ಬಂಟ್ವಾಳ: ಸುಮಾರು ಎಂಟು ವರ್ಷಗಳಿಂದ ಪೊಲೀಸರಿಗೆ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅಪರಾಧ ಸಂಖ್ಯೆ 166/2017 ರ ಪ್ರಕರಣಕ್ಕೆ ಸಂಬಂಧಿಸಿ, ಐಪಿಸಿ ಕಲಂ 379 ಹಾಗೂ 34 ಅಡಿ ಆರೋಪಿಯಾಗಿದ್ದ ಕೇರಳದ ಮಲಪ್ಪುರಂ ಜಿಲ್ಲೆಯ ನಿವಾಸಿ ಮೊಹಮ್ಮದ್ ಅನಾಸ್ (38) ಎಂಬಾತನು ಹಲವು ವರ್ಷಗಳಿಂದ ಪೊಲೀಸರಿಂದ ತಪ್ಪಿಸಿಕೊಂಡು ತಲೆಮರೆಸಿಕೊಂಡಿದ್ದನು.
ಪೊಲೀಸರ ಮಾಹಿತಿ ಸಂಗ್ರಹದ ಆಧಾರದ ಮೇಲೆ ದಿನಾಂಕ 16-03-2026 ರಂದು ಬಂಟ್ವಾಳ ಗ್ರಾಮಾಂತರ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಕೃಷ್ಣಕಾಂತ ಕೆ ಅವರ ನೇತೃತ್ವದಲ್ಲಿ ಹೆಡ್ ಕಾನ್ಸ್‌ಟೇಬಲ್ 314 ಸಂತೋಷ್ ಹಾಗೂ ಪಿಸಿ 2462 ಶಿವಾನಂದ ಮಡ್ಡಿ ಅವರು ತಮಿಳುನಾಡಿನ ಕೊಯಂಬತ್ತೂರು ಜಿಲ್ಲೆಯ ಪೊಳಚಿ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ನಂತರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.




