Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು ಜೈಲಿನಲ್ಲಿ ವಿಚಿತ್ರ ಘಟನೆ: ಬಂಧಿಯ ದೇಹದೊಳಗೆ ಅಡಗಿಸಿದ್ದ ಮೊಬೈಲ್ ಪತ್ತೆ
    ಇತ್ತೀಚಿನ ಸುದ್ದಿ

    ಮಂಗಳೂರು ಜೈಲಿನಲ್ಲಿ ವಿಚಿತ್ರ ಘಟನೆ: ಬಂಧಿಯ ದೇಹದೊಳಗೆ ಅಡಗಿಸಿದ್ದ ಮೊಬೈಲ್ ಪತ್ತೆ

    May 1, 2026
    Share

    ಮಂಗಳೂರು : ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾ ಬಂಧಿಯೊಬ್ಬ ಕಾರಾಗೃಹಕ್ಕೆ ಮರಳುವಾಗ ಗುದದ್ವಾರದಲ್ಲಿ ಮೊಬೈಲ್ ಫೋನ್ ಅಡಗಿಸಿಟ್ಟು ತಂದಿದ್ದ ಘಟನೆ ಇಲ್ಲಿನ ಜಿಲ್ಲಾ ಕಾರಾಗೃಹದಲ್ಲಿ ನಡೆದಿದೆ. ಈ ಸಂಬಂಧ ಕಾರಾಗೃಹದ ಅಧೀಕ್ಷಕ ಶರಣಬಸಪ್ಪ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

    ಮೊಹಮ್ಮದ್ ತೋಹಿದ್ ಎಂಬ ವಿಚಾರಣಾ ಬಂಧಿಯನ್ನು ಏಪ್ರಿಲ್ 24ರಂದು ಚಿಕಿತ್ಸೆಗಾಗಿ ವೆನ್ಲಾಕ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಏಪ್ರಿಲ್ 29ರಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿ ಸಂಜೆ 5:15ಕ್ಕೆ ಬೆಂಗಾವಲು ಸಿಬ್ಬಂದಿಯೊಂದಿಗೆ ಕಾರಾಗೃಹದ ಮುಖ್ಯದ್ವಾರಕ್ಕೆ ಆತನನ್ನು ಕರೆತರಲಾಯಿತು.

    ಮುಖ್ಯದ್ವಾರದಲ್ಲಿ ಕರ್ತವ್ಯದಲ್ಲಿದ್ದ ಕೆಎಸ್‌ಐಎಸ್‌ಎಫ್ (KSISF) ಸಿಬ್ಬಂದಿಗಳು ಎಚ್‌ಎಚ್‌ಎಂಡಿ (HHMD) ಯಂತ್ರದ ಮೂಲಕ ತಪಾಸಣೆ ನಡೆಸಿದಾಗ ಬಂಧಿಯ ಗುದದ್ವಾರದ ಬಳಿ ಅನುಮಾನಾಸ್ಪದ ಶಬ್ದ ಕೇಳಿಬಂದಿದೆ. ಅಧೀಕ್ಷಕರು ಸ್ಥಳಕ್ಕೆ ಬಂದು ವಿಚಾರಿಸಿದಾಗ, ತಾನು ಗುದದ್ವಾರದಲ್ಲಿ ಮೊಬೈಲ್ ಇಟ್ಟುಕೊಂಡಿರುವುದಾಗಿ ತೋಹಿದ್ ಒಪ್ಪಿಕೊಂಡಿದ್ದಾನೆ. ಕೂಡಲೇ ಆತನನ್ನು ಮತ್ತೆ ವೆನ್ಲಾಕ್ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆ ನಡೆಸಿದಾಗ, ಆತನ ಗುದದ್ವಾರದಿಂದ ಒಂದು ಸಣ್ಣ ಗಾತ್ರದ ಮೊಬೈಲ್ ಫೋನ್ (SIA VANTAGE Pro Mini27) ಹೊರತೆಗೆಯಲಾಗಿದೆ.

    Post Views: 415

    mangalore PoliceInvestigation

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.