Facebook Twitter Instagram
    Monday, June 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಳ್ಳಾಲ: ಝುಬೇರ್ ಕೊಲೆ ಮತ್ತು ಇಲ್ಯಾಸ್ ಕೊಲೆಯತ್ನ ಪ್ರಕರಣ- ಆರೋಪಿಗೆ ಜೀವಾವಧಿ ಶಿಕ್ಷೆ
    ಇತ್ತೀಚಿನ ಸುದ್ದಿ

    ಉಳ್ಳಾಲ: ಝುಬೇರ್ ಕೊಲೆ ಮತ್ತು ಇಲ್ಯಾಸ್ ಕೊಲೆಯತ್ನ ಪ್ರಕರಣ- ಆರೋಪಿಗೆ ಜೀವಾವಧಿ ಶಿಕ್ಷೆ

    April 28, 2026
    Share

    ಮಂಗಳೂರು: ಉಳ್ಳಾಲದ ಮುಕ್ಕಚೇರಿಯಲ್ಲಿ 2017ರ ಅ.4ರಂದು ರಾತ್ರಿ ಝುಬೇರ್ ಎಂಬವರ ಕೊಲೆ ಮತ್ತು ಇಲ್ಯಾಸ್ ಎಂಬವರ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಮುಕ್ಕಚೇರಿಯ ಅಬ್ದುಲ್ ರಹ್ಮಾನ್ ಸುಹೇಲ್ ಎಂಬಾತನಿಗೆ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ಪ್ರಕಟಿಸಿದೆ.

    ಝುಬೇರ್ ಮತ್ತು ಇಲ್ಯಾಸ್ ಮಾತನಾಡುತ್ತಿದ್ದ ವೇಳೆ ತಂಡವೊಂದು ಮಾರಕಾಯುಧದಿಂದ ದಾಳಿ ನಡೆಸಿ ಝುಬೇರ್‌ನನ್ನು ಕೊಲೆ ಮಾಡಿತ್ತು. ತಡೆಯಲು ಹೋದ ಇಲ್ಯಾಸ್ ನಿಗೂ ತಲವಾರಿನಿಂದ ದಾಳಿ ಮಾಡಿ ಗಂಭೀರ ಗಾಯಗೊಳಿಸಿತ್ತು.

    ಈ ಬಗ್ಗೆ ಅಂದಿನ ಇನ್‌ಸ್ಪೆಕ್ಟರ್ ಗೋಪಿಕೃಷ್ಣ ಕೆ.ಆರ್. ಆರೋಪಿಗಳಾದ ಅಬ್ದುಲ್ ರಹಿಮಾನ್ ಸುಹೃಲ್, ನಿಝಾಮ್ ಯಾನೆ ನಿಝಾಮುದ್ದೀನ್, ತಾಜುದ್ದೀನ್, ಮುಸ್ತಫಾ ಯಾನೆ ಮುಹಮ್ಮದ್ ಮುಸ್ತಫಾ, ಅಲ್ತಾಫ್, ಆಸೀಫ್ ಯಾನೆ ಮಂದ ಆಸೀಫ್, ನಾಸೀರ್ ಯಾನೆ ಕಡಪ್ಪರ ನಾಸಿರ್ ಎಂಬವರ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

    ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ನಿಝಾಮ್ ಯಾನೆ ನಿಝಾಮುದ್ದೀನ್, ತಾಜುದ್ದೀನ್, ಮುಸ್ತಫಾ ಎಂಬವರಿಗೆ 2022ರ ಎಪ್ರಿಲ್ 20ರಂದು ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿತ್ತು. ಆಸೀಫ್ ಯಾನೆ ಮಂದ ಆಸೀಫ್ ಮತ್ತು ನಾಸಿರ್ ಯಾನೆ ಕಡಪ್ಪರ ನಾಸಿರ್‌ನನ್ನು ಖುಲಾಸೆಗೊಳಿಸಿತ್ತು. ಐದನೆ ಆರೋಪಿ ಅಲ್ತಾಫ್ ಮೃತಪಟ್ಟಿದ್ದ.

    ನ್ಯಾಯಾಲಯದಿಂದ ಜಾಮೀನು ಪಡೆದು ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಅಬ್ದುಲ್ ರಹಿಮಾನ್ ಸುಹೇಲ್‌ನನ್ನು ಪೊಲೀಸರು ಮತ್ತೆ ಬಂಧಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶೆ ಸುನೀತಾ ಎಪ್ರಿಲ್ 22ರಂದು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಸರಕಾರದ ಪರವಾಗಿ ಮೋಹನ್ ವಾದಿಸಿದ್ದರು.

    Post Views: 110

    Related Posts

    MCC ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

    June 15, 2026

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    MCC ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

    June 15, 2026

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.