Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬ್ರಹ್ಮಾವರ: ವರದಕ್ಷಿಣೆ ಕಿರುಕುಳ- 8 ಮಂದಿ ವಿರುದ್ಧ ದೂರು ದಾಖಲು
    ಇತ್ತೀಚಿನ ಸುದ್ದಿ

    ಬ್ರಹ್ಮಾವರ: ವರದಕ್ಷಿಣೆ ಕಿರುಕುಳ- 8 ಮಂದಿ ವಿರುದ್ಧ ದೂರು ದಾಖಲು

    September 5, 2022
    Share

    ಬ್ರಹ್ಮಾವರ: ಹಣ ನೀಡುವಂತೆ ಪೀಡಿಸಿ ದೈಹಿಕ ಹಾಗೂ ಮಾನಸಿಕ ಹಿಂಸೆ ನೀಡುತ್ತಿರುವುದಾಗಿ ಬ್ರಹ್ಮಾವರದ ಪ್ರಜ್ಞಾ ಎಂಬವರು ತಮ್ಮಗಂಡ ಭರತ್ ರಾಜ್ ಸೇರಿದಂತೆ ಆತನ ಮನೆಯ 8 ಮಂದಿ ವಿರುದ್ಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

    ಬೆಳುವಾಯಿಯ ಎಸ್‌ಸಿಡಿಸಿಸಿ ಬ್ಯಾಂಕಿನಲ್ಲಿ ಗುಮಾಸ್ತೆಯಾಗಿ ಕೆಲಸ ಮಾಡಿಕೊಂಡಿರುವ ಪ್ರಜ್ಞಾ.ಜೆ ಅವರು ಕಳೆದ ವರ್ಷ ನವೆಂಬರ್‌ನಲ್ಲಿ ಬ್ರಹ್ಮಾವರದ ಪೇತ್ರಿಯ ಎಸ್‌ಸಿಡಿಸಿಸಿ ಬ್ಯಾಂಕಿನಲ್ಲಿ ಗುಮಾಸ್ತನಾಗಿದ್ದ ಕೊಕ್ಕರ್ಣೆಯ ಭರತ್ ರಾಜ್‌ನೊಂದಿಗೆ ಪೆರ್ಡೂರಿನಲ್ಲಿ ಮದುವೆ ಆಗಿದ್ದರು. ಮದುವೆಯ ಸಮಯ ಪ್ರಜ್ಞಾ ಅವರ ತವರು ಮನೆಯಿಂದ 20 ಪವನ್ ಚಿನ್ನ ಹಾಗೂ 10 ಲಕ್ಷ ರೂ. ಹಣದೊಂದಿಗೆ ಮದುವೆಯ ಖರ್ಚು ವೆಚ್ಚ ನೋಡಿಕೊಂಡಿದ್ದರು. ಮಾತ್ರವಲ್ಲದೆ ಮದುವೆಗೆ ಮುಂಚಿತವಾಗಿ ಆರೋಪಿ ಪತಿ ಭರತ್ ರಾಜ್ ಒಂದು ಲಕ್ಷ ಹಣವನ್ನು ಪಡೆದುಕೊಂಡಿದ್ದ. ಮದುವೆಯ ದಿನದಿಂದಲೇ ಆರೋಪಿ ಭರತ್ ಹಾಗೂ ಆತನ ತಂದೆ ಸದಾನಂದ ಕೂಡಾ ಹಣಕ್ಕಾಗಿ ಬೇಡಿಕೆ ಇಟ್ಟು, ಹಣ ತರದೇ ಇದ್ದಲ್ಲಿ ಮಗನಿಗೆ ಬೇರೆ ಮದುವೆ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದರು. ಜೊತೆಗೆ ಅತ್ತೆ ಪ್ರಭಾವತಿ ಮತ್ತು ನಾದಿನಿ ಭಾರತಿ ಕೂಡಾ ಕೆಲಸ ಬಿಡು, ತವರು ಮನೆಗೆ ಹೋಗಬೇಡ. ಮನೆಯಲ್ಲಿ ನಡೆದ ವಿಷಯವನ್ನು ಅವರಿಗೆ ಹೇಳಬಾರದು ಎಂದೆಲ್ಲಾ ಬೈಯುತ್ತಿದ್ದರು. ಅಲ್ಲದೇ ಕಳೆದ 9 ತಿಂಗಳಿನಿಂದ ವಿಪರೀತ ದೈಹಿಕ ಮತ್ತು ಮಾನಸಿಕ ಕಿರುಕುಳ ನೀಡಿರುವುದಾಗಿ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಈ ಎಲ್ಲಾ ಘಟನೆಗಳಿಗೂ ಆರೋಪಿತರಾದ ಜಯಕುಮಾರ್, ನವಮಿ, ನಿಹಾಲ್, ರತ್ನಾಕರ ಇವರು ಕುಮ್ಮಕ್ಕು ನೀಡಿರುವುದಾಗಿ ನೀಡಿದ ದೂರಿನಂತೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದರೂ ಆರೋಪಿಗಳು ನಿರ್ಭಿಡೆಯಿಂದ ತಿರುಗಾಡುತ್ತಿದ್ದಾರೆ ಎಂದು ನೊಂದ ಯುವತಿಯ ಮನೆಯವರು ಆರೋಪಿಸಿದ್ದಾರೆ.

    Post Views: 204

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.