Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ರಾಣಿ ಅಬ್ಬಕ್ಕ, ಚೆನ್ನಮ್ಮ ನಮಗೆ ಪ್ರೇರಣೆ – ಮೋದಿ
    ಇತ್ತೀಚಿನ ಸುದ್ದಿ

    ಮಂಗಳೂರು: ರಾಣಿ ಅಬ್ಬಕ್ಕ, ಚೆನ್ನಮ್ಮ ನಮಗೆ ಪ್ರೇರಣೆ – ಮೋದಿ

    September 2, 2022
    Share

    ಮಂಗಳೂರು: ಬ್ರಿಟಿಷರ ದಾಸ್ಯದಿಂದ ದೇಶವನ್ನು ಬಿಡಿಸಿಕೊಳ್ಳಲು ವೀರ ವನಿತೆ ರಾಣಿ ಅಬ್ಬಕ್ಕ, ಕಿತ್ತೂರು ರಾಣಿ ಚೆನ್ನಮ್ಮ ನಮಗೆ ಪ್ರೇರಣೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

    ನಗರದ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ನಡೆದ ಬಂದರು, ಒಳನಾಡು ಜಲಸಾರಿಗೆಗೆ ಸಂಬಂಧಿಸಿದ 3,800 ಕೋಟಿ ರೂ.ಗಳ ಮೊತ್ತದ 8 ಯೋಜನೆಗಳ ಲೋಕಾರ್ಪಣೆ ಮತ್ತು ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಅವರು ದೇಶದ ಅಭಿವೃದ್ಧಿಯಲ್ಲಿ ಕರ್ನಾಟಕದ ಪಾತ್ರವನ್ನು ಕೊಂಡಾಡಿದರು. ಮಂಗಳೂರು ಬಂದರು 25,000 ಜನರನ್ನು ನಿರ್ವಹಿಸುತ್ತದೆ. ಭಾರತದಲ್ಲಿ ಕ್ರೂಸ್ ಟೂರಿಸಂಗೆ ನವ ಮಂಗಳೂರು ಬಂದರು ಸೂಕ್ತವಾಗಿದೆ. ಇದರ ಬಗ್ಗೆ ಹೆಚ್ಚು ನಿರೀಕ್ಷೆ ಇದೆ. ಕರಾವಳಿಯ ಭರಪೂರ ಲಾಭವನ್ನು ನಾವು ಪಡೆಯಬೇಕಿದೆ ಎಂದರು.ʻಕರ್ನಾಟಕ ಸಂಪದ್ಭರಿತ ರಾಜ್ಯ. ವೀರತ್ವಕ್ಕೆ ಹೆಸರುವಾಸಿ. ಇದು ಮೇಧಾವಿಗಳನ್ನು ಸೃಷ್ಟಿಸಿದ ನಾಡು, ತೀರ್ಥಕ್ಷೇತ್ರದ ಬೀಡು ಸಹ ಹೌದು ’ ಎಂದು ʻವೀರ ರಾಣಿಯರಾದ ಅಬ್ಬಕ್ಕ, ಕಿತ್ತೂರು ಚೆನ್ನಮ್ಮನವರ ಹೋರಾಟ ಸ್ಮರಿಸಿದರು. ಬ್ರಿಟಿಷರ ದಾಸ್ಯದಿಂದ ದೇಶವನ್ನು ಬಿಡಿಸಿಕೊಳ್ಳಲು ಈ ವೀರ ವನಿತೆಯರು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಹೋರಾಡಿದರು. ಇವರೆಲ್ಲರೂ ನಮಗೆ ಪ್ರೇರಣೆʼ ಎಂದು ಹೇಳಿದರು.

    Post Views: 204

    Related Posts

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026

    ರಾತ್ರಿ ವೇಳೆ ದೇವಾಲಯ ಪ್ರವೇಶಿಸಿದ ವ್ಯಕ್ತಿಯಿಂದ ವಿಗ್ರಹ ಧ್ವಂಸ

    April 24, 2026

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.