Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಿಮಾನದಲ್ಲಿ ಬಂದು ಕಳ್ಳತನ, ರೈಲಿನಲ್ಲಿ ಪರಾರಿ: ಅಂತರರಾಜ್ಯ ಗ್ಯಾಂಗ್ ಬಯಲಿಗೆ
    ಇತ್ತೀಚಿನ ಸುದ್ದಿ

    ವಿಮಾನದಲ್ಲಿ ಬಂದು ಕಳ್ಳತನ, ರೈಲಿನಲ್ಲಿ ಪರಾರಿ: ಅಂತರರಾಜ್ಯ ಗ್ಯಾಂಗ್ ಬಯಲಿಗೆ

    April 25, 2026
    Share

    ಬೆಂಗಳೂರು: ನಗರದ ವಿವಿಧೆಡೆ ಬಿಎಸ್‌ಎನ್‌ಎಲ್ ಸಿಬ್ಬಂದಿಯ ಸೋಗಿನಲ್ಲಿ ಬೆಲೆಬಾಳುವ ಕಾಪರ್ ವೈರ್ ಹಾಗೂ ಮಾಡ್ಯೂಲ್‌ಗಳನ್ನು ಕದಿಯುತ್ತಿದ್ದ ಉತ್ತರ ಪ್ರದೇಶ ಮೂಲದ ಮೂವರು ಹೈಟೆಕ್ ಅಂತರರಾಜ್ಯ ಕಳ್ಳರನ್ನು ಯಶವಂತಪುರ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು 7 ಲಕ್ಷ ರೂಪಾಯಿ ಮೌಲ್ಯದ ತಾಮ್ರದ ಕೇಬಲ್ ಹಾಗೂ ಕೃತ್ಯಕ್ಕೆ ಬಳಸುತ್ತಿದ್ದ ಪರಿಕರಗಳನ್ನು ವಶಪಡಿಸಿಕೊಳ್ಳುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

    ಉತ್ತರ ಪ್ರದೇಶ ಮೂಲದ ರವಿ ಚೌಹಾಣ್, ಸಂದೀಪ್ ಮತ್ತು ಸೈಯದ್ ಜಾಹೇದ್ ಬಂಧಿತ ಆರೋಪಿಗಳಾಗಿದ್ದು, ಇವರೊಂದಿಗೆ ಕೃತ್ಯದಲ್ಲಿ ಭಾಗಿಯಾಗಿದ್ದ ಶೋಯೆಜ್ ಎಂಬಾತ ಸದ್ಯ ತಲೆಮರೆಸಿಕೊಂಡಿದ್ದಾನೆ. ಪೊಲೀಸರು ಆತನಿಗಾಗಿ ಬಲೆ ಬೀಸಿದ್ದಾರೆ. ಬಿಎಸ್‌ಎನ್‌ಎಲ್ ಅಧಿಕಾರಿಗಳು ನೀಡಿದ ದೂರಿನ ಮೇರೆಗೆ ತನಿಖೆ ಕೈಗೊಂಡ ಪೊಲೀಸರು, ಅತ್ಯಂತ ವ್ಯವಸ್ಥಿತವಾಗಿ ನಡೆಯುತ್ತಿದ್ದ ಈ ದೊಡ್ಡ ಜಾಲವನ್ನು ಭೇದಿಸಿದ್ದಾರೆ.

