Facebook Twitter Instagram
    Thursday, October 22
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾರ್ಕಳ: ಪೊಲೀಸರ ಮೇಲೆ ಕಾರು ಹರಿಸಲು ಯತ್ನಿಸಿದ ಐವರು ಕ್ರಿಕೆಟ್ ಬೆಟ್ಟಿಂಗ್ ಬುಕ್ಕಿಗಳ ಬಂಧನ
    ಇತ್ತೀಚಿನ ಸುದ್ದಿ

    ಕಾರ್ಕಳ: ಪೊಲೀಸರ ಮೇಲೆ ಕಾರು ಹರಿಸಲು ಯತ್ನಿಸಿದ ಐವರು ಕ್ರಿಕೆಟ್ ಬೆಟ್ಟಿಂಗ್ ಬುಕ್ಕಿಗಳ ಬಂಧನ

    March 31, 2026
    Share

    ಕಾರ್ಕಳ : ಕರ್ತವ್ಯನಿರತ ಪೊಲೀಸ್ ಅಧಿಕಾರಿಗಳ ಮೇಲೆ ಕಾರು ಹರಿಸಲು ಯತ್ನಿಸಿ ಕೊಲೆ ಯತ್ನ ನಡೆಸಿದ ಹಾಗೂ ಸಂಘಟಿತ ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ನಡೂರು ನಿವಾಸಿ ಸುದರ್ಶನ ಶೆಟ್ಟಿ (29), ಕೃತವ್ಯ ಶೆಟ್ಟಿ (27), ಅರುಣ್ ಶೆಟ್ಟಿ (29), ತೇಜಸ್ (28) ಮತ್ತು ಪ್ರಜ್ವಲ್ ಶೆಟ್ಟಿ (29) ಬಂಧಿತರು.

    ಕಾರ್ಕಳದ ಹಂಚಿಕಟ್ಟೆ ಬಳಿ ತಪಾಸಣೆ ನಡೆಸುತ್ತಿದ್ದ ಪಿಎಸ್‌ಐ ಪ್ರಸನ್ನ ಎಂ.ಎಸ್. ಅವರ ತಂಡ ಕಪ್ಪು ಬಣ್ಣದ ಕಾರನ್ನು ನಿಲ್ಲಿಸಲು ಸೂಚಿಸಿದಾಗ, ಆರೋಪಿಗಳು ಪೊಲೀಸರ ಮೇಲೆ ಕಾರು ಹರಿಸಲು ಯತ್ನಿಸಿ ಪರಾರಿಯಾಗಿದ್ದರು. ಇದೇ ವಾಹನ ವನ್ನು ಶಿರ್ವ ಗ್ರಾಮದ ಪದವು ಬಳಿ ತಡೆದ ಪಿಎಸ್‌ಐ ಮಂಜುನಾಥ ಮರಬಾಡ ಅವರ ಮೇಲೂ ಚಾಲಕ ಕಾರು ಹತ್ತಿಸಲು ಯತ್ನಿಸಿದ್ದಾನೆ. ಅಂತಿಮವಾಗಿ ಶಿರ್ವ ಪಟ್ಟಣದಲ್ಲಿ ಪೊಲೀಸರು ಹರಸಾಹಸ ಪಟ್ಟು ವಾಹನವನ್ನು ತಡೆದು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

    ಬಂಧಿತರನ್ನು ವಿಚಾರಣೆ ನಡೆಸಿದಾಗ ಇವರು ದೊಡ್ಡ ಮಟ್ಟದ ಕ್ರಿಕೆಟ್ ಬೆಟ್ಟಿಂಗ್ ಜಾಲದಲ್ಲಿ ತೊಡಗಿರುವುದು ಬೆಳಕಿಗೆ ಬಂದಿದೆ. ಸಾರ್ವಜನಿಕರಿಗೆ ಹಣದ ಆಮಿಷವೊಡ್ಡಿ ಜೂಜಾಟಕ್ಕೆ ಪ್ರೇರೇಪಿಸುತ್ತಿದ್ದ ಈ ತಂಡದ ವಿರುದ್ಧ ಕಾರ್ಕಳ ಮತ್ತು ಶಿರ್ವ ಪೊಲೀಸ್ ಠಾಣೆಗಳಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಮತ್ತು ಕರ್ನಾಟಕ ಪೊಲೀಸ್ ಕಾಯ್ದೆಯಡಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

    Post Views: 202

    Related Posts

    ನೆಲ್ಯಾಡಿ ಬಳಿ ಭೀಕರ ಅಪಘಾತ: ಗ್ಯಾಸ್ ಟ್ಯಾಂಕರ್‌ಗೆ ಕಾರು ಡಿಕ್ಕಿ, ವಿದ್ಯಾರ್ಥಿ ಸಾವು

    October 22, 2026

    ಮಣಿಪಾಲ: ಮಾನವ ಅಸ್ಥಿಪಂಜರದ ಕೆಲವು ಭಾಗಗಳು ಪತ್ತೆ!!

    October 22, 2026

    ಮಂಗಳೂರು: ಫೇಸ್‌ಬುಕ್‌ನಲ್ಲಿ ಬಂದಿದ್ದ APK ಫೈಲ್ ಡೌನ್‌ಲೋಡ್ ಮಾಡಿ ₹1.78 ಲಕ್ಷ. ಕಳೆದುಕೊಂಡ ವ್ಯಕ್ತಿ!!

    October 21, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ನೆಲ್ಯಾಡಿ ಬಳಿ ಭೀಕರ ಅಪಘಾತ: ಗ್ಯಾಸ್ ಟ್ಯಾಂಕರ್‌ಗೆ ಕಾರು ಡಿಕ್ಕಿ, ವಿದ್ಯಾರ್ಥಿ ಸಾವು

    October 22, 2026

    ಮಣಿಪಾಲ: ಮಾನವ ಅಸ್ಥಿಪಂಜರದ ಕೆಲವು ಭಾಗಗಳು ಪತ್ತೆ!!

    October 22, 2026

    ಮಂಗಳೂರು: ಫೇಸ್‌ಬುಕ್‌ನಲ್ಲಿ ಬಂದಿದ್ದ APK ಫೈಲ್ ಡೌನ್‌ಲೋಡ್ ಮಾಡಿ ₹1.78 ಲಕ್ಷ. ಕಳೆದುಕೊಂಡ ವ್ಯಕ್ತಿ!!

    October 21, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.