Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ಇಲ್ಲ : ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು
    ಇತ್ತೀಚಿನ ಸುದ್ದಿ

    ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ಇಲ್ಲ : ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು

    March 24, 2026
    Share

    ನವದೆಹಲಿ: ಬೇರೆ ಧರ್ಮಕ್ಕೆ ಮತಾಂತರಗೊಂಡವರಿಗೆ ಪರಿಶಿಷ್ಟ ಜಾತಿಯ (ಎಸ್‌ಸಿ) ಸ್ಥಾನಮಾನ ಅನ್ವಯವಾಗುವುದಿಲ್ಲ ಎಂಬ ಐತಿಹಾಸಿಕ ತೀರ್ಪನ್ನು ಸುಪ್ರೀಂ ಕೋರ್ಟ್‌ ಮಂಗಳವಾರ ನೀಡಿದೆ. ಹಿಂದೂ, ಸಿಖ್‌ ಅಥವಾ ಬೌದ್ಧ ಧರ್ಮದವರು ಎಸ್‌ಸಿ ಸೌಲಭ್ಯಕ್ಕೆ ಅರ್ಹರಾಗಿರುತ್ತಾರೆ. ಆದರೆ ಕ್ರೈಸ್ತ ಸೇರಿದಂತೆ ಬೇರೆ ಯಾವುದೇ ಧರ್ಮಕ್ಕೆ ಮತಾಂತರವಾದರೆ ಅವರು ಎಸ್‌ಸಿ ಸ್ಥಾನಮಾನ ಕಳೆದುಕೊಳ್ಳುತ್ತಾರೆ ಎಂದು ಭಾರಿ ಮಹತ್ವದ ತೀರ್ಪಿನಲ್ಲಿ ಹೇಳಲಾಗಿದೆ.

    ನ್ಯಾ. ಪಿ.ಕೆ.ಮಿಶ್ರಾ ಮತ್ತು ನ್ಯಾ.ಎನ್‌.ವಿ.ಅಂಜಾರಿಯ ಅವರನ್ನೊಳಗೊಂಡ ನ್ಯಾಯಪೀಠ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ವ್ಯಕ್ತಿಗೆ ಪರಿಶಿಷ್ಟ ಜಾತಿಯವರ ಸೌಲಭ್ಯಗಳನ್ನು ನೀಡಲು ಸಾಧ್ಯವಿಲ್ಲ ಎಂದು ತೀರ್ಪಿನಲ್ಲಿ ಸ್ಪಷ್ಟಪಡಿಸಿದೆ.

    ಆಂಧ್ರ ಪ್ರದೇಶದ ಹೈಕೋರ್ಟ್‌ ಕಳೆದ ವರ್ಷ ಮೇ ತಿಂಗಳಲ್ಲಿ ನೀಡಿದ ತೀರ್ಪಿನ ವಿರುದ್ಧ ಪಾದ್ರಿ ಚಿಂತಾಡ ಆನಂದ್‌ ಎಂಬವರು ಸಲ್ಲಿಸಿದ್ದ ಮೇಲ್ಮನವಿಯನ್ನು ವಿಚಾರಣೆಗೊಳಪಡಿಸಿ ನ್ಯಾಯಪೀಠ ಈ ತೀರ್ಪು ನೀಡಿದೆ. ಜಾತಿ ಆಧಾರಿತ ತಾರತಮ್ಯ ಮತ್ತು ನಿಂದನೆಯನ್ನು ಸಮಾಜದಲ್ಲಿ ಎದುರಿಸುತ್ತಿದ್ದೇನೆ ಎಂದು ಪಾದ್ರಿ ಚಿಂತಾಡ ಆನಂದ್‌ ಅರ್ಜಿಯಲ್ಲಿ ವಾದಿಸಿದ್ದರು.

    ಒಬ್ಬ ವ್ಯಕ್ತಿ ಕ್ರಿಶ್ಚಿಯನ್‌ ಧರ್ಮಕ್ಕೆ ಮತಾಂತರಗೊಂಡು ಆ ಧರ್ಮದ ಆಚಾರ ವಿಚಾರಗಳನ್ನು ಮತ್ತು ಸಂಪ್ರದಾಯವನ್ನು ಆಚರಿಸುತ್ತಿದ್ದರೆ ಅವನಿಗೆ ಪರಿಶಿಷ್ಟ ಜಾತಿಯ ಸ್ಥಾನಮಾನ ನೀಡಲು ಸಾಧ್ಯವಿಲ್ಲ ಎಂದು ಆಂಧ್ರ ಹೈಕೋರ್ಟ್‌ ತೀರ್ಪು ನೀಡಿತ್ತು. ಈ ತೀರ್ಪನ್ನು ಸುಪ್ರೀಂ ಕೋರ್ಟ್‌ ಎತ್ತಿ ಹಿಡಿದಿದೆ.

    1950ರ ಸಂವಿಧಾನ (ಪರಿಶಿಷ್ಟ ಜಾತಿ) ಇದನ್ನು ಸ್ಪಷ್ಟಪಡಿಸಿದೆ. ಈ ಆದೇಶದಲ್ಲಿರುವ ನಿರ್ಬಂಧಗಳು ಸ್ಪಷ್ಟವಾಗಿವೆ. 1950ರ ಆದೇಶದ ಕಲಂ 3ರಲ್ಲಿ ಹೇಳಿರುವಂತೆ ನಿರ್ದಿಷ್ಟಪಡಿಸದ ಯಾವುದೇ ಧರ್ಮಕ್ಕೆ ಮತಾಂತರಗೊಂಡರೆ ಜನನವನ್ನು ಲೆಕ್ಕಿಸದೆ ಪರಿಶಿಷ್ಟ ಜಾತಿಯ ಸ್ಥಾನಮಾನವನ್ನು ತಕ್ಷಣ ಕಳೆದುಕೊಳ್ಳಬೇಕಾಗುತ್ತದೆ ಎಂದು ಸುಪ್ರೀಂ ಕೋರ್ಟ್‌ ತನ್ನ ತೀರ್ಪಿನಲ್ಲಿ ಉಲ್ಲೇಖಿಸಿದೆ.

    Post Views: 232

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.