Facebook Twitter Instagram
    Monday, May 4
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪೊಲೀಸರಿಗೆ ಬೆದರಿಕೆ: ಕರ್ತವ್ಯಕ್ಕೆ ಅಡ್ಡಿಪಡಿಸಿದ ಮಹಿಳೆ ವಿರುದ್ಧ ದೂರು
    ಇತ್ತೀಚಿನ ಸುದ್ದಿ

    ಪೊಲೀಸರಿಗೆ ಬೆದರಿಕೆ: ಕರ್ತವ್ಯಕ್ಕೆ ಅಡ್ಡಿಪಡಿಸಿದ ಮಹಿಳೆ ವಿರುದ್ಧ ದೂರು

    May 4, 2026
    Share

    ಮಂಗಳೂರು: ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಮತ್ತು ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದ ಮೇಲೆ ಬೆಂಗಳೂರಿನ ಸಂಧ್ಯಾ ಎಂಬ ಮಹಿಳೆ ವಿರುದ್ಧ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಶುಕ್ರವಾರ ರಜಾದಿನವಾಗಿದ್ದರಿಂದ ಕಟೀಲು ದೇವಸ್ಥಾನದಲ್ಲಿ ಭಕ್ತರ ದಟ್ಟಣೆ ಹೆಚ್ಚಾಗಿತ್ತು. ಈ ಹಿನ್ನೆಲೆಯಲ್ಲಿ ಮಲ್ಲಿಗೆಯಂಗಡಿ ಜಂಕ್ಷನ್‌ನಲ್ಲಿ ಭಾರಿ ವಾಹನಗಳನ್ನು ಕಿನ್ನಿಗೋಳಿಯತ್ತ ತಿರುಗಿಸಲಾಗುತ್ತಿತ್ತು ಮತ್ತು ಲಘು ವಾಹನಗಳನ್ನು ಮಾತ್ರ ದೇವಸ್ಥಾನದ ಕಡೆಗೆ ಬಿಡಲಾಗುತ್ತಿತ್ತು. ಮಧ್ಯಾಹ್ನದ ವೇಳೆಗೆ ಟೆಂಪೋ ಟ್ರಾವೆಲರ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು, ತಮ್ಮ ವಾಹನವನ್ನು ದೇವಸ್ಥಾನದ ಕಡೆಗೆ ಬಿಡಬೇಕೆಂದು ಪಟ್ಟು ಹಿಡಿದು ಪೊಲೀಸರೊಂದಿಗೆ ವಾಗ್ವಾದ ನಡೆಸಿದರು.ಪೊಲೀಸರು ಪರಿಸ್ಥಿತಿಯನ್ನು ವಿವರಿಸಲು ಪ್ರಯತ್ನಿಸಿದರೂ, ಆ ಮಹಿಳೆ ರಸ್ತೆಯ ಮಧ್ಯೆ ನಿಂತು ಸಂಚಾರಕ್ಕೆ ಅಡ್ಡಿಪಡಿಸಿದರು. ಈ ಕುರಿತು ದೂರು ನೀಡಿರುವ ಬಜ್ಪೆ ಪೊಲೀಸ್ ಠಾಣೆಯ ಚಿದಾನಂದ ಕೇಟ್ ಅವರು, ಸಮವಸ್ತ್ರದಲ್ಲಿದ್ದ ಪೊಲೀಸರಿಗೆ ಸಾರ್ವಜನಿಕವಾಗಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ತಿಳಿಸಿದ್ದಾರೆ.ತಮ್ಮನ್ನು ಸಂಧ್ಯಾ ಎಂದು ಪರಿಚಯಿಸಿಕೊಂಡ ಆ ಮಹಿಳೆ, “ನಾವು ಬೆಂಗಳೂರಿನಿಂದ ಬಂದಿದ್ದೇವೆ, ನಿಮಗೆ ಪಾಠ ಕಲಿಸುತ್ತೇವೆ, ನಿಮ್ಮ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್ ಮಾಡುತ್ತೇವೆ” ಎಂದು ಪೊಲೀಸರಿಗೆ ಬೆದರಿಕೆ ಹಾಕಿದ್ದಾರೆ ಎಂದು ದೂರಲಾಗಿದೆ. ಈ ಸಂಬಂಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರುದಾರರು ಒತ್ತಾಯಿಸಿದ್ದಾರೆ.

    Post Views: 13

    mangalore PoliceInvestigation

    Related Posts

    ಸಾಮಾಜಿಕ ಪದ್ಧತಿಗೆ ಕಟ್ಟೆ ಹಾಕಿದ ಕೋರ್ಟ್: ಸೋದರ ಸಂಬಂಧಿ ಮದುವೆ ಶೂನ್ಯ ಎಂದು ಘೋಷಣೆ

    May 4, 2026

    ತಾಯಿಯೇ ಮಗು ಮಾರಾಟ ಮಾಡಿದ ಆರೋಪ: ಬೆಂಗಳೂರಿನಲ್ಲಿ ಗಂಭೀರ ಪ್ರಕರಣ

    May 4, 2026

    ಕೌಟುಂಬಿಕ ಕಲಹ ದುರಂತಕ್ಕೆ: ನಾಲ್ವರು ಮಕ್ಕಳು ಸೇರಿ ಐವರ ಹತ್ಯೆ

    May 4, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.