Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಪೆರ್ಲದ ವೈದ್ಯ
    ಇತ್ತೀಚಿನ ಸುದ್ದಿ

    ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಪೆರ್ಲದ ವೈದ್ಯ

    May 13, 2026
    Share

    ಕಾಸರಗೋಡು: ದಿಢೀರ್ ಬೀಸಿದ ಬೇಸಿಗೆಯ ಅಕಾಲಿಕ ಗಾಳಿ ಮಳೆಗೆ ಮರವೊಂದು ಮುರಿದು ವಿದ್ಯುತ್ ಕಂಬ ಸಹಿತ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದಿದ್ದು, ಕಾರು ಚಲಾಯಿಸುತ್ತಿದ್ದ ಪೆರ್ಲದ ವೈದ್ಯರೋರ್ವರು ಅದೃಷ್ಠವಶಾತ್ ಭಾರೀ ಅಪಾಯದಿಂದ ಪಾರಾದ ಘಟನೆ ಮಂಗಳವಾರ ಸಂಜೆ ಬಾಡೂರು-ಪೆರ್ಲ ರಸ್ತೆಯ ಮಣಿಯಂಪಾರೆ ಮಸೀದಿ ಬಳಿ ಸಂಭವಿಸಿದೆ.

    ಸಂತ್ರಸ್ತ ವೈದ್ಯರು ಸೀತಾಂಗೋಳಿ ಹಾಗೂ ಬಾಡೂರುಪದವಿನಲ್ಲಿ ಕ್ಲಿನಿಕ್ ನಡೆಸುತ್ತಿದ್ದಾರೆ.

    ಮಂಗಳವಾರ ಸಂಜೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಅವರು ತಮ್ಮ ಕ್ಲಿನಿಕ್ ಅನ್ನು ಬೇಗನೇ ಮುಚ್ಚಿ ಮನೆಗೆ ಮರಳುತ್ತಿದ್ದರು. ಅವರು ಬಾಡೂರು-ಪೆರ್ಲ ರಸ್ತೆಯಲ್ಲಿ ಚಲಿಸುತ್ತಿದ್ದಾಗ, ಭೀಕರ ಗಾಳಿಗೆ ಬೃಹತ್ ಮರವೊಂದು ಬೇರು ಸಮೇತ ಅವರ ಕಾರಿನ ಮೇಲೆ ಉರುಳಿ ಬಿದ್ದಿದೆ. ಮರದ ಜೊತೆಗೆ ಪಕ್ಕದಲ್ಲಿದ್ದ ವಿದ್ಯುತ್ ಕಂಬವೂ ಕಾರಿನ ಮೇಲೆ ಬಿದ್ದಿದೆ. ಅದೃಷ್ಟವಶಾತ್ ಈ ಅಪಘಾತದಲ್ಲಿ ವೈದ್ಯರು ಯಾವುದೇ ಗಂಭೀರ ಗಾಯಗಳಿಲ್ಲದೆ ಪಾರಾಗಿದ್ದು, ದೊಡ್ಡ ದುರಂತವೊಂದು ತಪ್ಪಿದಂತಾಗಿದೆ.

    ಮರ ಮತ್ತು ಕಂಬ ಬಿದ್ದ ರಭಸಕ್ಕೆ ವಿದ್ಯುತ್ ತಂತಿಗಳು ತುಂಡಾಗಿ ರಸ್ತೆಯುದ್ದಕ್ಕೂ ಹರಡಿಕೊಂಡಿದ್ದವು. ಇದರಿಂದ ಸಂಚಾರ ಸಂಪೂರ್ಣ ಸ್ಥಗಿತಗೊಂಡು ಅಪಾಯಕಾರಿ ಪರಿಸ್ಥಿತಿ ನಿರ್ಮಾಣವಾಗಿತ್ತು. ತಕ್ಷಣ ಸ್ಥಳಕ್ಕೆ ಧಾವಿಸಿದ ಸ್ಥಳೀಯ ನಿವಾಸಿಗಳು ಸಕಾಲಿಕ ಕಾರ್ಯಚರಣೆ ನಡೆಸಿದ್ದಾರೆ. ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರವನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

    Post Views: 205

    karnataka mangalore

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.