Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ನಿಷೇಧಿತ ಎಂಡಿಎಂಎ ಮಾರಾಟ; ಮೂವರು ಆರೋಪಿಗಳ ಬಂಧನ
    ಇತ್ತೀಚಿನ ಸುದ್ದಿ

    ಮಂಗಳೂರು: ನಿಷೇಧಿತ ಎಂಡಿಎಂಎ ಮಾರಾಟ; ಮೂವರು ಆರೋಪಿಗಳ ಬಂಧನ

    March 23, 2026
    Share

    ಮಂಗಳೂರು ನಗರದಲ್ಲಿ ನಿಷೇಧಿತ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

    ಬಂಧಿತರಿಂದ ಲಕ್ಷಾಂತರ ಮೌಲ್ಯದ ಮಾದಕ ವಸ್ತು ಸೇರಿದಂತೆ ವಿವಿಧ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಪಂಪ್‌ವೆಲ್–ಎಕ್ಕೂರು ಪರಿಸರದಲ್ಲಿ ಆಟೋ ರಿಕ್ಷಾದ ಮೂಲಕ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಎಂಡಿಎಂಎ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ, ಸಿಸಿಬಿ ಪೊಲೀಸರು ಮಾರ್ಚ್ 22ರಂದು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದರು.

    ಬಂಧಿತರನ್ನು ಹೈದರ್ @ ಹೈದರ್ ಆಲಿ (53), ಮೊಹಮ್ಮದ್ ಸಜಾದ್ (29) ಹಾಗೂ ಜೈಸನ್ ಮೆನೆಜಸ್ (26) ಎಂದು ಗುರುತಿಸಲಾಗಿದೆ. ಬಂಧಿತರಿಂದ 2,50,000 ಮೌಲ್ಯದ 26 ಗ್ರಾಂ ಎಂಡಿಎಂಎ ಮಾದಕ ವಸ್ತು, ರೂ.37,000 ನಗದು, 5 ಮೊಬೈಲ್ ಫೋನ್‌ಗಳು, ತೂಕಮಾಪನ ಯಂತ್ರ ಹಾಗೂ KA-19-AC-2245 ಸಂಖ್ಯೆಯ ಆಟೋ ರಿಕ್ಷಾ ಸೇರಿದಂತೆ ಒಟ್ಟು ರೂ.4,37,500 ಮೌಲ್ಯದ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಕುರಿತು ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

      ಪ್ರಮುಖ ಆರೋಪಿಯಾದ ಹೈದರ್ ಅಲಿ ವಿರುದ್ಧ ಈ ಹಿಂದೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣ ಹಾಗೂ 2024ರಲ್ಲಿ ಮಾದಕ ವಸ್ತು ಮಾರಾಟದ ಪ್ರಕರಣ ದಾಖಲಾಗಿರುವುದಲ್ಲದೆ, ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಮಹಿಳೆಯ ಮೇಲೆ ಹಲ್ಲೆ ಮಾಡಿದ ಪ್ರಕರಣವೂ ದಾಖಲಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಈ ಮಾದಕ ವಸ್ತು ಸಾಗಾಟ ಮತ್ತು ಮಾರಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಉಳಿದ ಆರೋಪಿಗಳ ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

    Post Views: 101

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.