Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು:ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
    ಇತ್ತೀಚಿನ ಸುದ್ದಿ

    ಮಂಗಳೂರು:ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

    March 21, 2026
    Share

    ಮಂಗಳೂರು: ಹಲವು ಗಂಭೀರ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದು, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ನಗರ ಪೊಲೀಸ್ ಕಮಿಷನರೇಟ್‌ನ ಸಿಸಿಬಿ (CCB) ಪೊಲೀಸರು ಬಂಧಿಸಿದ್ದಾರೆ.

    ಬಂಧಿತನನ್ನು ಫರಾಜ್ @ ಮೊಹಮ್ಮದ್ ಫರಾಜ್ (32) ಎಂದು ಗುರುತಿಸಲಾಗಿದೆ. ಈತ ಮಂಗಳೂರು ದೇರಳಕಟ್ಟೆ ಸಮೀಪದ ಮದನಿನಗರದ ನಿವಾಸಿಯಾಗಿದ್ದಾನೆ.

    ಪೊಲೀಸರ ಮಾಹಿತಿ ಪ್ರಕಾರ, ಆರೋಪಿಯ ವಿರುದ್ಧ ಮಂಗಳೂರು ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ದರೋಡೆ, ಕೊಲೆಯತ್ನ, ಮಾದಕ ವಸ್ತು ಮಾರಾಟ, ಕಳವು ಸೇರಿದಂತೆ ಹಾಗೂ ಕಾರಾಗೃಹದಲ್ಲಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆ ನಡೆಸಿದ ಪ್ರಕರಣಗಳು ಸೇರಿ ಒಟ್ಟು ಸುಮಾರು 10 ಪ್ರಕರಣಗಳು ದಾಖಲಾಗಿವೆ. ನ್ಯಾಯಾಲಯದಿಂದ ಜಾಮೀನಿನ ಮೇಲೆ ಬಿಡುಗಡೆಯಾದ ಬಳಿಕ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದನು.

    ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ, ದರೋಡೆ, ಹಲ್ಲೆ, ಕಳವು ಸೇರಿದಂತೆ 4 ಪ್ರಕರಣಗಳು, ಕೊಣಾಜೆ ಠಾಣೆಯಲ್ಲಿ ಹಲ್ಲೆ, ಬೆದರಿಕೆ, ಕಳವು ಸೇರಿ 2 ಪ್ರಕರಣಗಳು, ಉತ್ತರ ಠಾಣೆಯಲ್ಲಿ ಹಲ್ಲೆ, ಬೆದರಿಕೆ, ಅಪಹರಣ ಮತ್ತು ದರೋಡೆಗೆ ಸಂಬಂಧಿಸಿದ 2 ಪ್ರಕರಣಗಳು ದಾಖಲಾಗಿವೆ. ಬರ್ಕೆ ಠಾಣೆಯಲ್ಲಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿ ಕೊಲೆಯತ್ನ ಪ್ರಕರಣ ಮತ್ತು ಉರ್ವ ಠಾಣೆಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣವೂ ದಾಖಲಾಗಿದೆ.

    ಆರೋಪಿ ಉಳ್ಳಾಲ ಪೊಲೀಸ್ ಠಾಣೆಯ ರೌಡಿಶೀಟರ್ ಆಗಿದ್ದು, ಈತನ ವಿರುದ್ಧ ಪ್ರಸ್ತುತ 6 ವಾರಂಟ್‌ಗಳು ಹಾಗೂ 1 ಪ್ರೊಕ್ಲಮೇಶನ್ ಜಾರಿಯಲ್ಲಿದೆ. ಬಂಧಿತನನ್ನು ಮುಂದಿನ ಕಾನೂನು ಕ್ರಮಕ್ಕಾಗಿ ಉರ್ವ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.ಆರೋಪಿಯನ್ನು ಪತ್ತೆಹಚ್ಚುವ ಕಾರ್ಯದಲ್ಲಿ ಸಿಸಿಬಿ ಘಟಕದ ಅಧಿಕಾರಿಗಳು ಮತ್ತು ಸಿಬ್ಬಂದಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಪೋಲಿಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Post Views: 127

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.