Facebook Twitter Instagram
    Monday, September 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಿಟ್ಲ: ತಲೆ ಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಕೇರಳದಲ್ಲಿ ಬಂಧಿಸಿದ ವಿಟ್ಲ ಪೊಲೀಸರು|
    ಇತ್ತೀಚಿನ ಸುದ್ದಿ

    ವಿಟ್ಲ: ತಲೆ ಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಕೇರಳದಲ್ಲಿ ಬಂಧಿಸಿದ ವಿಟ್ಲ ಪೊಲೀಸರು|

    March 25, 2026
    Share

    ವಿಟ್ಲ: ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ  ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ವಿಟ್ಲ ಪೊಲೀಸರು ಕೇರಳದ ಮಂಜೇಶ್ವರದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ಮಂಜೇಶ್ವರ ನಿವಾಸಿ ಮೊಹಮ್ಮದ್ ಫಯಾಜ್ (33) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. 2019ರಲ್ಲಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಫಯಾಜ್ ವಿರುದ್ಧ ಐಪಿಸಿ ಕಲಂ 323, 507, 353 ಹಾಗೂ 504 ರಡಿ (ಅ.ಕ್ರ ನಂ: 181/2019) ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ವಿಚಾರಣೆ ನ್ಯಾಯಾಲಯದಲ್ಲಿ ನಡೆಯುತ್ತಿದ್ದರೂ, ಆರೋಪಿಯು ಸುದೀರ್ಘ ಕಾಲದಿಂದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದನು. ಈ ಹಿನ್ನೆಲೆಯಲ್ಲಿ ನ್ಯಾಯಾಲಯವು ಆರೋಪಿಯ ವಿರುದ್ಧ ಬಂಧನ ವಾರಂಟ್ ಹೊರಡಿಸಿತ್ತು.

    ಆರೋಪಿಯು ಕೇರಳ ರಾಜ್ಯದ ಮಂಜೇಶ್ವರದ ಬಾಯಾರು ಪದವು ಎಂಬಲ್ಲಿ ಅಡಗಿರುವ ಬಗ್ಗೆ ವಿಟ್ಲ ಪೊಲೀಸರಿಗೆ ಖಚಿತ ಮಾಹಿತಿ ಲಭಿಸಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ವಿಟ್ಲ ಠಾಣೆಯ ಪೊಲೀಸರ ತಂಡವು ಮಂಜೇಶ್ವರಕ್ಕೆ ತೆರಳಿ ಆರೋಪಿಯನ್ನು ವಶಕ್ಕೆ ಪಡೆದಿದೆ. ಈ ಕಾರ್ಯಾಚರಣೆಯಲ್ಲಿ ಎಎಸ್‌ಐ ಜಯರಾಮ ಅವರಿಗೆ ಠಾಣಾ ಸಿಬ್ಬಂದಿಗಳಾದ ಶ್ರೀಕುಮಾರ್, ಗೋಪಾಲಕೃಷ್ಣ, ಮಾಯಪ್ಪ ಮತ್ತು ವೆಂಕಪ್ಪ ಅವರು ಸಾಥ್ ನೀಡಿದ್ದಾರೆ. ಬಂಧಿತ ಆರೋಪಿಯನ್ನು ಪೊಲೀಸರು ಇಂದು  ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

    Post Views: 172

    Related Posts

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.