Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ರಾಜ್ಯ ಸುದ್ದಿ»‘ಕಾಂತಾರ’ ಹೇಳಿಕೆ ವಿವಾದ: ರಣವೀರ್‌ಗೆ ಒಂದು ತಿಂಗಳಲ್ಲಿ ಚಾಮುಂಡಿ ಬೆಟ್ಟಕ್ಕೆ ಭೇಟಿ ಆದೇಶ
    ರಾಜ್ಯ ಸುದ್ದಿ

    ‘ಕಾಂತಾರ’ ಹೇಳಿಕೆ ವಿವಾದ: ರಣವೀರ್‌ಗೆ ಒಂದು ತಿಂಗಳಲ್ಲಿ ಚಾಮುಂಡಿ ಬೆಟ್ಟಕ್ಕೆ ಭೇಟಿ ಆದೇಶ

    April 25, 2026
    Share

    ಬೆಂಗಳೂರು : ‘ಕಾಂತಾರ ಚಾಪ್ಟರ್-1’ ಚಿತ್ರದ ದೈವದ ಪಾತ್ರವನ್ನು ಅಣಕಿಸಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಗೆ ಕರ್ನಾಟಕ ಹೈಕೋರ್ಟ್ ವಿಶಿಷ್ಟ ಷರತ್ತಿನೊಂದಿಗೆ ರಿಲೀಫ್ ನೀಡಿದೆ. ರಣವೀರ್ ಸಲ್ಲಿಸಿದ ಬೇಷರತ್ ಕ್ಷಮಾಪಣೆಯನ್ನು ಅಂಗೀಕರಿಸಿದ ನ್ಯಾಯಾಲಯ, ಒಂದು ತಿಂಗಳೊಳಗೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡುವಂತೆ ನಿರ್ದೇಶಿಸಿ ಅರ್ಜಿ ವಿಲೇವಾರಿ ಮಾಡಿದೆ.

    2025ರ ನವೆಂಬರ್‌ನಲ್ಲಿ ಗೋವಾದಲ್ಲಿ ನಡೆದ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ (IFFI) ರಣವೀರ್ ಸಿಂಗ್ ಅವರು ‘ಕಾಂತಾರ’ ಚಿತ್ರದ ಬಗ್ಗೆ ಮಾತನಾಡುವಾಗ ದೈವದ ನರ್ತನ ಮತ್ತು ಕೂಗನ್ನು ಅಪಹಾಸ್ಯ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಸಂಬಂಧ ವಕೀಲ ಪ್ರಶಾಂತ್ ಮೆಥಲ್ ಅವರು ಹೈಗ್ರೌಂಡ್ಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದನ್ನು ರದ್ದುಪಡಿಸುವಂತೆ ಕೋರಿ ರಣವೀರ್ ಹೈಕೋರ್ಟ್ ಮೆಟ್ಟಿಲೇರಿದ್ದರು.

    ವಿಚಾರಣೆ ವೇಳೆ ರಣವೀರ್ ಪರ ಹಿರಿಯ ವಕೀಲ ಸಜನ್ ಪೂವಯ್ಯ ಅವರು ನಟನ ಪ್ರಮಾಣ ಪತ್ರವನ್ನು ಸಲ್ಲಿಸಿದರು. “ನಾನು ಮುಂಬೈನ ಸಿಂಧಿ ಕುಟುಂಬದವನಾಗಿದ್ದು, ದೈವದ ಆಚರಣೆಯ ಸೂಕ್ಷ್ಮತೆಗಳ ಬಗ್ಗೆ ನನಗೆ ಅರಿವಿರಲಿಲ್ಲ. ಭಕ್ತರ ಭಾವನೆಗೆ ನೋವಾಗಿದ್ದರೆ ಪ್ರಾಮಾಣಿಕವಾಗಿ ಬೇಷರತ್ ಕ್ಷಮೆ ಯಾಚಿಸುತ್ತೇನೆ” ಎಂದು ರಣವೀರ್ ಪ್ರಮಾಣ ಪತ್ರದಲ್ಲಿ ತಿಳಿಸಿದ್ದಾರೆ.

    “ರಣವೀರ್ ಅವರು ಮೈಸೂರಿನ ಚಾಮುಂಡಿ ದೇವಸ್ಥಾನಕ್ಕೆ ಭೇಟಿ ನೀಡಲು ಸಿದ್ಧರಿದ್ದಾರೆ. ಆದರೆ, ಜನದಟ್ಟಣೆಯ ನಡುವೆ ಸುರಕ್ಷತೆಯ ದೃಷ್ಟಿಯಿಂದ ದಿನಾಂಕ ನಿಗದಿಪಡಿಸುವುದು ವಿಳಂಬವಾಗುತ್ತಿದೆ” ಎಂದು ರಣವೀರ್ ಪರ ವಕೀಲರು ನ್ಯಾಯಾಲಯದ ಗಮನಕ್ಕೆ ತಂದರು. ಇದಕ್ಕೆ ದೂರುದಾರರು, “ಕರ್ನಾಟಕ ಪೊಲೀಸರು ಸಬಲರಾಗಿದ್ದಾರೆ, ಅವರು ಸೂಕ್ತ ಭದ್ರತೆ ನೀಡಲಿದ್ದಾರೆ” ಎಂದು ವಾದಿಸಿದರು. ಅಂತಿಮವಾಗಿ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠವು, ಮುಂದಿನ ಒಂದು ತಿಂಗಳ ಒಳಗಾಗಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸುವಂತೆ ಸೂಚಿಸಿ ಪ್ರಕರಣವನ್ನು ಅಂತ್ಯಗೊಳಿಸಿತು.

    Post Views: 196

    culture karnataka

    Related Posts

    CID ಪೊಲೀಸರಿಂದ IAS ಅಧಿಕಾರಿ ಗ್ಯಾನೇಂದ್ರ ಕುಮಾರ್ ಅರೆಸ್ಟ್

    August 30, 2026

    ರಾಜ್ಯದಲ್ಲಿ ‘ಪೊಲೀಸ್ ರಾಜ್ ವ್ಯವಸ್ಥೆ’ ಕೊನೆಗೊಳ್ಳಬೇಕು, ಇಲ್ಲವಾದರೆ ನ್ಯಾಯಾಲಯವೇ ಕಠಿಣ ಕ್ರಮ: ಹೈಕೋರ್ಟ್ ಎಚ್ಚರಿಕೆ

    August 28, 2026

    ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳು ದಿನದ 24 ಗಂಟೆಯೂ ಸುಸ್ಥಿತಿಯಲ್ಲಿರಬೇಕು- ಹೈಕೋರ್ಟ್ ಖಡಕ್ ಆದೇಶ

    August 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026

    ಮಂಗಳೂರು : ಭಜನೆ ಮಾಡುತ್ತಲೇ ಕುಸಿದು ಬಿದ್ದ ಯುವಕ, ಹೃದಯಾಘಾತದಿಂದ ಸಾವು

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.