Facebook Twitter Instagram
    Sunday, June 14
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮೂಡುಬಿದಿರೆಯ ಇನ್‌ಸ್ಪೆಕ್ಟರ್ ಸಂದೇಶ್‌ಗೆ ಹೈಕೋರ್ಟ್‌ ಚಾಟಿ..!!
    ಇತ್ತೀಚಿನ ಸುದ್ದಿ

    ಮೂಡುಬಿದಿರೆಯ ಇನ್‌ಸ್ಪೆಕ್ಟರ್ ಸಂದೇಶ್‌ಗೆ ಹೈಕೋರ್ಟ್‌ ಚಾಟಿ..!!

    April 2, 2026
    Share

    ಮಂಗಳೂರು : ಶಿಕ್ಷಕಿ ದಾಖಲಿಸಿದ ಅತ್ಯಾಚಾರ ಪ್ರಕರಣ ರದ್ದುಕೋರಿ ಅಮಾನತಿನಲ್ಲಿರುವ ಮೂಡುಬಿದಿರೆಯ ಇನ್‌ಸ್ಪೆಕ್ಟರ್ ಸಂದೇಶ್‌ಗೆ ಹೈಕೋರ್ಟ್‌ ತೀಕ್ಷ್ಣವಾಗಿ ಚಾಟಿ ಬೀಸಿದೆ. ಎಫ್ಐಆರ್ ರದ್ದುಕೋರಿ ಸಂದೇಶ ಹೈಕೋರ್ಟ್ ಮೆಟ್ಟಿಲೇದ್ದರು. ಆದರೆ ಹೈಕೋರ್ಟ್​, ಇನ್‌ಸ್ಪೆಕ್ಟರ್ ಮಾಡಿರುವುದು ಅಧಿಕಾರದ ದುರುಪಯೋಗವಲ್ಲವೇ? ದೂರು ಕೊಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸಿದರೆ ಇನ್ನೇನಾಗುತ್ತೆ ಎಂದು ಸಂದೇಶ್​​ಗೆ ತರಾಟೆಗೆ ತೆಗೆದುಕೊಂಡಿದ್ದು, ಪ್ರಕರಣಕ್ಕೆ ಮಧ್ಯಂತರ ತಡೆ ನೀಡಲು ನಿರಾಕರಿಸಿ ವಿಚಾರಣೆಯನ್ನು ಮುಂದೂಡಿದೆ.

    ಸಂದೇಶ್‌ ಪರ ವಾದಿಸಿದ ವಕೀಲರು, ಮಹಿಳೆಯೊಂದಿಗೆ ಒಪ್ಪಿತ ಸಂಬಂಧವಿತ್ತು. ಇನ್‌ಸ್ಪೆಕ್ಟರ್ ವಿರುದ್ಧದ ಅತ್ಯಾಚಾರ ಆರೋಪಕ್ಕೆ ಆಧಾರಗಳಿಲ್ಲ ಎಂದು ಹೇಳಿದರು. ಇನ್‌ಸ್ಪೆಕ್ಟರ್ ಪರ ವಕೀಲರ ವಾದ ಆಲಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ, ಇನ್‌ಸ್ಪೆಕ್ಟರ್ ಮಾಡಿರುವುದು ಅಧಿಕಾರದ ದುರುಪಯೋಗವಲ್ಲವೇ? ದೂರು ಕೊಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸಿದರೆ ಇನ್ನೇನಾಗುತ್ತೆ ಎಂದು ಖಾರವಾಗಿ ಪ್ರಶ್ನಿಸಿದ್ದು, ವಿಚಾರಣೆಯನ್ನು ಏಪ್ರಿಲ್ 6ಕ್ಕೆ ಮುಂದೂಡಿದೆ. ಅಲ್ಲಿಯವರೆಗೆ ಬಂಧಿಸದಂತೆ ಮಧ್ಯಂತರ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ.