    ಈ ಗ್ಯಾಂಗ್‌ನ ಕಳ್ಳತನದ ಶೈಲಿ ಪೊಲೀಸರನ್ನೇ ಬೆರಗುಗೊಳಿಸಿದೆ. ಆರೋಪಿಗಳು ಕಳ್ಳತನ ಮಾಡುವ ಉದ್ದೇಶದಿಂದಲೇ ಉತ್ತರ ಭಾರತದಿಂದ ಬೆಂಗಳೂರಿಗೆ ವಿಮಾನದ ಮೂಲಕ ಪ್ರಯಾಣಿಸುತ್ತಿದ್ದರು. ನಗರಕ್ಕೆ ಬಂದಿಳಿದ ನಂತರ ಸಾರ್ವಜನಿಕರಿಗೆ ಯಾವುದೇ ಅನುಮಾನ ಬಾರದಂತೆ ಬಿಎಸ್‌ಎನ್‌ಎಲ್ ಸಿಬ್ಬಂದಿಯಂತೆ ನೀಲಿ ಬಣ್ಣದ ಸಮವಸ್ತ್ರ ಧರಿಸುತ್ತಿದ್ದರು. ರಿಪೇರಿ ಕೆಲಸದ ನೆಪದಲ್ಲಿ ಫುಟ್‌ಪಾತ್‌ಗಳ ಬಳಿ ಬರುತ್ತಿದ್ದ ಇವರು, ಪಿಕಾಸಿ, ಸುತ್ತಿಗೆ ಹಾಗೂ ಕಟರ್‌ಗಳನ್ನು ಬಳಸಿ ಕೇಬಲ್ ಪಿಲ್ಲರ್‌ಗಳನ್ನು ಒಡೆದು ತಾಮ್ರದ ತಂತಿಗಳನ್ನು ಕದಿಯುತ್ತಿದ್ದರು.

    ಬಂಧಿತರು ಕೇವಲ ಬೆಂಗಳೂರು ಮಾತ್ರವಲ್ಲದೆ ದೇಶದ ವಿವಿಧ ರಾಜ್ಯಗಳಲ್ಲಿ ದಿನಕ್ಕೊಂದು ನಗರವನ್ನು ಗುರಿಯಾಗಿಸಿಕೊಂಡು ಕಳ್ಳತನ ಮಾಡುತ್ತಿದ್ದರು. ತನಿಖೆಯ ವೇಳೆ ಇವರಿಂದ ಸುಮಾರು 4,140 ಮಾಡ್ಯೂಲ್‌ಗಳು ಮತ್ತು 60 ಮೀಟರ್‌ಗಳಿಗೂ ಹೆಚ್ಚು ಉದ್ದದ ತಾಮ್ರದ ಕೇಬಲ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಕಳ್ಳತನದಿಂದಾಗಿ ಬೆಂಗಳೂರಿನ ಮಲ್ಲೇಶ್ವರಂ, ಸದಾಶಿವನಗರ, ಮತ್ತಿಕೆರೆ ಹಾಗೂ ಯಶವಂತಪುರ ಭಾಗಗಳಲ್ಲಿ ಇಂಟರ್ನೆಟ್ ಮತ್ತು ಟೆಲಿಫೋನ್ ಸಂಪರ್ಕದಲ್ಲಿ ಭಾರಿ ವ್ಯತ್ಯಯ ಉಂಟಾಗಿತ್ತು. 

    ಕದ್ದ ಮಾಲುಗಳನ್ನು ಸಾಗಿಸಲು ಇವರು ರೈಲು ಮಾರ್ಗವನ್ನು ಬಳಸುತ್ತಿದ್ದರು. ವಿಮಾನದಲ್ಲಿ ಬಂದು ಕಳ್ಳತನ ಮಾಡಿ, ಭಾರವಾದ ಮಾಲಿನೊಂದಿಗೆ ರೈಲಿನಲ್ಲಿ ಪರಾರಿಯಾಗುವುದು ಇವರ ರೂಢಿಯಾಗಿತ್ತು. ಪ್ರಸ್ತುತ ಯಶವಂತಪುರ ಠಾಣೆಯಲ್ಲಿ ಸಾರ್ವಜನಿಕ ಆಸ್ತಿ ಹಾನಿ ತಡೆ ಕಾಯ್ದೆ ಹಾಗೂ ಟೆಲಿಗ್ರಾಫ್ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ತಲೆಮರೆಸಿಕೊಂಡಿರುವ ಮತ್ತೊಬ್ಬ ಆರೋಪಿಯ ಪತ್ತೆಗೆ ಪೊಲೀಸರು ಕಾರ್ಯಾಚರಣೆ ತೀವ್ರಗೊಳಿಸಿದ್ದಾರೆ.

    Post Views: 156

    karnataka PoliceInvestigation

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.