Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ : ಗಾಂಜಾ ಮಾರಾಟ ಪ್ರಕರಣ – ಆರೋಪಿಗೆ 5 ವರ್ಷ ಜೈಲು ಶಿಕ್ಷೆ
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ : ಗಾಂಜಾ ಮಾರಾಟ ಪ್ರಕರಣ – ಆರೋಪಿಗೆ 5 ವರ್ಷ ಜೈಲು ಶಿಕ್ಷೆ

    April 17, 2026
    Share

    ಬೆಳ್ತಂಗಡಿ: ನಿಷೇಧಿತ ಮಾದಕವಸ್ತು ಗಾಂಜಾ ಮಾರಾಟಕ್ಕೆ ಯತ್ನಿಸಿದ ಪ್ರಕರಣದಲ್ಲಿ ಆರೋಪಿಗೆ ಜಿಲ್ಲಾ ವಿಶೇಷ ಪ್ರಧಾನ ಮತ್ತು ಸತ್ರ ನ್ಯಾಯಾಲಯ ಮಂಗಳೂರು ಶಿಕ್ಷೆ ವಿಧಿಸಿದೆ.

    2009ರ ಮಾರ್ಚ್ 8ರಂದು ಬೆಳ್ತಂಗಡಿ ತಾಲೂಕಿನ ಉಜಿರೆ ರಥಬೀದಿಯಲ್ಲಿ ಅಂದಾಜು ರೂ. 50,000 ಮೌಲ್ಯದ 1.500 ಕೆಜಿ ಗಾಂಜಾವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ಪ್ರಕರಣ ಬೆಳಕಿಗೆ ಬಂದಿತ್ತು. ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ. 60/09ರಂತೆ ಎನ್‌ಡಿಪಿಎಸ್ ಕಾಯ್ದೆಯ ಕಲಂ 8(c) ಜೊತೆಗೆ 20(b) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯದ ಮಾನ್ಯ ನ್ಯಾಯಾಧೀಶರಾದ ಬಸವರಾಜ್ ಅವರು ಏಪ್ರಿಲ್ 10, 2026ರಂದು ಆರೋಪಿಯಾಗಿರುವ ಚಾರ್ಮಾಡಿ ನಿವಾಸಿ ಟಿ.ಇ. ಜೋಸೆಫ್ (42) ಅವರನ್ನು ದೋಷಿ ಎಂದು ತೀರ್ಪು ನೀಡಿದರು. ಬಳಿಕ ಏಪ್ರಿಲ್ 16ರಂದು ಶಿಕ್ಷೆ ಪ್ರಕಟಿಸಲಾಯಿತು.ನ್ಯಾಯಾಲಯವು ಎನ್‌ಡಿಪಿಎಸ್ ಕಾಯ್ದೆಯ ಸೆಕ್ಷನ್ 8(c) r/w 20(b)(ii)(B) ಅಡಿಯಲ್ಲಿ 5 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ರೂ. 50,000 ದಂಡ ವಿಧಿಸಿದೆ. ದಂಡ ಪಾವತಿಸಲು ವಿಫಲವಾದಲ್ಲಿ ಹೆಚ್ಚುವರಿಯಾಗಿ 2 ತಿಂಗಳ ಕಠಿಣ ಜೈಲು ಶಿಕ್ಷೆ ಅನುಭವಿಸಬೇಕಾಗಿದೆ. ಇದೇ ವೇಳೆ ಸೆಕ್ಷನ್ 32-B(f) ಅಡಿಯಲ್ಲಿ 1 ವರ್ಷದ ಕಠಿಣ ಜೈಲು ಶಿಕ್ಷೆಯನ್ನೂ ವಿಧಿಸಲಾಗಿದೆ.ಈ ಪ್ರಕರಣದ ತನಿಖೆಯನ್ನು ಬೆಳ್ತಂಗಡಿ ಠಾಣೆಯ ಪೊಲೀಸ್ ಉಪನಿರೀಕ್ಷಕರಾಗಿದ್ದ ಬಿ.ಜಿ. ಸುಬ್ಬಾಪುರ್ ಮಠ್ ಅವರು ನಡೆಸಿ ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದ್ದರು. ಸರ್ಕಾರಿ ಅಭಿಯೋಜಕರಾದ ಜುಡಿತ್ ಓಲ್ಗಾ ಮಾರ್ಗರೇಟ್ ಕ್ರಸ್ತಾ ಅವರು ಸಮರ್ಥವಾಗಿ ವಾದ ಮಂಡಿಸಿದ್ದರು.

    Post Views: 129

    Related Posts

    AI ಬಳಸಿ 121 ನಕಲಿ ಬ್ಯಾಂಕಿಂಗ್ ಆ್ಯಪ್ ತಯಾರಿ : 17 ವರ್ಷದ ಬಾಲಕನಿಂದ ₹64.38 ಕೋಟಿ ವಂಚನೆ!!

    July 23, 2026

    ಪುತ್ತೂರು: ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ- ಅತ್ತೆ, ಮಾವ, ನಾದಿನಿ ಅರೆಸ್ಟ್

    July 23, 2026

    ಉಡುಪಿ: ಗಾಂಜಾ ಮಾರಾಟ: 625.83 ಗ್ರಾಂ ಗಾಂಜಾ ಸಹಿತ ಆರೋಪಿ ಬಂಧನ

    July 23, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    AI ಬಳಸಿ 121 ನಕಲಿ ಬ್ಯಾಂಕಿಂಗ್ ಆ್ಯಪ್ ತಯಾರಿ : 17 ವರ್ಷದ ಬಾಲಕನಿಂದ ₹64.38 ಕೋಟಿ ವಂಚನೆ!!

    July 23, 2026

    ಪುತ್ತೂರು: ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ- ಅತ್ತೆ, ಮಾವ, ನಾದಿನಿ ಅರೆಸ್ಟ್

    July 23, 2026

    ಉಡುಪಿ: ಗಾಂಜಾ ಮಾರಾಟ: 625.83 ಗ್ರಾಂ ಗಾಂಜಾ ಸಹಿತ ಆರೋಪಿ ಬಂಧನ

    July 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.