    ಸಂತ್ರಸ್ತೆ ಶಿಕ್ಷಕಿ ನೀಡಿದ ದೂರಿನ ಮೇರೆಗೆ ಮೂಡಿಬಿದಿರೆ ಇನ್ಸ್‌ಪೆಕ್ಟರ್ ಆಗಿದ್ದ ಸಂದೇಶ್ ವಿರುದ್ದ ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣೆಯಲ್ಲಿ ಬಿಎನ್ ಎಸ್ 376(2)(A)(1), 376(2)(n), 384, 506 ಅಡಿ ಎಫ್ಐಆರ್ ದಾಖಲಾಗಿದೆ. ಈಗಾಗಲೇ ಮಹಿಳೆಯರನ್ನು ಲೈಂಗಿಕವಾಗಿ ಪೀಡಿಸಿದ ಆರೋಪ ಸಂದೇಶ್ ಮೇಲಿದೆ. ಇತ್ತೀಚೆಗೆ ಇಬ್ಬರು ಮಹಿಳೆಯರು ಮಾಡಿದ್ದ ಆರೋಪ ಬಾರಿ ಚರ್ಚೆಯಾಗಿತ್ತು. ಆದರೆ ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಇದು ಪ್ರಚೋದಿತ ಹಾಗೂ ಸುಳ್ಳು ಆರೋಪ ಎಂದು ಕೇಳಿಬಂದಿತ್ತು. ಇದರ ಬೆನ್ನಲ್ಲೇ ಶಿಕ್ಷಕಿಯೊಬ್ಬರು ದೂರು ನೀಡಿದ್ದು ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದೆ.

    ಬೆಳ್ತಂಗಡಿ ತಾಲೂಕಿನಲ್ಲಿ ಸರ್ಕಲ್ ಇನ್‌ಸ್ಪೆಕ್ಟರ್ ಆಗಿದ್ದ ಸಂದೇಶ್, 2018ರಿಂದ 2023ರವರೆಗೆ ಮನೆಗೆ ಬಂದು ಅತ್ಯಾಚಾರ ಮಾಡಿರುವುದಾಗಿ ಸ್ವತಃ ಶಿಕ್ಷಕಿ ಆರೋಪಿಸಿದ್ದಾರೆ. ಹಲವು ಕಾರಣಗಳನ್ನು ಹಿಡಿದು, ಕೆಲ ಪ್ರಕರಣಗಳ ಕುರಿತು ಬೆದರಿಸಿ ನಿರಂತರವಾಗಿ ಅತ್ಯಾಚಾರ ಮಾಡಿದ್ದಾರೆ. 2018ರಿಂದ 2023ರವರೆಗೆ ಸತತ 5 ವರ್ಷಗಳ ಕಾಲ ಅತ್ಯಾಚಾರ ಎಸಗಿದ್ದಾರೆ. ಜೀವ ಭಯ, ಮಾನ, ಕುಟುಂಬಸ್ಥರ ವಿರುದ್ಧವೂ ಬೆದರಿಕೆ ಹಾಕಿದ್ದ ಕಾರಣ ಮೌನವಾಗಿದ್ದೆ ಎಂದು ಶಿಕ್ಷಕಿ ದೂರಿನಲ್ಲಿ ಹೇಳಿದ್ದಾರೆ.

    Post Views: 180

    Related Posts

    ಜೂನ್ 1ಕ್ಕೆ ಓಪನ್, ಜೂನ್ 14ಕ್ಕೆ ಕ್ಲೋಸ್; ಗಡಾಯಿಕಲ್ಲಿನ ಚಾರಣಕ್ಕೆ ಮತ್ತೆ ತಡೆ

    June 14, 2026

    ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ… ಎಚ್ಚರಿಕೆಗೂ ಬಗ್ಗದ ಆರೋಪಿ ಮೇಲೆ ಫೈರಿಂಗ್

    June 14, 2026

    ಫುಟ್ಬಾಲ್ ಅವಕಾಶದ ಆಮಿಷ ನೀಡಿ ಬಾಲಕಿಗೆ ದೌರ್ಜನ್ಯ ಆರೋಪ; ಕೋಚ್ ವಿರುದ್ಧ ಪೋಕ್ಸೊ ಕೇಸ್

    June 14, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಜೂನ್ 1ಕ್ಕೆ ಓಪನ್, ಜೂನ್ 14ಕ್ಕೆ ಕ್ಲೋಸ್; ಗಡಾಯಿಕಲ್ಲಿನ ಚಾರಣಕ್ಕೆ ಮತ್ತೆ ತಡೆ

    June 14, 2026

    ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ… ಎಚ್ಚರಿಕೆಗೂ ಬಗ್ಗದ ಆರೋಪಿ ಮೇಲೆ ಫೈರಿಂಗ್

    June 14, 2026

    ಫುಟ್ಬಾಲ್ ಅವಕಾಶದ ಆಮಿಷ ನೀಡಿ ಬಾಲಕಿಗೆ ದೌರ್ಜನ್ಯ ಆರೋಪ; ಕೋಚ್ ವಿರುದ್ಧ ಪೋಕ್ಸೊ ಕೇಸ್

    June 14, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.