ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಸಂಶಯಾಸ್ಪದವಾಗಿ ತಿರುಗಾಡುತ್ತಿದ್ದ ಯುವಕನ ವಿಚಾರಣೆ ನಡೆಸಿದ ರೈಲ್ವೆ ಪೊಲೀಸರಿಗೆ ಶಾಕ್ ಆಗಿದ್ದು, ವಿಚಾರಣೆ ವೇಳೆ ಯುವಕ ಕುಖ್ಯಾತ ದರೋಡೆಕೋರನಾಗಿದ್ದು, ಇದೀಗ ಆತನನ್ನು ರೈಲ್ವೇ ರಕ್ಷಣಾ ಪಡೆ (RPF) ಸಿಬ್ಬಂದಿ ಬಂಧಿಸಿದ್ದಾರೆ. ಬಂಧಿತನಿಂದ ಅಂದಾಜು ₹13.06 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.
ವಿಚಾರಣೆ ವೇಳೆ ಈತ ಕೇರಳದ ತ್ರಿಶೂರ್ ಜಿಲ್ಲೆಯ ಪಾವರಟ್ಟಿ ಎಂಬಲ್ಲಿ ನಡೆದ ಮನೆ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿರುವುದಾಗಿ ಒಪ್ಪಿಕೊಂಡಿದ್ದಾನೆ. ಪಾವರಟ್ಟಿ ಪೊಲೀಸ್ ಠಾಣೆಯಲ್ಲಿ ಈತನ ವಿರುದ್ಧ ಈಗಾಗಲೇ ಪ್ರಕರಣ (Crime No. 516/2026) ದಾಖಲಾಗಿದ್ದು, ಎರ್ನಾಕುಳಂ ಮತ್ತು ಕಾಸರಗೋಡು ವ್ಯಾಪ್ತಿಯಲ್ಲಿ ನಡೆದ ಹಲವು ಕಳವು ಪ್ರಕರಣಗಳಲ್ಲಿ ಈತ ಭಾಗಿಯಾಗಿದ್ದಾನೆ ಎಂದು ತಿಳಿದುಬಂದಿದೆ. ಆರೋಪಿಯ ವಿರುದ್ಧ ಹಲವು ಬಾಕಿ ವಾರಂಟ್‌ಗಳಿದ್ದು, ಹೆಚ್ಚಿನ ತನಿಖೆಗಾಗಿ ಆತನನ್ನು ಕೇರಳ ಪೊಲೀಸರಿಗೆ ಹಸ್ತಾಂತರಿಸಲಾಗಿದೆ.




