Facebook Twitter Instagram
    Sunday, June 14
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಕೊಲೆ ಸೇರಿದಂತೆ ಹಲವು ಘೋರ ಅಪರಾಧ ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ಸುಳ್ಯದ ಆರೋಪಿ ಆಂಧ್ರದ ಜೈಲಿನಲ್ಲಿ ಪತ್ತೆ
    ಇತ್ತೀಚಿನ ಸುದ್ದಿ

    ಮಂಗಳೂರು: ಕೊಲೆ ಸೇರಿದಂತೆ ಹಲವು ಘೋರ ಅಪರಾಧ ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ಸುಳ್ಯದ ಆರೋಪಿ ಆಂಧ್ರದ ಜೈಲಿನಲ್ಲಿ ಪತ್ತೆ

    March 29, 2026
    Share

    ಮಂಗಳೂರು: ಕೊಲೆ ಸೇರಿದಂತೆ ಹಲವು ಘೋರ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ಕಳೆದ ಎಂಟು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ಪತ್ತೆಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಸುಳ್ಯ ಅಜ್ಜಾವರ ನಿವಾಸಿ ಎನ್.ಎಂ. ಅಝೀಝ್ ಎಂಬಾತನೇ ಪತ್ತೆಯಾದ ಆರೋಪಿ. ಈತ ಸದ್ಯ ಆಂಧ್ರಪ್ರದೇಶದ ಚಿತ್ತೂರು ಜೈಲಿನಲ್ಲಿರುವುದು ದೃಢಪಟ್ಟಿದೆ.

    ಕಡಬ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈತನಿಗೆ ಕರ್ನಾಟಕ ಉಚ್ಚ ನ್ಯಾಯಾಲಯವು 10 ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ಆದರೆ ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಈತ ತಲೆಮರೆಸಿಕೊಂಡಿದ್ದನು. 2018ರಲ್ಲಿ ಕೇರಳ ಪೊಲೀಸರು ಈತನನ್ನು ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲು ಕರೆತರುತ್ತಿದ್ದ ಸಂದರ್ಭದಲ್ಲಿ, ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ಈತ ಪರಾರಿಯಾಗಿದ್ದನು.

    ಪೊಲೀಸರಿಂದ ತಪ್ಪಿಸಿಕೊಂಡ ನಂತರ ಆರೋಪಿ ಅಝೀಝ್ ತನ್ನ ಗುರುತನ್ನೇ ಬದಲಿಸಿಕೊಂಡಿದ್ದನು. ಕಲಬುರಗಿ ಜಿಲ್ಲೆಯ ಜೇವರ್ಗಿ ನಿವಾಸಿ ‘ಬಸವರಾಜು’ ಎಂಬ ಹೆಸರಿನಲ್ಲಿ ನಕಲಿ ಗುರುತು ಸೃಷ್ಟಿಸಿಕೊಂಡು ಆಂಧ್ರಪ್ರದೇಶದಲ್ಲಿ ವಾಸವಿದ್ದನು. ಈತನ ಪತ್ತೆಗಾಗಿ ಪೊಲೀಸರು ಸತತ ಕಾರ್ಯಾಚರಣೆ ನಡೆಸುತ್ತಿದ್ದರು.

    ತನಿಖೆಯ ವೇಳೆ ಆರೋಪಿಯು ಸದ್ಯ ಆಂಧ್ರಪ್ರದೇಶದ ಚಿತ್ತೂರು ಜೈಲಿನಲ್ಲಿರುವುದು ಖಚಿತಪಟ್ಟಿದೆ. ಸಂಬಂಧಪಟ್ಟ ನ್ಯಾಯಾಲಯದಿಂದ ಬಾಡಿ ವಾರಂಟ್ ಪಡೆದು, ಆರೋಪಿಯನ್ನು ವಶಕ್ಕೆ ಪಡೆದು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

    Post Views: 138

    Related Posts

    ಜೂನ್ 1ಕ್ಕೆ ಓಪನ್, ಜೂನ್ 14ಕ್ಕೆ ಕ್ಲೋಸ್; ಗಡಾಯಿಕಲ್ಲಿನ ಚಾರಣಕ್ಕೆ ಮತ್ತೆ ತಡೆ

    June 14, 2026

    ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ… ಎಚ್ಚರಿಕೆಗೂ ಬಗ್ಗದ ಆರೋಪಿ ಮೇಲೆ ಫೈರಿಂಗ್

    June 14, 2026

    ಫುಟ್ಬಾಲ್ ಅವಕಾಶದ ಆಮಿಷ ನೀಡಿ ಬಾಲಕಿಗೆ ದೌರ್ಜನ್ಯ ಆರೋಪ; ಕೋಚ್ ವಿರುದ್ಧ ಪೋಕ್ಸೊ ಕೇಸ್

    June 14, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಜೂನ್ 1ಕ್ಕೆ ಓಪನ್, ಜೂನ್ 14ಕ್ಕೆ ಕ್ಲೋಸ್; ಗಡಾಯಿಕಲ್ಲಿನ ಚಾರಣಕ್ಕೆ ಮತ್ತೆ ತಡೆ

    June 14, 2026

    ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ… ಎಚ್ಚರಿಕೆಗೂ ಬಗ್ಗದ ಆರೋಪಿ ಮೇಲೆ ಫೈರಿಂಗ್

    June 14, 2026

    ಫುಟ್ಬಾಲ್ ಅವಕಾಶದ ಆಮಿಷ ನೀಡಿ ಬಾಲಕಿಗೆ ದೌರ್ಜನ್ಯ ಆರೋಪ; ಕೋಚ್ ವಿರುದ್ಧ ಪೋಕ್ಸೊ ಕೇಸ್

    June 14, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.