Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮುಲ್ಕಿ ಹಳೆಯಂಗಡಿಯಲ್ಲಿ ಎರಡು ಅಪಘಾತ: ಹೆದ್ದಾರಿಯಲ್ಲಿ ಅರ್ಧ ಗಂಟೆಗೂ ಹೆಚ್ಚು ಟ್ರಾಫಿಕ್ ಜಾಮ್
    ಇತ್ತೀಚಿನ ಸುದ್ದಿ

    ಮುಲ್ಕಿ ಹಳೆಯಂಗಡಿಯಲ್ಲಿ ಎರಡು ಅಪಘಾತ: ಹೆದ್ದಾರಿಯಲ್ಲಿ ಅರ್ಧ ಗಂಟೆಗೂ ಹೆಚ್ಚು ಟ್ರಾಫಿಕ್ ಜಾಮ್

    May 3, 2026
    Share

    ಮಂಗಳೂರು:  ಶನಿವಾರ ಸಂಜೆ ಮಂಗಳೂರಿನ ಮುಲ್ಕಿಯ ಹಳೆಯಂಗಡಿ ಜಂಕ್ಷನ್‌ನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಿಂದಾಗಿ ಹೆದ್ದಾರಿಯಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ಭಾರಿ ಟ್ರಾಫಿಕ್ ಜಾಮ್ ಉಂಟಾಗಿತ್ತು.

    ಮಂಗಳೂರಿನಿಂದ ಬಳ್ಳಾರಿಯತ್ತ ಕೆಮಿಕಲ್ ಸಾಗಿಸುತ್ತಿದ್ದ ಟ್ಯಾಂಕರ್, ಜಂಕ್ಷನ್‌ನಲ್ಲಿ ಇರಿಸಲಾಗಿದ್ದ ಬ್ಯಾರಿಕೇಡ್‌ಗಳ ಕಾರಣದಿಂದಾಗಿ ಇದ್ದಕ್ಕಿದ್ದಂತೆ ಬ್ರೇಕ್ ಹಾಕಿದೆ. ಈ ವೇಳೆ ಕಾಸರಗೋಡಿನಿಂದ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತೆರಳುತ್ತಿದ್ದ ಕುಟುಂಬವೊಂದು ಪ್ರಯಾಣಿಸುತ್ತಿದ್ದ ಕಾರು, ಟ್ಯಾಂಕರ್‌ನ ಹಿಂಭಾಗಕ್ಕೆ ಢಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಕಾರಿನ ಮುಂಭಾಗ ಜಖಂಗೊಂಡಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಮೊದಲ ಅಪಘಾತದ ಬೆನ್ನಲ್ಲೇ, ಮಂಗಳೂರಿನಿಂದ ಉಡುಪಿಯ ಕಡೆಗೆ ಹೋಗುತ್ತಿದ್ದ ಕಾರೊಂದು ಡಿವೈಡರ್ ಬಳಿ ತಿರುವು ಪಡೆಯಲು ಯತ್ನಿಸುತ್ತಿದ್ದಾಗ, ಹಿಂಬದಿಯಿಂದ ಬಂದ ಟ್ಯಾಂಕರ್ ಢಿಕ್ಕಿ ಹೊಡೆದಿದೆ. ಇದರಿಂದ ಕಾರಿನ ಬಲಬದಿಗೆ ಹಾನಿಯಾಗಿದೆ.ಈ ಸರಣಿ ಅಪಘಾತಗಳಿಂದಾಗಿ ಹೆದ್ದಾರಿಯಲ್ಲಿ ವಾಹನಗಳು ಪಾವಂಜೆ ದೇವಸ್ಥಾನದವರೆಗೆ ಸಾಲುಗಟ್ಟಿ ನಿಂತಿದ್ದವು. ಇದರ ಪರಿಣಾಮವಾಗಿ ಹಳೆಯಂಗಡಿಯ ಒಳರಸ್ತೆಗಳಲ್ಲೂ ಭಾರಿ ಸಂಚಾರ ದಟ್ಟಣೆ ಉಂಟಾಗಿತ್ತು.ವಿಷಯ ತಿಳಿಯುತ್ತಿದ್ದಂತೆ ಮಂಗಳೂರು ಸಂಚಾರ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಪಘಾತಕ್ಕೀಡಾದ ವಾಹನಗಳನ್ನು ರಸ್ತೆಯಿಂದ ತೆರವುಗೊಳಿಸಿದ ನಂತರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.

    Post Views: 136

    mangalore PoliceInvestigation

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.