Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಸಾಸ್ತಾನ ಯುವಕನ ಅಪಹರಣ ಪ್ರಕರಣ- ಕೋಕಾ ಕಾಯ್ದೆಯಡಿ ಪ್ರಮುಖ ಆರೋಪಿಗಳ ಸೆರೆ
    ಇತ್ತೀಚಿನ ಸುದ್ದಿ

    ಉಡುಪಿ: ಸಾಸ್ತಾನ ಯುವಕನ ಅಪಹರಣ ಪ್ರಕರಣ- ಕೋಕಾ ಕಾಯ್ದೆಯಡಿ ಪ್ರಮುಖ ಆರೋಪಿಗಳ ಸೆರೆ

    April 2, 2026
    Share

    ಉಡುಪಿ: ಸಾಸ್ತಾನದಲ್ಲಿನ ಕೋಸ್ಟಲ್ ಪ್ಯಾರಡೈಸ್ ಹೊಟೇಲ್ ಎದುರು ನಡೆದ ಯುವಕನ ಅಪಹರಣ ಪ್ರಕರಣಕ್ಕೆ ಸಂಬಂಧಿಸಿ ಕೋಟ ಪೊಲೀಸರು ಮಹತ್ವದ ಕ್ರಮ ಕೈಗೊಂಡಿದ್ದು, ಪ್ರಕರಣವನ್ನು KCOCA ಕಾಯ್ದೆಯಡಿ ದಾಖಲಿಸಿ ಈಗಾಗಲೇ 7 ಆರೋಪಿಗಳನ್ನು ಬಂಧಿಸಿದ್ದಾರೆ. ಇನ್ನಿಬ್ಬರು ಪ್ರಮುಖ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.

    ಸಿದ್ದಾಪುರ ಗ್ರಾಮದ ಮೋಹನ ದಾಸ್ ಶೆಟ್ಟಿ ಅವರ ಪುತ್ರ ತೇಜಸ್ ಅವರನ್ನು ಅಪರಿಚಿತರು ಅಪಹರಿಸಿರುವ ಕುರಿತು ಪ್ರಕರಣ ದಾಖಲಾಗಿದೆ. ತೇಜಸ್‌ನ ಸ್ನೇಹಿತ ಪ್ರಜ್ವಲ್ ನೀಡಿದ ಮಾಹಿತಿಯಂತೆ, ನ.19, 2025ರಂದು ಮಧ್ಯಾಹ್ನ ತೇಜಸ್‌ನನ್ನು ಸಾಸ್ತಾನದಲ್ಲಿರುವ ಕೋಸ್ಟಲ್ ಪ್ಯಾರಡೈಸ್ ಹೊಟೇಲ್ ಎದುರು ಕೆಲವರು ಕಿಡ್ನಾಪ್ ಮಾಡಿಕೊಂಡು ಹೋಗಿದ್ದರು. ಸ್ಥಳಕ್ಕೆ ಧಾವಿಸಿದ ಕುಟುಂಬಸ್ಥರು, ತೇಜಸ್ ಬಳಸುತ್ತಿದ್ದ KA-15-Z-0007 ಫಾರ್ಚೂನರ್ ಕಾರು ಅಲ್ಲಿಯೇ ಇದ್ದುದನ್ನು ಗಮನಿಸಿದರು.

    ಈ ವೇಳೆ ತೇಜಸ್‌ನ ವಾಟ್ಸ್‌ಆಪ್ ನಂಬರಿನಿಂದ ಪ್ರಜ್ವಲ್‌ಗೆ ಕರೆ ಬಂದಿದ್ದು, ಅಪಹರಣದ ಬಗ್ಗೆ ಮಾಹಿತಿ ನೀಡಲಾಗಿದೆ. ಬಳಿಕ ಅಪರಿಚಿತರು 50 ಲಕ್ಷ ರೂ. ಹಾಗೂ ನಂತರ 3 ಕೋಟಿ ರೂ. ನೀಡುವಂತೆ ಬೆದರಿಕೆ ಹಾಕಿ, ಹಣ ನೀಡದಿದ್ದರೆ ತೇಜಸ್‌ನನ್ನು ಕೊಲ್ಲುವುದಾಗಿ ಎಚ್ಚರಿಕೆ ನೀಡಿದ್ದಾರೆ.

