Facebook Twitter Instagram
    Monday, June 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಪ್ಪಿನಂಗಡಿಯಲ್ಲಿ ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿದ ಅಪರಿಚಿತ: ಸ್ಥಳೀಯರಿಂದ ಬಂಧನ
    ಇತ್ತೀಚಿನ ಸುದ್ದಿ

    ಉಪ್ಪಿನಂಗಡಿಯಲ್ಲಿ ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿದ ಅಪರಿಚಿತ: ಸ್ಥಳೀಯರಿಂದ ಬಂಧನ

    April 27, 2026
    Share

    ಉಪ್ಪಿನಂಗಡಿ: ನೀರು ಕೇಳುವ ನೆಪದಲ್ಲಿ ಹಾಡಹಗಲೇ ಮನೆಗೆ ಬಂದು ಮನೆಯಲ್ಲಿ ಮಹಿಳೆಯರೇ ಇರುವುದನ್ನು ಖಚಿತಪಡಿಸಿಕೊಂಡು ಮನೆಗೆ ನುಗ್ಗಿ ಬಾಗಿಲ ಚಿಲಕ ಹಾಕಿ ಮನೆ ಮಂದಿಯನ್ನು ಭೀತಿಗೊಳಪಡಿಸಿದ್ದ ಅಪರಿಚಿತ ವ್ಯಕ್ತಿಯನ್ನು ಉಪ್ಪಿನಂಗಡಿಯ ನಾಗರಿಕರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ನಡೆದಿದೆ.

    ಇಲ್ಲಿನ ಬ್ಯಾಂಕ್ ರಸ್ತೆಯ ಬಳಿ ವೃದ್ದೆಯೋರ್ವರು ಮಾತ್ರ ಮನೆಯಲ್ಲಿದ್ದ ವೇಳೆ ನೀರು ಕೇಳುವ ನೆಪದಲ್ಲಿ ಬಂದ ವ್ಯಕ್ತಿಯು ವೃದ್ದೆ ನೀರು ತರಲೆಂದು ಅಡುಗೆ ಕೋಣೆಗೆ ಹೋದ ವೇಳೆ ನೇರವಾಗಿ ಮನೆಗೆ ನುಗ್ಗಿದವನೇ ಮನೆಯ ಬಾಗಿಲ ಚಿಲಕ ಹಾಕಿದ್ದ ಇದನ್ನು ಕಂಡು ವೃದ್ದೆ ಭೀತಿಯಿಂದ ಬೊಬ್ಬಿರಿಸಿದಾಗ ಅಲ್ಲಿಂದ ಓಡಿ ಹೋಗಿ ಸನಿಹದಲ್ಲೇ ಇದ್ದ ಇನ್ನೊಂದು ಒಂಟಿ ಮಹಿಳೆ ಇರುವ ಮನೆಯ ಕಟ್ಟಡದ ಕೊಠಡಿಯೊಂದಕ್ಕೆ ನುಗ್ಗಿ ಬಾಗಿಲ ಚಿಲಕ ಹಾಕಲೆತ್ನಿಸಿದ್ದ. ಇದನ್ನು ಗಮನಿಸಿದ ಮನೆ ಮಹಿಳೆ ಮತ್ತು ಸ್ಥಳೀಯರು ಬೊಬ್ಬೆ ಹೊಡೆದಾಗ ಅಲ್ಲಿಂದ ಪರಾರಿಯಾದ ಈತ ಉದ್ಯಮಿಯೋರ್ವರ ಮನೆಯ ಹಿಂಭಾಗದ ಕಟ್ಟಡದಲ್ಲಿ ಅವಿತು ಕೂತಿದ್ದ. ಅವನನ್ನು ಹಿಂಬಾಲಿಸಿಕೊಂಡು ಬಂದ ಸ್ಥಳೀಯರು ಈ ಬಗ್ಗೆ ಉದ್ಯಮಿಗೆ ಮಾಹಿತಿ ನೀಡಿ , ಆತನನ್ನು ಹಿಡಿದು ಪೊಲೀಸರಿಗೊಪ್ಪಿಸಿದರು.ಪ್ರಾರಂಭದಲ್ಲಿ ಮೂಕ ಭಾಷೆಯಲ್ಲಿ ನೀರು ಕೇಳುತ್ತಿದ್ದ ಈತ ಪೊಲೀಸರಿಗೊಪ್ಪಿಸುವ ವೇಳೆ ಮಲೆಯಾಳಿ ಭಾಷೆಯಲ್ಲಿ ಮಾತನಾಡಿ ತಾನು ರಬ್ಬರ್ ಟ್ಯಾಪಿಂಗ್ ವೃತ್ತಿಯವನೆಂದು ತಿಳಿಸಿದ್ದ. ಬಿಸಿಲ ಬೇಗೆಯಲ್ಲಿ ಬಳಲಿ ಬಂದಾತನಿಗೆ ನೀರು ಕೊಡಲೆಂದು ಮಾನವೀಯ ನೆಲೆಯಲ್ಲಿ ಸ್ಪಂದಿಸಿದಾಗ ಈ ರೀತಿಯಲ್ಲಿ ಮನೆಗೆ ನುಗ್ಗಿದ ವ್ಯಕ್ತಿಯ ಬಗ್ಗೆ ಪರಿಸರದಲ್ಲಿ ಭೀತಿ ಮೂಡಿದ್ದು, ಪೊಲೀಸ್ ಅಧಿಕಾರಿಗಳು ವಶದಲ್ಲಿರುವ ವ್ಯಕ್ತಿಯ ಬಗ್ಗೆ ಪೂರ್ವಾಪರ ವಿಚಾರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ನಾಗರಿಕರು ಅಗ್ರಹಿಸಿದ್ದಾರೆ.

    Post Views: 159

    Related Posts

    MCC ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

    June 15, 2026

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    MCC ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

    June 15, 2026

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.