ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಪೊಲೀಸ್ ಸರ್ಕಲ್ ಇನ್ಸ್ಪೆಕ್ಟರ್ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ.
ಸಿಪಿಐ ರಘುನಾಥ್ (45) ಮೃ*ತ ದುರ್ದೈವಿ. ರಘುನಾಥ್ ವಿಜಯನಗರ ಮತ್ತು ಕೊಪ್ಪಳ ಜಿಲ್ಲೆಗಳ ಡಿಸಿಆರ್ ಇ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಚಿತ್ರದುರ್ಗದ ಕಡೆಯಿಂದ ಜಗಳೂರು ಕಡೆಗೆ ಬರುತ್ತಿರುವಾಗ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿರುವ ಮರಕ್ಕೆ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಸಿಪಿಐ ರಘುನಾಥ್ ಸ್ಥಳದಲ್ಲೇ ಸಾ*ವನ್ನಪ್ಪಿದ್ದಾರೆ. ಇದನ್ನೂ ಓದಿ: ಕರುಣಾಜನಕ ಘಟನೆ: ಹಾಸಿಗೆ ಹಿಡಿದಿದ್ದ ತಾಯಿಯನ್ನು ಮಹಡಿ ಮೇಲಿಂದ ತಳ್ಳಿ ಕೊಂ*ದ ಪಾಪಿ ಮಗ! ಇವರು ದಾವಣಗೆರೆ, ಚಿತ್ರದುರ್ಗ ಸೇರಿದಂತೆ ಹಲವು ಕಡೆಗಳಲ್ಲಿ ಸೇವೆ ಸಲ್ಲಿಸಿದ್ದರು. ಘಟನಾ ಸ್ಥಳಕ್ಕೆ ಜಗಳೂರು ಸಿಪಿಐ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇವರ ನಿಧ*ನಕ್ಕೆ ಪೊಲೀಸ್ ಇಲಾಖೆ ಸಂತಾಪ ವ್ಯಕ್ತಪಡಿಸಿದೆ.




