್ಲಿ ವಾಸಿಸುತ್ತಿದ್ದಾರೆ. ಮನೆ ಮಾಲೀಕರು ಐದು ವರ್ಷಗಳ ಕಾಲ ನಿವಾಸ ಪ್ರಮಾಣಪತ್ರಗಳನ್ನು ನೀಡುವುದಿಲ್ಲ. ಇದರಿಂದ ತೊಂದರೆಯಾಗುತ್ತಿದೆ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ, ಮನೆ ಮಾಲೀಕರಿಂದ ನಿವಾಸ ಪ್ರಮಾಣಪತ್ರವನ್ನು ಪಡೆಯಬೇಕಾಗಿಲ್ಲ. ಅರ್ಜಿದಾರರು ಮಂಗಳೂರು ನಗರ ವ್ಯಾಪ್ತಿಯಲ್ಲಿ ಕನಿಷ್ಠ ಐದು ವರ್ಷಗಳಿಂದ ವಾಸ್ತವ್ಯವನ್ನು ಸಾಬೀತುಪಡಿಸಲು ಎಲ್‌ಪಿಜಿ ಸಿಲಿಂಡರ್ ಖರೀದಿ ಅಥವಾ ವಿದ್ಯುತ್ ಬಿಲ್‌ಗಳಂತಹ ದಾಖಲೆಗಳನ್ನು ಸಹ ಸಲ್ಲಿಸಬಹುದು ಎಂದರು.

    Post Views: 253

    Related Posts

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.