Facebook Twitter Instagram
    Thursday, April 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಡಿಜಿಟಲ್ ಅರೆಸ್ಟ್ ಭೇದಿಸಿದ ಸಿಬಿಐ ಪೊಲೀಸ್ : ಮಾಜಿ ಬ್ಯಾಂಕ್ ಅಧಿಕಾರಿ ಸಹಿತ ನಾಲ್ವರ ಬಂಧನ
    ಇತ್ತೀಚಿನ ಸುದ್ದಿ

    ಡಿಜಿಟಲ್ ಅರೆಸ್ಟ್ ಭೇದಿಸಿದ ಸಿಬಿಐ ಪೊಲೀಸ್ : ಮಾಜಿ ಬ್ಯಾಂಕ್ ಅಧಿಕಾರಿ ಸಹಿತ ನಾಲ್ವರ ಬಂಧನ

    April 19, 2026
    Share

    ಹೊಸದಿಲ್ಲಿ/ಹೈದರಾಬಾದ್‌: ಹಿರಿಯ ನಾಗರಿಕರೊಬ್ಬರನ್ನು ಡಿಜಿಟಲ್ ಬಂಧನದಲ್ಲಿರಿಸಿ 1.6 ಕೋಟಿ ರೂ. ಸುಲಿಗೆ ಮಾಡಿದ, ಸೈಬರ್ ವಂಚನೆಯ ಹಗರಣವನ್ನು ಸಿಬಿಐ ಭೇದಿಸಿದೆ. ಪ್ರಕರಣಕ್ಕೆ ಸಂಬಂಧಿಸಿ ಶನಿವಾರ ತೆಲಂಗಾಣ ಹಾಗೂ ಆಂಧ್ರಪ್ರದೇಶದ ಐದು ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದು, ಮಾಜಿ ಸಹಾಯಕ ಬ್ಯಾಂಕ್ ಮ್ಯಾನೇಜ‌ರ್ ಸಹಿತ ಮೂವರನ್ನು ಬಂಧಿಸಿದೆ.ಸುಪ್ರೀಂಕೋರ್ಟ್ ಆದೇಶದ ಮೇರೆಗೆ ಸಿಬಿಐ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿತ್ತು. ಬಂಧಿತ ಆರೋಪಿಗಳನ್ನು ಇಂಡಸ್ಟ್ರಾಂಡ್ ಬ್ಯಾಂಕ್‌ ಮಾಜಿ ಸಹಾಯಕ ಮ್ಯಾನೇಜ‌ರ್ ಡುಬ್ಬಕ್ಕ ಮಹೇಶ್ ಹಾಗೂ ರಾಜೇಶ್ ಕನ್ನಾ ಹಾಗೂ ವಾಯಲ ಶ್ರೀನಿವಾಸ್ ಎಂದು ಗುರುತಿಸಲಾಗಿದೆ.

    ಕಾಲ್ಪನಿಕ ‘ಡಿಜಿಟಲ್ ಬಂಧನದ ‘ ಮೂಲಕ ಹಿರಿಯ ನಾಗರಿಕನನ್ನು ಬೆದರಿಸಿ, ಸುಲಿಗೆ ಮಾಡಿದ ಹಣವನ್ನು ನಕಲಿ ಕಂಪೆನಿಯೊಂದರ ಹೆಸರಿನಲ್ಲಿ ತೆರೆಯಲಾದ ಬ್ಯಾಂಕ್‌ ಖಾತೆಗೆ ವರ್ಗಾಯಿಸಲಾಗಿತ್ತು. ಹಣದ ಮೂಲವನ್ನು ಬಚ್ಚಿಡಲು ವಿವಿಧ ವಾಹಿನಿಗಳ ಮೂಲಕ ಈ ಹಣವು ಖಾತೆಗೆ ಹೋಗುವಂತೆ ಮಾಡಲಾಗಿತ್ತು ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.ಅಕ್ರಮವಾಗಿ ಬ್ಯಾಂಕ್ ಖಾತೆಯನ್ನು ತೆರೆಯವುದಕ್ಕೆ ಮಹೇಶ್ ನೆರವಾಗಿದ್ದರೆ, ಇನ್ನಿಬ್ಬರು ಅಕ್ರಮ ಹಣದ ವರ್ಗಾವಣೆಯನ್ನು ವ್ಯವಸ್ಥೆಗೊಳಿಸಿದ್ದರೆಂದು ಸಿಬಿಐ ಆಪಾದಿಸಿದೆ.

    ಆರೋಪಿಗಳಿಗೆ ಸಂಬಂಧಿಸಿದ ಸ್ಥಳಗಲ್ಲಿ ಸಿಬಿಐ ಶೋಧ ಕಾರ್ಯಾಚರಣೆಯ ವೇಳೆ ಹಲವಾರು ಅಕ್ರಮ ದಾಖಲೆಗಳು ಹಾಗೂ ಇಲೆಕ್ಟ್ರಾನಿಕ್ ಉಪಕರಣಗಳು ಪತ್ತೆಯಾಗಿವೆ, ಇದರಿಂದ ಪ್ರಕರಣದ ಬಗ್ಗೆ ಇನ್ನೂ ಹೆಚ್ಚಿನ ಸುಳಿವು ದೊರೆಯಬಹುದೆಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.

    Post Views: 52

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.