Facebook Twitter Instagram
    Saturday, May 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಭಾರತೀಯ ಸೇನೆ ಮತ್ತು ನೌಕಾಪಡೆಗೆ ಹೊಸ ಮುಖ್ಯಸ್ಥರ ನೇಮಕ
    ಇತ್ತೀಚಿನ ಸುದ್ದಿ

    ಭಾರತೀಯ ಸೇನೆ ಮತ್ತು ನೌಕಾಪಡೆಗೆ ಹೊಸ ಮುಖ್ಯಸ್ಥರ ನೇಮಕ

    May 9, 2026
    Share

    ನವದೆಹಲಿ: ಭಾರತದ ರಕ್ಷಣಾ ಪಡೆಗಳ ನೂತನ ಮುಖ್ಯಸ್ಥರನ್ನಾಗಿ ಲೆಫ್ಟಿನೆಂಟ್ ಜನರಲ್ ಎನ್.ಎಸ್ ರಾಜಾ ಸುಬ್ರಮಣಿ (ನಿವೃತ್ತ) ಅವರನ್ನು, ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ವೈಸ್ ಅಡ್ಮಿರಲ್ ಕೃಷ್ಣ ಸ್ವಾಮಿನಾಥನ್ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ.

    ಲೆಫ್ಟಿನೆಂಟ್ ಜನರಲ್ ಎನ್.ಎಸ್ ರಾಜಾ ಸುಬ್ರಮಣಿ
    ಪ್ರಸ್ತುತ ಸಿಡಿಎಸ್ ಜನರಲ್ ಅನಿಲ್ ಚೌಹಾಣ್ ಅವರ ಅವಧಿ ಮೇ 30 ಕ್ಕೆ ಮುಕ್ತಾಯಗೊಳ್ಳಲಿದೆ. ಹೀಗಾಗಿ ಜನರಲ್ ಅನಿಲ್ ಚೌಹಾಣ್ ಅವರ ಸ್ಥಾನವನ್ನು ರಾಜಾ ಸುಬ್ರಮಣಿ ವಹಿಸಿಕೊಳ್ಳಲಿದ್ದಾರೆ. ಲೆಫ್ಟಿನೆಂಟ್ ಜನರಲ್ ಸುಬ್ರಮಣಿ ಅವರು ಪ್ರಸ್ತುತ ರಾಷ್ಟ್ರೀಯ ಭದ್ರತಾ ಮಂಡಳಿಯಲ್ಲಿ ಮಿಲಿಟರಿ ಸಲಹೆಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕಳೆದ ವರ್ಷ ಜುಲೈ 31 ರಂದು ಅವರು ಸೇನಾ ಸಿಬ್ಬಂದಿಯ ಉಪ ಮುಖ್ಯಸ್ಥರಾಗಿ ಸೇನೆಯಿಂದ ನಿವೃತ್ತರಾಗಿದ್ದರು.ಕಳೆದ ವರ್ಷ ಸೆಪ್ಟೆಂಬರ್ 1 ರಂದು ಸುಬ್ರಮಣಿ ಅವರು ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯದಲ್ಲಿ ಮಿಲಿಟರಿ ಸಲಹೆಗಾರರಾಗಿ ಜವಾಬ್ದಾರಿ ವಹಿಸಿಕೊಂಡಿದ್ದರು. ಅದಕ್ಕೂ ಮೊದಲು, ಜುಲೈ 2024 ರಿಂದ ಜುಲೈ 2025 ರವರೆಗೆ ಭೂಸೇನೆಯ ಉಪಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿದ್ದರು. ಅಷ್ಟೇ ಅಲ್ಲದೆ, ಮಾರ್ಚ್ 2023 ರಿಂದ ಜೂನ್ 2024 ರವರೆಗೆ ಸೆಂಟ್ರಲ್ ಕಮಾಂಡ್‌ನ ಜನರಲ್ ಆಫೀಸರ್ ಕಮಾಂಡಿಂಗ್-ಇನ್-ಚೀಫ್ ಆಗಿಯೂ ಕಾರ್ಯನಿರ್ವಹಿಸಿದ ದಕ್ಷ ಅಧಿಕಾರಿಯಾಗಿದ್ದಾರೆ. ರಾಜಾ ಸುಬ್ರಮಣಿ ಅವರನ್ನು ಮೊದಲಿಗೆ 1985 ರ ಡಿ. 14 ರಂದು ಗರ್ವಾಲ್ ರೈಫಲ್ಸ್‌ನ 8ನೇ ಬೆಟಾಲಿಯನ್‌ಗೆ ನಿಯೋಜಿಸಲಾಗಿತ್ತು. ಒಟ್ಟು ಭಾರತೀಯ ಸೇನೆಯಲ್ಲಿ 39 ವರ್ಷಗಳ ಸೇವೆ ಸಲ್ಲಿಸಿದ್ದಾರೆ.

    ವೈಸ್ ಅಡ್ಮಿರಲ್ ಕೃಷ್ಣ ಸ್ವಾಮಿನಾಥನ್
    ಮಿಲಿಟರಿ ನೇಮಕಾತಿಯಲ್ಲಿ, ವೈಸ್ ಅಡ್ಮಿರಲ್ ಕೃಷ್ಣ ಸ್ವಾಮಿನಾಥನ್ ಅವರನ್ನು ಭಾರತೀಯ ನೌಕಾಪಡೆಯ ಮುಂದಿನ ಮುಖ್ಯಸ್ಥರನ್ನಾಗಿ ನೇಮಿಕ ಮಾಡಲಾಗಿದೆ. ಅವರು ಪ್ರಸ್ತುತ ಪಶ್ಚಿಮ ನೌಕಾ ಕಮಾಂಡರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಮೇ 31 ರಂದು ನೌಕಾ ಸಿಬ್ಬಂದಿಯ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಅಡ್ಮಿರಲ್ ಸ್ವಾಮಿನಾಥನ್ 1987 ರ ಜು.1 ರಿಂದ ಭಾರತೀಯ ನೌಕಾಪಡೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

    Post Views: 18

    PoliceInvestigation

    Related Posts

    ಕುಲಪತಿಗೆ ಆ್ಯಸಿಡ್ ದಾಳಿ ಬೆದರಿಕೆ: ಬಿಇಡಿ ಮೌಲ್ಯಮಾಪನ ಅಕ್ರಮ ತನಿಖೆ ನಡುವೆ ಆತಂಕ

    May 9, 2026

    ಜೈಲಿನಲ್ಲಿ ಅರಳಿದ ಪ್ರೀತಿ: ಉಪ ಜೈಲರ್‌ ಜೊತೆ ವಿವಾಹವಾದ ಮಾಜಿ ಕೈದಿ

    May 8, 2026

    ಬಿಹಾರದಿಂದ ಶಾರ್ಪ್ ಶೂಟರ್ ಕರೆಸಿ ಹತ್ಯೆ: ಬಿಜೆಪಿ ನಾಯಕನ ಆಪ್ತನ ಕೊಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್

    May 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.