Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ರನ್‌ವೇ ಮೇಲೆ ಇಳಿಯುತ್ತಿದ್ದಾಗಲೇ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ
    ಇತ್ತೀಚಿನ ಸುದ್ದಿ

    ರನ್‌ವೇ ಮೇಲೆ ಇಳಿಯುತ್ತಿದ್ದಾಗಲೇ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ

    May 12, 2026
    Share

    ಕಠ್ಮಂಡು:  ತ್ರಿಭುವನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಮುಂಜಾನೆ ಟರ್ಕಿಶ್ ಏರ್‌ಲೈನ್ಸ್ ವಿಮಾನವೊಂದು ಲ್ಯಾಂಡಿಂಗ್ ಆಗುತ್ತಿದ್ದ ವೇಳೆ ಬೆಂಕಿ ಕಾಣಿಸಿಕೊಂಡಿದ್ದು, ಕೂದಲೆಳೆ ಅಂತರದಲ್ಲಿ ಭಾರಿ ದುರಂತವೊಂದು ತಪ್ಪಿದೆ. ವಿಮಾನದಲ್ಲಿದ್ದ 278 ಪ್ರಯಾಣಿಕರು ಹಾಗೂ 11 ಮಂದಿ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ.

    ಇಸ್ತಾನ್‌ಬುಲ್‌ನಿಂದ ನೇಪಾಳದ ರಾಜಧಾನಿ ಕಠ್ಮಂಡುವಿಗೆ ಆಗಮಿಸಿದ ಟರ್ಕಿಶ್ ಏರ್‌ಲೈನ್ಸ್‌ನ ಏರ್‌ಬಸ್ A330 ವಿಮಾನವು ರನ್‌ವೇ ಮೇಲೆ ಇಳಿಯುತ್ತಿದ್ದಂತೆ ಅದರ ಬಲಭಾಗದ ಹಿಂಬದಿ ಚಕ್ರಗಳಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ವಿಮಾನವು ‘ಟ್ಯಾಕ್ಸಿವೇ ಬ್ರಾವೋ’ ಬಳಿ ನಿಂತ ತಕ್ಷಣ ಅಲರ್ಟ್ ಆದ ವಿಮಾನ ನಿಲ್ದಾಣದ ಅಗ್ನಿಶಾಮಕ ದಳವು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ.

    ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ವಿಮಾನದ ತುರ್ತು ನಿರ್ಗಮನ ದ್ವಾರಗಳ ಮೂಲಕ ಪ್ರಯಾಣಿಕರನ್ನು ತಕ್ಷಣವೇ ಕೆಳಗಿಳಿಸಲಾಯಿತು. ತುರ್ತು ಸ್ಲೈಡ್‌ಗಳ ಮೂಲಕ ಇಳಿಯುವ ಸಂದರ್ಭದಲ್ಲಿ ಇಬ್ಬರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಪ್ರಥಮ ಚಿಕಿತ್ಸೆಗೆ ಒಳಪಡಿಸಲಾಗಿದೆ. ಉಳಿದಂತೆ ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿ ಅಪಾಯದಿಂದ ಪಾರಾಗಿದ್ದಾರೆ.

    ಈ ಘಟನೆಯಿಂದಾಗಿ ರನ್‌ವೇ ಸಂಚಾರಕ್ಕೆ ಅಡ್ಡಿಯಾದ ಕಾರಣ ಸುಮಾರು ಎರಡು ಗಂಟೆಗಳ ಕಾಲ ವಿಮಾನ ನಿಲ್ದಾಣದ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿತ್ತು. ಬೆಳಿಗ್ಗೆ 8:12ರ ಸುಮಾರಿಗೆ ವಿಮಾನವನ್ನು ರನ್‌ವೇಯಿಂದ ತೆರವುಗೊಳಿಸಿದ ನಂತರ ಅಂತರಾಷ್ಟ್ರೀಯ ವಿಮಾನಗಳ ಸಂಚಾರಕ್ಕೆ ಪುನಃ ಅವಕಾಶ ಕಲ್ಪಿಸಲಾಯಿತು.

    ನಾಗರಿಕ ವಿಮಾನಯಾನ ಪ್ರಾಧಿಕಾರದ ಅಧಿಕಾರಿಗಳು  ತಾಂತ್ರಿಕ ದೋಷ ಅಥವಾ ‘ಹಾರ್ಡ್ ಲ್ಯಾಂಡಿಂಗ್’ನಿಂದಾಗಿ ಟೈರ್ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆಯಿದೆ ಎಂದು ಪ್ರಾಥಮಿಕ ವರದಿಯಲ್ಲಿ ತಿಳಿಸಿದ್ದಾರೆ.ಪ್ರಸ್ತುತ ವಿಮಾನವನ್ನು ತಾಂತ್ರಿಕ ತಪಾಸಣೆಗಾಗಿ ಗ್ರೌಂಡ್ ಮಾಡಲಾಗಿದ್ದು, ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ. 

    Post Views: 153

    leisure PoliceInvestigation

    Related Posts

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.