Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪ್ರಿಸನರ್ಸ್ ಟ್ರ್ಯಾಕಿಂಗ್ ಸಿಸ್ಟಮ್ ಜಾರಿ: ಕರ್ನಾಟಕ ಜೈಲುಗಳಲ್ಲಿ ಕಠಿಣ ನಿಯಮಗಳು
    ಇತ್ತೀಚಿನ ಸುದ್ದಿ

    ಪ್ರಿಸನರ್ಸ್ ಟ್ರ್ಯಾಕಿಂಗ್ ಸಿಸ್ಟಮ್ ಜಾರಿ: ಕರ್ನಾಟಕ ಜೈಲುಗಳಲ್ಲಿ ಕಠಿಣ ನಿಯಮಗಳು

    May 12, 2026
    Share

    ಬೆಂಗಳೂರು: ಪರಪ್ಪನ ಅಗ್ರಹಾರ ಜೈಲು ಸೇರಿದಂತೆ ರಾಜ್ಯದ ಕಾರಾಗೃಹಗಳಲ್ಲಿ ಸರಣಿ ಅಕ್ರಮಗಳು ಬಯಲಾದ ಬೆನ್ನಲ್ಲೇ, ಕಾರಾಗೃಹ ಡಿಜಿಪಿ ಅಲೋಕ್ ಕುಮಾರ್ ಅವರು ಕಠಿಣ ನಿಯಮಗಳನ್ನು ಜಾರಿಗೆ ತಂದಿದ್ದಾರೆ. ಜೈಲಿನಲ್ಲಿ ಕೈದಿಗಳು ಮತ್ತು ಸಿಬ್ಬಂದಿಯ ಪ್ರತಿಯೊಂದು ಚಲನವಲನವನ್ನು ಪತ್ತೆಹಚ್ಚಲು ‘ಪ್ರಿಸನರ್ಸ್ ಟ್ರ್ಯಾಕಿಂಗ್ ಮೂವ್‌ಮೆಂಟ್’ ಮತ್ತು ಬಯೋಮೆಟ್ರಿಕ್ ವ್ಯವಸ್ಥೆಯನ್ನು ಕಡ್ಡಾಯಗೊಳಿಸಲಾಗಿದೆ. ಪ್ರಾಯೋಗಿಕವಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಈ ತಂತ್ರಜ್ಞಾನ ಆಧಾರಿತ ಕಣ್ಗಾವಲು ವ್ಯವಸ್ಥೆ ಜಾರಿಗೆ ಬಂದಿದ್ದು, ಇನ್ನು ಮುಂದೆ ಜೈಲಿನೊಳಗೆ ಯಾರು, ಎಲ್ಲಿ ಹೋಗುತ್ತಿದ್ದಾರೆಂಬುದು ಸೆಕೆಂಡ್ ಟು ಸೆಕೆಂಡ್ ದಾಖಲಾಗಲಿದೆ.

