ಮಂಜೇಶ್ವರ: ಕಾರಿನಲ್ಲಿ ಸಾಗಿಸುತ್ತಿದ್ದ 50 ಗ್ರಾಂ ಎಂಡಿಎಂಎ ಮಾದಕ ವಸ್ತು ಸಹಿತ ಮೂವರನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಕಾಸರಗೋಡು ಅಲಂಪಾಡಿಯ ಸಿ ಎ.ಮುಹಮ್ಮದ್ ಸಹಲ್ , ಎರ್ನಾಕುಲಂ ನ ಅರುಣ್ ಕುಮಾರ್, ವಡಗರದ ಎಂ. ಪಿ ಅನೂಷ್ ಬಂಧಿತರು. ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿಯಂತೆ ಕಾರ್ಯಾಚರಣೆ ನಡೆಸಿದ ಪೊಲೀಸರು ಪಾವೂರು ಸಮೀಪ ಸ್ವಿಫ್ಟ್ ಕಾರನ್ನು ತಡೆದು ನಿಲ್ಲಿಸಿ ತಪಾಸಣೆ ನಡೆಸಿದಾಗ ಎಂಡಿಎ ಎ ಪತ್ತೆಯಾಗಿದ್ದು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.




