Facebook Twitter Instagram
    Thursday, April 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ 
    ಇತ್ತೀಚಿನ ಸುದ್ದಿ

    13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ 

    April 18, 2026
    Share

    ಉಡುಪಿ :ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ 13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬಿಹಾರ ಮೂಲದ ಮನೋಜ್ ಕುಮಾರ್‌ (41)ನನ್ನು ಕಾಪು ಪೊಲೀಸರು ಬಂಧಿಸಿದ್ದಾರೆ.

    ಕಾರ್ಕಳ-ಉಡುಪಿ ಉಪವಿಭಾಗದ ಪೊಲೀಸ್‌ ಉಪಾಧೀಕ್ಷಕರು ಹಾಗೂ ಕಾಪು ವೃತ್ತದ ಪೊಲೀಸ್ ನಿರೀಕ್ಷಕರ ಮಾರ್ಗದರ್ಶನದಲ್ಲಿ ಕಾಪು ಪೊಲೀಸ್ ಠಾಣೆಯ ಉಪನಿರೀಕ್ಷಕರಾದ ತೇಜಸ್ವಿ ಟಿ.ಐ. ಮತ್ತು ಶುಭಕರ್ ನೇತೃತ್ವದಲ್ಲಿ ವಿಶೇಷ ತಂಡ ರಚಿಸಿ ಕಾರ್ಯಾಚರಣೆ ನಡೆಸಲಾಗಿತ್ತು. ಎಚ್‌.ಸಿ. ಮೊಹಮ್ಮದ್ ರಫೀಕ್ ಹಾಗೂ ಪಿಸಿಗಳಾದ ಗಣೇಶ್ ಮತ್ತು ಗಂಗಾಧರ್ ಅವರು ಬೆಂಗಳೂರಿನ ಯಲಹಂಕದಲ್ಲಿ ಆರೋಪಿಯನ್ನು ಪತ್ತೆಹಚ್ಚಿ ವಶಕ್ಕೆ ಪಡೆದುಕೊಂಡರು.

    ಮಾರ್ಗದರ್ಶನದಲ್ಲಿ ಕಾಪು ಪೊಲೀಸ್ ಠಾಣೆಯ ಉಪನಿರೀಕ್ಷಕರಾದ ತೇಜಸ್ವಿ ಟಿ.ಐ. ಮತ್ತು ಶುಭಕರ್ ನೇತೃತ್ವದಲ್ಲಿ ವಿಶೇಷ ತಂಡ ರಚಿಸಿ ಕಾರ್ಯಾಚರಣೆ ನಡೆಸಲಾಗಿತ್ತು. ಎಚ್‌.ಸಿ. ಮೊಹಮ್ಮದ್ ರಫೀಕ್ ಹಾಗೂ ಪಿಸಿಗಳಾದ ಗಣೇಶ್ ಮತ್ತು ಗಂಗಾಧರ್ ಅವರು ಬೆಂಗಳೂರಿನ ಯಲಹಂಕದಲ್ಲಿ ಆರೋಪಿಯನ್ನು ಪತ್ತೆಹಚ್ಚಿ ವಶಕ್ಕೆ ಪಡೆದುಕೊಂಡರು.

    ಬಂಧಿತನನ್ನು ಏಪ್ರಿಲ್ 16ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು 6 ತಿಂಗಳ ಶಿಕ್ಷೆ ವಿಧಿಸಿದೆ. ನಂತರ ಆರೋಪಿಯನ್ನು ನ್ಯಾಯಾಂಗ ಬಂಧನದೊಂದಿಗೆ ಉಡುಪಿ ಜಿಲ್ಲಾ ಕಾರಾಗೃಹಕ್ಕೆ ಒಪ್ಪಿಸಲಾಗಿದೆ.

    ಆರೋಪಿ ಮನೋಜ್ ಕುಮಾರ್ ಲಾರಿ ಚಾಲಕರಾಗಿದ್ದು, 2012ರಲ್ಲಿ ಕಾಪು ಪೊಲೀಸ್ ಠಾಣಾ ವ್ಯಾಪ್ತಿಯ ಉದ್ಯಾವರದಲ್ಲಿ ಸಂಭವಿಸಿದ ಅಪಘಾತದಲ್ಲಿ ವ್ಯಕ್ತಿಯ ಸಾವಿಗೆ ಕಾರಣನಾಗಿದ್ದ. ಈ ಸಂಬಂಧ ನ್ಯಾಯಾಲಯವು ಶಿಕ್ಷೆ ವಿಧಿಸಿದ ಬಳಿಕ ಆತ ತಲೆಮರೆಸಿಕೊಂಡಿದ್ದನು

    Post Views: 39

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.