Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ರಾತ್ರಿ ವೇಳೆ ದೇವಾಲಯ ಪ್ರವೇಶಿಸಿದ ವ್ಯಕ್ತಿಯಿಂದ ವಿಗ್ರಹ ಧ್ವಂಸ
    ಇತ್ತೀಚಿನ ಸುದ್ದಿ

    ರಾತ್ರಿ ವೇಳೆ ದೇವಾಲಯ ಪ್ರವೇಶಿಸಿದ ವ್ಯಕ್ತಿಯಿಂದ ವಿಗ್ರಹ ಧ್ವಂಸ

    April 24, 2026
    Share

    ಬೆಳ್ತಂಗಡಿ: ಬಳಂಜ ಗ್ರಾಮದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಬುಧವಾರ ರಾತ್ರಿ ನುಗ್ಗಿದ ಅಜಯ್ ಎಂಬಾತ ದೇವರ ವಿಗ್ರಹವನ್ನು ಭಗ್ನಗೊಳಿಸಿರುವ ಘಟನೆ ವರದಿಯಾಗಿದೆ.

    ಬುಧವಾರ ರಾತ್ರಿ ಥಾರ್ ವಾಹನದಲ್ಲಿ ಬಂದ ಅಜಯ್, ದೇವಸ್ಥಾನದ ಪಕ್ಕದಲ್ಲಿರುವ ಸುಬ್ರಹ್ಮಣ್ಯ ಭಟ್ ಎಂಬುವವರ ಮನೆಗೆ ತೆರಳಿ ‘ಎನ್ನನ್ ಬಚಾವ್ ಮಲ್ಪಿ’ (ನನ್ನನ್ನು ಉಳಿಸಿ) ಎಂದು ಜೋರಾಗಿ ಕೂಗುತ್ತಾ ಮನೆ ಪ್ರವೇಶಿಸಲು ಯತ್ನಿಸಿದ್ದಾನೆ. ಮನೆಯವರು ಆತನನ್ನು ಗದರಿಸಿ ಅಲ್ಲಿಂದ ಕಳುಹಿಸಿದ್ದಾರೆ.ನಂತರ, ಆತ ಬಳಂಜ ದೇವಸ್ಥಾನದ ಪವಿತ್ರ ಜಳಕದ ಕೆರೆಗೆ ಹಾರಿ ಅಲ್ಲಿಂದ ನೇರವಾಗಿ ದೇವಸ್ಥಾನಕ್ಕೆ ಬಂದಿದ್ದಾನೆ. ಪಿಲ್ಲರ್ ಸಹಾಯದಿಂದ ದೇವಸ್ಥಾನದ ಮೇಲ್ಛಾವಣಿ ಏರಿ, ಹಂಚುಗಳನ್ನು ತೆಗೆದು ಒಳಪ್ರವೇಶಿಸಿದ್ದಾನೆ. ಬಳಿಕ ಕೊಡಮಣಿತ್ತಾಯ ದೈವದ ಸನ್ನಿಧಿಗೆ ಇಳಿದು, ಪೀಠದ ಮೇಲಿದ್ದ ಗಂಟೆಯನ್ನು ತೆಗೆದು ಹಂಚಿನ ಬಳಿ ಇಟ್ಟು ಅಪವಿತ್ರಗೊಳಿಸಿದ್ದಾನೆ.ಅಷ್ಟೇ ಅಲ್ಲದೆ, ತೀರ್ಥ ಮಂಟಪದ ಬಳಿ ಇದ್ದ ದೊಡ್ಡ ಗಂಟೆಯನ್ನು ಬಾರಿಸಿ, ಶ್ರೀ ಗೋಪಾಲಕೃಷ್ಣ ದೇವರ ಗರ್ಭಗುಡಿಯನ್ನು ಪ್ರವೇಶಿಸಿದ್ದಾನೆ. ಅಲ್ಲಿ ಪೂಜಿಸಲ್ಪಡುತ್ತಿದ್ದ ವಿಗ್ರಹವನ್ನು ಹೊರತೆಗೆದು ನೆಲಕ್ಕೆ ಎಸೆದು ಭಿನ್ನಗೊಳಿಸಿದ್ದಾನೆ. ಅಲ್ಲದೆ ಗರ್ಭಗುಡಿಯಲ್ಲಿದ್ದ ಪೂಜಾ ಪರಿಕರಗಳನ್ನು ಎಲ್ಲೆಂದರಲ್ಲಿ ಎಸೆದು ಅಸ್ತವ್ಯಸ್ತಗೊಳಿಸಿದ್ದಾನೆ.ಸ್ಥಳಕ್ಕೆ ಧಾವಿಸಿದ ವೇಣೂರು ಪೊಲೀಸರು ಅಜಯ್‌ನನ್ನು ವಿಚಾರಣೆ ನಡೆಸಿ, ಮುಚ್ಚಳಿಕೆ ಬರೆಸಿಕೊಂಡು ಬಿಡುಗಡೆ ಮಾಡಿದ್ದಾರೆ ಎಂದು ವರದಿಯಾಗಿದೆ.

    Post Views: 16

    dakshina kannada mangalore

    Related Posts

    ಪಾರಿವಾಳ ವಿಚಾರದಲ್ಲಿ ಗಲಾಟೆ: ಆಟೋ ಚಾಲಕನ ಕೊಲೆ ಪ್ರಕರಣದಲ್ಲಿ ಐವರು ಅರೆಸ್ಟ್

    April 24, 2026

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.