    ಈ ಕುರಿತು ಕೋಟ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 208/2025ರಡಿ BNS ಕಲಂ 140(1), 308(4), 112 r/w 3(5) ಅನ್ವಯ ಪ್ರಕರಣ ದಾಖಲಾಗಿತ್ತು.

    ತನಿಖೆ ಕೈಗೊಂಡ ಪೊಲೀಸರು ಆರೋಪಿಗಳು ಸಂಘಟಿತವಾಗಿ ಅಪರಾಧ ನಡೆಸಿರುವುದು ಪತ್ತೆಯಾದ ಹಿನ್ನೆಲೆ ಪ್ರಕರಣಕ್ಕೆ KCOCA-2000 ಕಾಯ್ದೆ ಅನ್ವಯಿಸಲಾಗಿದೆ. ಕುಂದಾಪುರ ಉಪ ವಿಭಾಗದ ಡಿವೈಎಸ್ಪಿ ಹೆಚ್.ಡಿ. ಕುಲಕರ್ಣಿ ನೇತೃತ್ವದಲ್ಲಿ ತನಿಖೆ ನಡೆಸಿ, ದೇವಿ ಪ್ರಸಾದ್ ಶೆಟ್ಟಿ @ ದೀಕ್ಷಿತ್ (33), ಸುಜಿತ್ (27), ಸುದೀಪ್ (22), ಶ್ರೀಷಾ ಆನಂದ ಶೆಟ್ಟಿ (35), ಮಿಥುನ್ @ ಕೈಕಂಬ (20), ಸುಹಾಸ್ (31) ಹಾಗೂ ಮನೋಜ್ ವಿ. ಕೊಟ್ಯಾನ್ (34) ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

    ಪ್ರಕರಣದ ಪ್ರಮುಖ ಆರೋಪಿಗಳಾದ ಮನೋಜ ಕೋಡಿಕೆರೆ (42) ಮತ್ತು ಚೇತನ್ ಪಡೀಲ್ @ ಚೇತನ್ ಕುಲಾಲ್ (38) ಪರಾರಿಯಾಗಿದ್ದಾರೆ. ಮನೋಜ ವಿರುದ್ಧ ಮಂಗಳೂರು ನಗರದಲ್ಲಿ 18 ಮತ್ತು ಉಡುಪಿ ಜಿಲ್ಲೆಯಲ್ಲಿ 2 ಪ್ರಕರಣಗಳು ದಾಖಲಾಗಿದ್ದು, ಚೇತನ್ ವಿರುದ್ಧ ಮಂಗಳೂರು ನಗರದಲ್ಲಿ 11 ಹಾಗೂ ಉಡುಪಿಯಲ್ಲಿ 2 ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

    ಪರಾರಿಯಾಗಿರುವ ಆರೋಪಿಗಳ ಬಗ್ಗೆ ಮಾಹಿತಿ ಇದ್ದಲ್ಲಿ ಕುಂದಾಪುರ ಉಪ ವಿಭಾಗದ ಡಿವೈಎಸ್ಪಿ ಹೆಚ್.ಡಿ. ಕುಲಕರ್ಣಿ (ಮೊಬೈಲ್: 9480805422) ಅವರನ್ನು ಸಂಪರ್ಕಿಸಲು ಪೊಲೀಸರು ಮನವಿ ಮಾಡಿದ್ದಾರೆ. ಮಾಹಿತಿ ನೀಡುವವರಿಗೆ ₹50,000 ನಗದು ಬಹುಮಾನ ಘೋಷಿಸಲಾಗಿದ್ದು, ಮಾಹಿತಿದಾರರ ವಿವರಗಳನ್ನು ಗೌಪ್ಯವಾಗಿಡಲಾಗುವುದು ಎಂದು ತಿಳಿಸಿದ್ದಾರೆ.

    Post Views: 130

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.