Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಟೀಲು ದೇವಸ್ಥಾನ ಬಳಿ ಪೊಲೀಸ್ ಕರ್ತವ್ಯಕ್ಕೆ ಅಡ್ಡಿ: ಮಹಿಳೆ ವಿರುದ್ಧ FIR
    ಇತ್ತೀಚಿನ ಸುದ್ದಿ

    ಕಟೀಲು ದೇವಸ್ಥಾನ ಬಳಿ ಪೊಲೀಸ್ ಕರ್ತವ್ಯಕ್ಕೆ ಅಡ್ಡಿ: ಮಹಿಳೆ ವಿರುದ್ಧ FIR

    May 3, 2026
    Share

    ಬಜಪೆ : ಕಟೀಲು ದೇವಸ್ಥಾನದ ಪರಿಸರದಲ್ಲಿ ಸಂಚಾರ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕರ್ತವ್ಯದಲ್ಲಿದ್ದ ಪೊಲೀಸ್ ನಿರೀಕ್ಷಕರು ಹಾಗೂ ಸಿಬ್ಬಂದಿಯನ್ನು ಸಾರ್ವಜನಿಕವಾಗಿ ನಿಂದಿಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಬೆಂಗಳೂರು ಮೂಲದ ಸಂಧ್ಯಾ ಎಂಬ ಮಹಿಳೆಯ ವಿರುದ್ಧ ಬಜಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

    ಮೇ 1ರಂದು ಬುದ್ಧ ಪೂರ್ಣಿಮಾ ಮತ್ತು ರಜಾ ದಿನವಾದ್ದರಿಂದ ಕಟೀಲು ದೇವಸ್ಥಾನದಲ್ಲಿ ಅತೀ ಹೆಚ್ಚು ಭಕ್ತರ ದಟ್ಟಣೆ ಇತ್ತು. ಮಲ್ಲಿಗೆಯಂಗಡಿ ಜಂಕ್ಷನ್ ಬಳಿ ಬಜಪೆ ಪೊಲೀಸ್ ನಿರೀಕ್ಷಕ ಬಾಲಕೃಷ್ಣ ಹೆಚ್.ಎನ್. ಹಾಗೂ ಸಿಬ್ಬಂದಿ ವಾಹನ ದಟ್ಟಣೆ ನಿಯಂತ್ರಿಸುತ್ತಿದ್ದರು. ಮಧ್ಯಾಹ್ನ 1:45ರ ಸುಮಾರಿಗೆ ಬಿಳಿ ಬಣ್ಣದ ಟೆಂಪೋ ಟ್ರಾವೆಲರ್ಸ್‌ನಲ್ಲಿ ಬಂದ ಸಂಧ್ಯಾ ಎಂಬವರು, ಪೊಲೀಸರು ಸೂಚಿಸಿದ ಪಾರ್ಕಿಂಗ್ ಜಾಗಕ್ಕೆ ಹೋಗಲು ನಿರಾಕರಿಸಿ ವಿವಾದ ಸೃಷ್ಟಿಸಿದ್ದಾರೆ.

    ಪೊಲೀಸರು ಘನ ವಾಹನಗಳನ್ನು ಪಾರ್ಕಿಂಗ್ ಕಡೆಗೆ ಹೋಗುವಂತೆ ಸೂಚಿಸಿದಾಗ ಕೆರಳಿದ ಮಹಿಳೆ, “ಬೇರೆ ವಾಹನಗಳನ್ನು ಬಿಡುತ್ತಿದ್ದೀರಿ, ಅವರು ನಿಮ್ಮ ಅಪ್ಪನಾ.. ಅಮ್ಮನಾ..” ಎಂದು ಏರುಧ್ವನಿಯಲ್ಲಿ ಕೂಗಾಡಿದ್ದಾರೆ. ಸಾರ್ವಜನಿಕವಾಗಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ, “ನಿಮ್ಮ ವಿಡಿಯೋ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹರಿಬಿಡುತ್ತೇನೆ, ಪೊಲೀಸರಿಗೆ ಬುದ್ಧಿ ಕಲಿಸುತ್ತೇನೆ” ಎಂದು ಬೆದರಿಕೆ ಹಾಕಿದ್ದಾರೆ. ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಸಿಪಿಸಿ ಚಿದಾನಂದ ಅವರು ಮಹಿಳೆಯ ವಿರುದ್ಧ ಕ್ರಮಕ್ಕೆ ಕೋರಿ ದೂರು ನೀಡಿದ್ದಾರೆ.

    Post Views: 197

    mangalore PoliceInvestigation

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.