    ಅಕ್ರಮಗಳಿಗೆ ತಂತ್ರಜ್ಞಾನದ ಮದ್ದು

    ಪರಪ್ಪನ ಅಗ್ರಹಾರ ಜೈಲಿನಲ್ಲಿ ಈ ಹಿಂದೆ ನಡೆದಿದ್ದ ಆತಂಕಕಾರಿ ಘಟನೆಗಳು ಈ ಕಠಿಣ ನಿರ್ಧಾರಕ್ಕೆ ಪ್ರೇರಣೆಯಾಗಿವೆ. ಇತ್ತೀಚೆಗಷ್ಟೇ ಜೈಲಿನ ಮೇಲೆ ದಾಳಿ ನಡೆದಾಗ ಕೈದಿಗಳು ಅಧಿಕಾರಿಗಳ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ನಡೆದಿತ್ತು. ಅಲ್ಲದೆ, ದಾಳಿಯ ವೇಳೆ 200ಕ್ಕೂ ಹೆಚ್ಚು ಮೊಬೈಲ್‌ಗಳು ಪತ್ತೆಯಾಗಿ ಜೈಲಿನ ಭದ್ರತೆಯನ್ನು ಅಣಕಿಸಿದ್ದವು. ಮಗದೊಂದು ಪ್ರಕರಣದಲ್ಲಿ ಕೈದಿಗಳು ಮೊಬೈಲ್ ಮೂಲಕ ವಿಡಿಯೋ ಚಿತ್ರೀಕರಿಸಿ ಡಿಜಿಪಿ ಹೆಸರನ್ನೇ ಪ್ರಸ್ತಾಪಿಸಿ ವೈರಲ್ ಮಾಡಿದ್ದರು. ಇಂತಹ ಘಟನೆಗಳಿಂದ ಜೈಲು ಅಧಿಕಾರಿಗಳ ಶಾಮೀಲಾತಿ ಸಾಬೀತಾದ ಹಿನ್ನೆಲೆಯಲ್ಲಿ, ಈಗ ಸಿಬ್ಬಂದಿಗೂ ಬಯೋಮೆಟ್ರಿಕ್ ಕಡ್ಡಾಯಗೊಳಿಸಲಾಗಿದೆ.

    ಹೇಗಿರಲಿದೆ ‘ಪ್ರಿಸನರ್ಸ್ ಟ್ರ್ಯಾಕಿಂಗ್’ ವ್ಯವಸ್ಥೆ?

    ಈ ಹೊಸ ವ್ಯವಸ್ಥೆಯಡಿ ಜೈಲಿನ ಪ್ರತಿ ಬ್ಯಾರಕ್, ಅಡುಗೆ ಮನೆ, ಆಸ್ಪತ್ರೆ ಮತ್ತು ಸಂದರ್ಶಕರ ಕೊಠಡಿಗಳಲ್ಲಿ ಬಯೋಮೆಟ್ರಿಕ್ ಯಂತ್ರಗಳನ್ನು ಅಳವಡಿಸಲಾಗಿದೆ. ಕೈದಿಯು ಒಂದು ವಿಭಾಗದಿಂದ ಮತ್ತೊಂದು ವಿಭಾಗಕ್ಕೆ ಹೋಗಬೇಕಾದರೆ ಹೆಬ್ಬೆಟ್ಟಿನ ಗುರುತು ನೀಡಬೇಕು. ಇದರಿಂದ ಯಾವ ಕೈದಿ ಎಷ್ಟೊತ್ತು ಕ್ಯಾಂಟೀನ್‌ನಲ್ಲಿದ್ದ ಅಥವಾ ಎಷ್ಟು ಸಮಯ ಆಸ್ಪತ್ರೆಯಲ್ಲಿದ್ದ ಎಂಬ ಮಾಹಿತಿ ಕಂಪ್ಯೂಟರ್‌ನಲ್ಲಿ ದಾಖಲಾಗುತ್ತದೆ.

    ಈ ವ್ವವಸ್ಥೆಯು ಕೈದಿಗಳು ಅಕ್ರಮವಾಗಿ ಗುಂಪು ಸೇರುವುದನ್ನು ಮತ್ತು ಮೊಬೈಲ್ ಬಳಸಲು ಸಿಬ್ಬಂದಿ ನೆರವಾಗುವುದನ್ನು ತಡೆಯಲಿದೆ. ಅಲೋಕ್ ಕುಮಾರ್ ಅವರ ಈ ಹೊಸ ‘ಡಿಜಿಟಲ್ ಲಾಕ್’ ಜೈಲು ಹಕ್ಕಿಗಳ ಅಕ್ರಮ ದರ್ಬಾರ್‌ಗೆ ಅಂತ್ಯ ಹಾಡುವ ನಿರೀಕ್ಷೆಯಿದೆ.

    Post Views: 89

    karnataka PoliceInvestigation

    Related Posts

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.