ನವದೆಹಲಿ: ಕಳೆದ ವರ್ಷ ನ. 10 ರಂದು ದೆಹಲಿಯ ಕೆಂಪುಕೋಟೆ ಬಳಿ ನಡೆದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ 10 ಆರೋಪಿಗಳ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಗುರುವಾರ 7,500 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದೆ.
ಆರೋಪಪಟ್ಟಿಯಲ್ಲಿ 588 ಸಾಕ್ಷಿಗಳ ಹೇಳಿಕೆಗಳು, 395 ಕ್ಕೂ ಹೆಚ್ಚು ದಾಖಲೆಗಳು ಮತ್ತು 200 ಕ್ಕೂ ಹೆಚ್ಚು ವಶಪಡಿಸಿಕೊಂಡ ವಸ್ತುಗಳನ್ನ ಮಾಹಿತಿಯನ್ನು ದಾಖಲಿಸಲಾಗಿದೆ. ಒಟ್ಟು 11 ಜನರನ್ನ ಬಂಧಿಸಿದ್ದು, ಉಳಿದ ಆರೋಪಿಗಳ ಬಂಧನಕ್ಕೆ ಎನ್ಐಎ ಶೋಧ ಕಾರ್ಯ ಮುಂದುವರಿಸಿದೆ ಎಂದು ಚಾರ್ಜ್ಶೀಟ್ ನಲ್ಲಿ ತಿಳಿಸಲಾಗಿದೆ.2025 ರ ನವೆಂಬರ್ 10 ರಂದು ಸಂಜೆ ಕೆಂಪುಕೋಟೆ ಬಳಿ ಕಾರು ಸ್ಫೋಟಗೊಂಡು 11 ಮಂದಿ ಮೃತಪಟ್ಟು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಘಟನೆಯಲ್ಲಿ ಸುತ್ತಮುತ್ತಲಿನ ಹಲವಾರು ವಾಹನಗಳು ಹಾನಿಗೊಳಗಾಗಿದ್ದವು.ಈ ಪ್ರಕರಣದ ತನಿಖೆ ನಡೆಸಿದ ಎನ್ಐಎ ಗುರುವಾರ ಪಟಿಯಾಲ ಹೌಸ್ ಕೋರ್ಟ್ನಲ್ಲಿರುವ ಎನ್ಐಎ ವಿಶೇಷ ನ್ಯಾಯಾಲಯದ ಮುಂದೆ ಆರೋಪ ಪಟ್ಟಿ ಸಲ್ಲಿಕೆ ಮಾಡಿದೆ. ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ, ಭಾರತೀಯ ನ್ಯಾಯ ಸಂಹಿತೆ, ಸ್ಫೋಟಕ ವಸ್ತುಗಳ ಕಾಯ್ದೆ, ಶಸ್ತ್ರಾಸ್ತ್ರ ಕಾಯ್ದೆ ಮತ್ತು ಸಾರ್ವಜನಿಕ ಆಸ್ತಿಗೆ ಹಾನಿ ತಡೆಗಟ್ಟುವಿಕೆ ಕಾಯ್ದೆಯ ಬಹು ನಿಬಂಧನೆಗಳ ಅಡಿಯಲ್ಲಿ ಚಾರ್ಜ್ಶೀಟ್ ಸಲ್ಲಿಕೆ ಮಾಡಲಾಗಿದೆ.