Facebook Twitter Instagram
    Monday, September 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಭೀಕರ ರಸ್ತೆ ಅಪಘಾತ-ಎಕ್ಸ್‌ಪ್ರೆಸ್ ಬಸ್ ಕಂಟೈನರ್ ಲಾರಿಗೆ ಡಿಕ್ಕಿ
    ಇತ್ತೀಚಿನ ಸುದ್ದಿ

    ಮಂಗಳೂರು: ಭೀಕರ ರಸ್ತೆ ಅಪಘಾತ-ಎಕ್ಸ್‌ಪ್ರೆಸ್ ಬಸ್ ಕಂಟೈನರ್ ಲಾರಿಗೆ ಡಿಕ್ಕಿ

    April 8, 2026
    Share

    ಮಂಗಳೂರಿನಿಂದ ಮೂಡುಬಿದ್ರೆ ತೆರಳುತ್ತಿದ್ದ ಕೆಕೆಬಿ ಟ್ರಾವೆಲ್ಸ್ ಹೆಸರಿನ ಎಕ್ಸೆಸ್ ಬಸ್ ಮತ್ತು ಕಂಟೇನರ್ ಲಾರಿ ಗುರುಪುರ ಹೆದ್ದಾರಿ ತಿರುವಿನಲ್ಲಿ ಮುಖಾಮುಖಿ ಡಿಕ್ಕಿಯಾಗಿದ್ದು ಚಾಲಕರಿಬ್ಬರು ತೀವ್ರ ಗಾಯಗೊಂಡಿದ್ದಾರೆ. ಹಲವು ಪ್ರಯಾಣಿಕರಿಗೂ ಗಾಯಗಳಾಗಿವೆ.


    ಮಧ್ಯಾಹ್ನ ಎರಡು ಗಂಟೆ ಸುಮಾರಿಗೆ ಘಟನೆ ನಡೆದಿದ್ದು ಓವರ್ ಟೇಕ್ ಮಾಡಲು ಬಂದ ಬಸ್ಸಿಗೆ ಕಂಟೇನರ್ ಲಾರಿ ಡಿಕ್ಕಿಯಾಗಿದ್ದು ಮುಂಭಾಗ ನಜ್ಜುಗುಜ್ಜಾಗಿದೆ. ಅಲ್ಲದೆ, ಲಾರಿಯ ಚಾಲಕ ಎಡೆಯಲ್ಲಿ ಸಿಕ್ಕಿಕೊಂಡು ಸ್ಥಳೀಯರ ಹರಸಾಹಸದ ಬಳಿಕ ಹೊರ ತೆಗೆಯಲಾಯಿತು.


    ಇತರೇ ವಾಹನಗಳ ಚಾಲಕರು, ಪ್ರಯಾಣಿಕರು, ಸ್ಥಳೀಯರು ಸೇರಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಸ್ಸಿನಲ್ಲಿದ್ದ ಏಳು ಮಂದಿ ಪ್ರಯಾಣಿಕರಿಗೆ ಗಾಯವಾಗಿದೆ. ಬಸ್ ಚಾಲಕ ಮತ್ತು ಲಾರಿಯ ಚಾಲಕರಿಗೆ ಕಾಲು ಮತ್ತು ಕೈಗೆ ಹೆಚ್ಚು ಪೆಟ್ಟು ಬಿದ್ದಿದೆ. ಹುಬ್ಬಳ್ಳಿ ಮೂಲದ ಕಂಟೇನ‌ರ್ ಲಾರಿಯಲ್ಲಿ ಭಾರೀ ಸರಕು ತುಂಬಿಕೊಂಡಿದ್ದು ಬಸ್ಸಿಗೆ ಗುದ್ದಿ ನಿಂತುಬಿಟ್ಟಿದೆ. ಇದರಿಂದಾಗಿ ಎರಡೂ ವಾಹನಗಳ ಮುಂಭಾಗ ಒಂದಕ್ಕೊಂದು ಅಂಟಿಕೊಂಡು ಜಖಂ ಆಗಿತ್ತು.


    ಮಂಗಳೂರು- ಮೂಡುಬಿದ್ರೆ ನಡುವೆ ಚಲಿಸುವ ಖಾಸಗಿ ಬಸ್ಸುಗಳನ್ನು ಅತಿ ವೇಗದಿಂದ ಚಲಾಯಿಸುವುದು, ಪ್ರಯಾಣಿಕರ ಜೀವದ ಜೊತೆಗೆ ಚೆಲ್ಲಾಟ ಆಡುವ ರೀತಿ ಚಾಲಕರು ವರ್ತಿಸುತ್ತಿದ್ದಾರೆ. ಟೈಮ್ ಕೀಪಿಂಗ್ ಹೆಸರಲ್ಲಿ ಬಸ್ಸುಗಳ ಧಾವಂತಕ್ಕೆ ರಸ್ತೆಯಲ್ಲಿರುವ ಇತರೇ ವಾಹನಗಳು ಸೈಡ್ ಬಿಟ್ಟು ಕೊಡಲೇಬೇಕಾದ ಸ್ಥಿತಿಗೆ ಬರುತ್ತವೆ. ಈ ಧಾವಂತದಿಂದಾಗಿಯೇ ಈ ಅಪಘಾತ ಆಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    Post Views: 175

    Related Posts

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.