Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು
    ಇತ್ತೀಚಿನ ಸುದ್ದಿ

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    Share

    ಮೈಸೂರು: ಜಿಲ್ಲೆಯ ಕೆ.ಆರ್. ನಗರ ತಾಲೂಕಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ವಿದ್ಯುತ್ ಅವಘಡಗಳಲ್ಲಿ ಇಬ್ಬರು ಮೃತಪಟ್ಟ ಘಟನೆ ನಡೆದಿದೆ. ಜಮೀನಿನಲ್ಲಿದ್ದ ವಿದ್ಯುತ್ ತಂತಿ ತಗುಲಿ ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದರೆ, ಇನ್ನೊಂದು ಪ್ರಕರಣದಲ್ಲಿ 22 ವರ್ಷದ ಯುವಕ ಪಂಪ್​ಸೆಟ್ ಸರಿ ಮಾಡುತ್ತಿದ್ದ ವೇಳೆ ವಿದ್ಯುತ್ ತಗುಲಿ ಮೃತಪಟ್ಟಿದ್ದಾನೆ. ಎರದೂ ಪ್ರಕರಣಗಳು ಪೊಲೀಸ್ ಠಾಣೆಯಲ್ಲಿ ದಾಖಲಾಗಿವೆ.

    ಪಕ್ಕದ ಜಮೀನಿನಿಂದ ಬಂದಿದ್ದ ವಿದ್ಯುತ್ ತಂತಿ

    ಮೊದಲ ಘಟನೆಯಲ್ಲಿ, ಅಡಗೂರು ಮಾರಗೌಡನಹಳ್ಳಿ ಗ್ರಾಮದ ನಿವಾಸಿ ಮಹದೇವ್ (58) ಜಮೀನಿಗೆ ನೀರು ಹಾಯಿಸಲು ತೆರಳಿದ್ದಾಗ ದುರ್ಘಟನೆ ಸಂಭವಿಸಿದೆ. ಪಕ್ಕದ ಜಮೀನಿನಿಂದ ಬಂದಿದ್ದ ವಿದ್ಯುತ್ ತಂತಿ ತುಂಡಾಗಿ ಬಿದ್ದಿದ್ದು, ಅದನ್ನು ಅರಿಯದೆ ತುಳಿದ ಪರಿಣಾಮ ಅವರಿಗೆ ತೀವ್ರ ವಿದ್ಯುತ್ ಶಾಕ್ ತಗುಲಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

    ಇತ್ತೀಚೆಗಷ್ಟೇ ಮದುವೆಯಾಗಿದ್ದವ ಸಾವು

    ಮತ್ತೊಂದು ಘಟನೆಯಲ್ಲಿ, ಕೆಸ್ತೂರು ಕೊಪ್ಪಲು ಗ್ರಾಮದಲ್ಲಿ 22 ವರ್ಷದ ಯುವಕ ಪುನೀತ್ ವಿದ್ಯುತ್ ಶಾಕ್‌ಗೆ ಬಲಿಯಾಗಿದ್ದಾನೆ. ಪಕ್ಕದ ಜಮೀನಿನ ಪಂಪ್‌ಸೆಟ್ ಮೋಟಾರ್ ದುರಸ್ತಿ ಮಾಡಲು ಹೋಗಿದ್ದ ವೇಳೆ ವಿದ್ಯುತ್ ಪ್ರವಹಿಸಿ ಈ ಅವಘಡ ಸಂಭವಿಸಿದೆ. ನೀರಿನ ತೊಟ್ಟಿಗೆ ಇಳಿದು ಮೋಟಾರ್ ಪರಿಶೀಲಿಸುತ್ತಿದ್ದಾಗ ಆಕಸ್ಮಿಕವಾಗಿ ವಿದ್ಯುತ್ ಹರಿದು ಪುನೀತ್ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.

    ಇತ್ತೀಚೆಗಷ್ಟೇ ಮದುವೆಯಾಗಿದ್ದ ಪುನೀತ್ ಸಾವಿನಿಂದ ಕುಟುಂಬ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿದೆ. ಈ ಎರಡು ಘಟನೆಗಳೂ ಕೆ.ಆರ್.ನಗರ ತಾಲೂಕಿನಲ್ಲಿ ನಡೆದಿದ್ದು, ಸ್ಥಳೀಯರಲ್ಲಿ ಆತಂಕ ಹೆಚ್ಚಿಸಿದೆ. ಸಂಬಂಧಿತ ಪ್ರಕರಣಗಳು ಕೆ.ಆರ್.ನಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

    Post Views: 18

    karnataka PoliceInvestigation

    Related Posts

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ಪಾರಿವಾಳ ವಿಚಾರದಲ್ಲಿ ಗಲಾಟೆ: ಆಟೋ ಚಾಲಕನ ಕೊಲೆ ಪ್ರಕರಣದಲ್ಲಿ ಐವರು ಅರೆಸ್ಟ್

    April 24, 2026

    ರಾತ್ರಿ ವೇಳೆ ದೇವಾಲಯ ಪ್ರವೇಶಿಸಿದ ವ್ಯಕ್ತಿಯಿಂದ ವಿಗ್ರಹ ಧ್ವಂಸ

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.