Facebook Twitter Instagram
    Monday, September 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುಳ್ಯ: ಪದೇ ಪದೇ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದ ಯುವಕನಿಗೆ ‘ವಿಶಿಷ್ಟ ಶಿಕ್ಷೆ’ ನೀಡಿದ ಕೋರ್ಟ್ !
    ಇತ್ತೀಚಿನ ಸುದ್ದಿ

    ಸುಳ್ಯ: ಪದೇ ಪದೇ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದ ಯುವಕನಿಗೆ ‘ವಿಶಿಷ್ಟ ಶಿಕ್ಷೆ’ ನೀಡಿದ ಕೋರ್ಟ್ !

    March 16, 2026
    Share

    ಸುಳ್ಯ : ಸಂಚಾರ ನಿಯಮಗಳನ್ನು ಪದೇ ಪದೇ ಉಲ್ಲಂಘಿಸುವವರಿಗೆ ದಂಡ ಪಾವತಿಸುವುದು ಸುಲಭದ ಕೆಲಸವಾಗಿಬಿಟ್ಟಿದೆ. ಆದರೆ, ಸುಳ್ಯದ ನ್ಯಾಯಾಲಯವು ಸಂಚಾರ ನಿಯಮ ಪದೇ ಪದೆೇ ಉಲ್ಲಂಘಿಸಿದ ಯುವಕನಿಗೆ ದಂಡದ ಜೊತೆ ಸಮುದಾಯ ಸೇವೆ ಮಾಡುವಂತೆ ಅಪರೂಪದ ಶಿಕ್ಷೆ ವಿಧಿಸಿ ಆದೇಶಿಸಿದೆ.

    ಸುಳ್ಯ ನಿವಾಸಿ ರಕ್ಷಿತ್ ಎಂಬಾತ ಹಲವು ಬಾರಿ ಸಂಚಾರ ನಿಯಮಗಳನ್ನು ಉಲ್ಲಂಘಿಸುತ್ತಿದ್ದ. ಈತನ ವಿರುದ್ಧ ಸುಳ್ಯ ಪೊಲೀಸ್ ಉಪ ನಿರೀಕ್ಷಕ ಸಂತೋಷ್ ಬಿ.ಪಿ. ಅವರು ಐಎಂವಿ ಕಾಯ್ದೆಯಡಿ ಮೂರು ಪ್ರತ್ಯೇಕ ಚಾರ್ಜ್ ಶೀಟ್ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಸುಳ್ಯದ ಜೆಎಂಎಫ್‌ಸಿ ನ್ಯಾಯಾಲಯವು ಈಗ ಕಠಿಣ ಮತ್ತು ಅರ್ಥಪೂರ್ಣ ಶಿಕ್ಷೆ ನೀಡಿದೆ.

    ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಗೆ ಎರಡು ಪ್ರಕರಣಗಳಲ್ಲಿ ಒಟ್ಟು 3,000 ರೂ. ದಂಡ ವಿಧಿಸಿದೆ. ಅಲ್ಲದೇ, ನ್ಯಾಯಾಲಯವು ಆರೋಪಿಗೆ ಮೂರೂ ಪ್ರಕರಣಗಳಲ್ಲಿಯೂ ತಲಾ ಐದು ದಿನಗಳಂತೆ ಒಟ್ಟು 15 ದಿನಗಳ ಕಾಲ ಸಮುದಾಯ ಸೇವೆ ಸಲ್ಲಿಸುವಂತೆ ಆದೇಶಿಸಿದೆ. ಮಾರ್ಚ್ 15 ರಿಂದ ಮಾರ್ಚ್ 29 ರವರೆಗೆ ಒಟ್ಟು 15 ದಿನಗಳ ಕಾಲ ಸುಳ್ಯ ಪೇಟೆಯ ಜಂಕ್ಷನ್‌ಗಳಲ್ಲಿ ಸಂಚಾರ ನಿಯಮಗಳ ಫಲಕ ಹಿಡಿದು ಸಾರ್ವಜನಿಕರಿಗೆ ಅರಿವು ಮೂಡಿಸಬೇಕು. ಅಲ್ಲದೆ ಆರೋಪಿಯ ಚಾಲನಾ ಪರವಾನಿಗೆಯನ್ನು (DL) 3 ತಿಂಗಳ ಕಾಲ ಅಮಾನತಿನಲ್ಲಿಡಲು ಆದೇಶಿಸಲಾಗಿದೆ.

    ನ್ಯಾಯಾಲಯದ ಆದೇಶದಂತೆ ರಕ್ಷಿತ್ ಈಗ ಸುಳ್ಯ ಪೇಟೆಯಲ್ಲಿ ಸಂಚಾರ ಸುಗಮಗೊಳಿಸುವ ಕೆಲಸದಲ್ಲಿ ಪೊಲೀಸರಿಗೆ ಸಾಥ್ ನೀಡುತ್ತಿದ್ದಾನೆ. ತಪ್ಪು ಮಾಡಿದವರಿಗೆ ಕೇವಲ ಹಣದ ದಂಡ ಹಾಕುವ ಬದಲು, ಈ ರೀತಿ ಸಾರ್ವಜನಿಕ ಸೇವೆಯ ಶಿಕ್ಷೆ ನೀಡುವುದರಿಂದ ಇತರರಿಗೂ ಕಾನೂನು ಪಾಲನೆಯ ಪಾಠ ಸಿಗಲಿದೆ ಎಂದು ಸಾರ್ವಜನಿಕರು ಶ್ಲಾಘಿಸಿದ್ದಾರೆ.

    Post Views: 168

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.