ದಾಂಡೇಲಿ/ಬೆಂಗಳೂರು: ರಾಜ್ಯದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಕೌಟುಂಬಿಕ ಕಲಹ ಹಾಗೂ ಕಿರುಕುಳಕ್ಕೆ ಇಬ್ಬರು ಬಲಿಯಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ಪತ್ನಿಯ ಅನೈತಿಕ ಸಂಬಂಧ ಹಾಗೂ ಮಾನಸಿಕ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡಿದ್ದರೆ, ಇತ್ತ ರಾಜಧಾನಿ ಬೆಂಗಳೂರಿನಲ್ಲಿ ವರದಕ್ಷಿಣೆ ಕಿರುಕುಳ ತಾಳಲಾರದೆ ಗೃಹಿಣಿಯೊಬ್ಬರು ನೇಣಿಗೆ ಶರಣಾಗಿದ್ದಾರೆ.
ರಾಜ್ಯದಲ್ಲಿ ನಡೆದ ಎರಡು ಬೇರೆ ಬೇರೆ ಕೌಟುಂಬಿಕ ಕಲಹದ ಘಟನೆಗಳಲ್ಲಿ ಇಬ್ಬರು ಬಲಿಯಾಗಿದ್ದಾರೆ. ದಾಂಡೇಲಿಯಲ್ಲಿ ಪತ್ನಿಯ ಅನೈತಿಕ ಸಂಬಂಧ ಹಾಗೂ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡರೆ, ಬೆಂಗಳೂರಿನಲ್ಲಿ ವರದಕ್ಷಿಣೆಗಾಗಿ ಕಿರುಕುಳ ನೀಡಿದ ಪರಿಣಾಮ ಗೃಹಿಣಿ ನೇಣಿಗೆ ಶರಣಾಗಿದ್ದಾರೆ. ಈ ಘಟನೆಗಳ ಕುರಿತು ಪೋಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.




