Facebook Twitter Instagram
    Thursday, April 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಪೋಕ್ಸೊ ಕೇಸ್‌ ಅಪರಾಧಿಗೆ 20 ವರ್ಷ ಜೈಲು
    ಇತ್ತೀಚಿನ ಸುದ್ದಿ

    ಮಂಗಳೂರು: ಪೋಕ್ಸೊ ಕೇಸ್‌ ಅಪರಾಧಿಗೆ 20 ವರ್ಷ ಜೈಲು

    April 11, 2026
    Share

    ಮಂಗಳೂರು : ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದ ಅಪರಾಧಿ ಗದಗ ತಾಲೂಕಿನ ಹೊಳೆಮುನ್ನೂರು ನಿವಾಸಿ ಮಹೇಶ ಮಾದರ (20) ಎಂಬಾತನಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್‌ಟಿಎಸ್ ಸಿ-2 (ಪೊಕ್ಸೊ) ನ್ಯಾಯಾಲಯ 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

    ನಗರ ಹೊರವಲಯದಲ್ಲಿ ಬಾಡಿಗೆ ಮನೆಯಲ್ಲಿ ತಂದೆ ತಾಯಿಯೊಂದಿಗೆ ವಾಸವಾಗಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿ ಹೋಮ್ ನರ್ಸ್ ಕೆಲಸ ಮಾಡಿಕೊಂಡಿದ್ದಳು. ಆರೋಪಿ ಮಹೇಶ ಮಾದರ ಕೂಡ ಪಕ್ಕದ ಮನೆಯಲ್ಲಿ ವಾಸವಾಗಿದ್ದ. ಇವರ ಮಧ್ಯೆ ಪರಿಚಯವಾಗಿ ಸ್ನೇಹ ಬೆಳೆದಿತ್ತು. 2015ರ ಮೇ 19ರಂದು ಮನೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕರೆ ಮಾಡಿದ್ದ ಆರೋಪಿ ಮಹೇಶ ಬಲ್ಲಾಳ್‌ಬಾಗ್‌ಗೆ ಕರೆಸಿ ಅಲ್ಲಿಂದ ಆಟೋದಲ್ಲಿ ಕಾವೂರು ಬಳಿಯ ಶೆಡ್‌ಗೆ ಕರೆದುಕೊಂಡು ಹೋಗಿ ಅಂದು ರಾತ್ರಿ ಆಕೆಯ ಲೈಂಗಿಕ ದೌರ್ಜನ್ಯ ಎಸಗಿದ್ದ. ಮರುದಿನ ಬೆಳಗ್ಗೆ 11ಕ್ಕೆ ಸರ್ಕಾರಿ ಬಸ್ಸಿನಲ್ಲಿ ಬಳ್ಳಾರಿಗೆ ಕರೆದುಕೊಂಡು ಹೋಗಿದ್ದ. ಅಲ್ಲೂ ಲೈಂಗಿಕ ದೌರ್ಜನ್ಯ ಎಸಗಿದ್ದ.

    ಬಾಲಕಿ ಕೆಲಸ ಮಾಡುತ್ತಿದ್ದ ಸಂಸ್ಥೆಯವರು ನೀಡಿದ ದೂರಿನಂತೆ ಪಾಂಡೇಶ್ವರ ಪೊಲೀಸರು ಇಬ್ಬರನ್ನು ಪತ್ತೆಹಚ್ಚಿದ್ದರು. ಆರೋಪಿ ವಿರುದ್ಧ ಬಿಎನ್‌ಎಸ್ ಕಲಂ 137(2), , 65(1) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣ ಅಧಿನಿಯಮ ಮತ್ತು ನಿಯಮ 2012 (ಪೊಕ್ಸೊ) ಕಲಂ 52 ಮತ್ತಯ 6ರಡಿ ಶಿಕ್ಷಾರ್ಹ ಅಪರಾಧ ಎಸಗಿರುವ ಬಗ್ಗೆ ಪ್ರಕರಣ ದಾಖಲಿಸಿದ್ದರು.

    ಆಗಿನ ಎಸ್ಸೈ ರೇಖಾ ಆರ್. ತನಿಖೆ ಪೂರ್ಣಗೊಳಿಸಿದ್ದರೆ ಇನ್‌ಸ್ಪೆಕ್ಟರ್ ಗುರುರಾಜ್ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್‌ಟಿಎಸ್‌ಸಿ -2 (ಪೋಕ್ಸೋ) ನ್ಯಾಯಾಲದ ನ್ಯಾಯಾಧೀಶ ಮಾನು ಕೆ.ಎಸ್. ಆರೋಪಿಯ ಮೇಲಿನ ಅಪರಾಧ ಸಾಬೀತಾಗಿದೆ ಎಂದು ತೀರ್ಮಾನಿಸಿ ಪೊಕ್ಸೊ ಕಲಂ 6 ಮತ್ತು ಬಿಎನ್‌ಎಸ್ ಕಲಂ 65 (1) ರಡಿ 20 ವರ್ಷ ಕಠಿಣ ಶಿಕ್ಷೆ ಹಾಗೂ 30 ಸಾವಿರ ರೂ. ದಂಡ ವಿಧಿಸಿದ್ದಾರೆ. ತಪ್ಪಿದಲ್ಲಿ 3 ತಿಂಗಳ ಸಾದಾ ಸಜೆ ಅನುಭವಿಸಲು ಆದೇಶಿಸಿದ್ದಾರೆ. ಆಕೆಯ ಅಪಹರಣ ಮಾಡಿರುವ ಬಗ್ಗೆ ಬಿಎನ್‌ಎಸ್ ಕಲಂ 137(2)ರಡಿ 3 ವರ್ಷ ಶಿಕ್ಷೆ, 5 ಸಾವಿರ ರೂ.ದಂಡ, ತಪ್ಪಿದಲ್ಲಿ 1 ತಿಂಗಳ ಸಾದಾ ಸಜೆ ಅನುಭವಿಸಲು ತಿಳಿಸಿದ್ದಾರೆ. ದಂಡ ಮೊತ್ತ 35 ಸಾವಿರ ರೂ.ವನ್ನು ಸಂತ್ರಸ್ತೆಗೆ ನೀಡಬೇಕು. ಕಾನೂನು ಸೇವಾ ಪ್ರಾಧಿಕಾರದಿಂದ ಪರಿಹಾರವಾಗಿ 3.65 ಲಕ್ಷ ರೂ. ಸಂತ್ರಸ್ತೆಗೆ ಪಾವತಿಸಬೇಕು ಎಂದು ನಿರ್ದೇಶಿಸಿದ್ದಾರೆ.

    Post Views: 71

    Related Posts

    ಲಂಚ ಸ್ವೀಕರಿಸುತ್ತಿದ್ದ ವೇಳೆ ರೆಡ್‌ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಪಿಎಸ್‌ಐ

    April 22, 2026

    4ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

    April 22, 2026

    ಗೃಹ ಸಚಿವ ಪರಮೇಶ್ವರ್ ಗೆ ರೂ.500 ಬೆಟ್ಟಿಂಗ್ ಸಂಕಷ್ಟ: ಎಫ್ಐಆರ್ ದಾಖಲಿಸಿ ತನಿಖೆಗೆ ಕೋರ್ಟ್ ಆದೇಶ

    April 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.