Facebook Twitter Instagram
    Saturday, May 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಲಿವ್-ಇನ್ ಸಂಬಂಧ ದುರಂತ ಅಂತ್ಯ: ಮಹಿಳೆಯ ಕಿರುಕುಳ ಆರೋಪ, ಯುವಕ ಆತ್ಮಹತ್ಯೆ
    ಇತ್ತೀಚಿನ ಸುದ್ದಿ

    ಲಿವ್-ಇನ್ ಸಂಬಂಧ ದುರಂತ ಅಂತ್ಯ: ಮಹಿಳೆಯ ಕಿರುಕುಳ ಆರೋಪ, ಯುವಕ ಆತ್ಮಹತ್ಯೆ

    May 9, 2026
    Share

    ಬೆಂಗಳೂರು: ನಗರದಲ್ಲಿ ಲಿವಿನ್ ರಿಲೇಷನ್​ಶಿಪ್​ನಲ್ಲಿದ್ದವರು ಸಾವಿಗೆ ಶರಣಾಗುವ ಪ್ರಕರಣಗಳು ಇತ್ತೀಚೆಗೆ ಹೆಚ್ಚಾದಂತಿದೆ. ಶ್ರೀಗಂಧನಗರದಲ್ಲಿಯೂ ಇಂತದ್ದೇ ಘಟನೆ ನಡೆದಿದ್ದು, ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಮೃತನನ್ನು ಚಿತ್ರದುರ್ಗ ಮೂಲದ ತಿಪ್ಪೇಸ್ವಾಮಿ (28) ಎಂದು ಗುರುತಿಸಲಾಗಿದೆ.

    ನಡೆದಿದ್ದೇನು?

    ತಿಪ್ಪೇಸ್ವಾಮಿ ಹಾಗೂ ದಾವಣಗೆರೆ ಮೂಲದ ಮಹಿಳೆಯೊಬ್ಬರಿಗೆ ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾಗಿತ್ತು. ಈಕೆ ರೀಲ್ಸ್ ಮಾಡುವುದರಲ್ಲಿ ಸಕ್ರಿಯಳಾಗಿದ್ದು, ಇಬ್ಬರೂ ಒಂದೇ ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುತ್ತಿದ್ದರು. ಪತಿ ಮತ್ತು ಇಬ್ಬರು ಮಕ್ಕಳನ್ನು ಬಿಟ್ಟು ಬಂದಿದ್ದ ಈಕೆ, ಕಳೆದ ಎರಡು ತಿಂಗಳಿನಿಂದ ತಿಪ್ಪೇಸ್ವಾಮಿ ಜೊತೆ ಶ್ರೀಗಂಧನಗರದ ಬಾಡಿಗೆ ಮನೆಯಲ್ಲಿ ಲಿವಿನ್ ರಿಲೇಷನ್​ಶಿಪ್​ನಲ್ಲಿದ್ದಳು. ಮನೆ ಮಾಲೀಕರಿಗೆ ತಾವು ದಂಪತಿಗಳೆಂದು ಸುಳ್ಳು ಹೇಳಿ ವಾಸವಿದ್ದರು ಎನ್ನಲಾಗಿದೆ.

    ಕಿರುಕುಳದ ಆರೋಪ

    ನನ್ನನ್ನು ಮೇಂಟೇನ್ ಮಾಡಲು ನಿನ್ನಿಂದ ಸಾಧ್ಯವಿಲ್ಲ, ನನ್ನನ್ನು ಬಿಟ್ಟು ಹೋಗು ಎಂದು ಮಹಿಳೆ ತಿಪ್ಪೇಸ್ವಾಮಿಗೆ ಮಾನಸಿಕ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಇದೇ ಕಾರಣಕ್ಕೆ ಮನನೊಂದ ತಿಪ್ಪೇಸ್ವಾಮಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತನ ಕುಟುಂಬಸ್ಥರು ಮಹಿಳೆಯ ಕಿರುಕುಳವೇ ಸಾವಿಗೆ ನೇರ ಕಾರಣ ಎಂದು ರಾಜಗೋಪಾಲನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸದ್ಯ ಘಟನೆ ನಡೆದ ಬಳಿಕ ಮಹಿಳೆ ನಾಪತ್ತೆಯಾಗಿದ್ದು, ಪೊಲೀಸರು ಆಕೆಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ರಾಜಗೋಪಾಲನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

    Post Views: 1

    karnataka PoliceInvestigation

    Related Posts

    ಇನ್ಸ್‌ಪೆಕ್ಟರ್ ವೀರಣ್ಣ ದೊಡ್ಡಮನಿ 1 ಲಕ್ಷ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ

    May 9, 2026

    ಕುಲಪತಿಗೆ ಆ್ಯಸಿಡ್ ದಾಳಿ ಬೆದರಿಕೆ: ಬಿಇಡಿ ಮೌಲ್ಯಮಾಪನ ಅಕ್ರಮ ತನಿಖೆ ನಡುವೆ ಆತಂಕ

    May 9, 2026

    ಭಾರತೀಯ ಸೇನೆ ಮತ್ತು ನೌಕಾಪಡೆಗೆ ಹೊಸ ಮುಖ್ಯಸ್ಥರ ನೇಮಕ

    May 9, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.