Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»Uncategorized»ನ್ಯಾಯಾಲಯಕ್ಕೆ ಹಾಜರಾಗದೆ ಆರು ವರ್ಷಗಳಿಂದ ಪರಾರಿಯಾಗಿದ್ದ ಆರೋಪಿ ವಶಕ್ಕೆ
    Uncategorized

    ನ್ಯಾಯಾಲಯಕ್ಕೆ ಹಾಜರಾಗದೆ ಆರು ವರ್ಷಗಳಿಂದ ಪರಾರಿಯಾಗಿದ್ದ ಆರೋಪಿ ವಶಕ್ಕೆ

    May 16, 2026
    Share

    ಉಡುಪಿ: ಕಳೆದ ಆರು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ರೌಡಿಶೀಟರ್ ಹಾಗೂ ವಾರಂಟ್ ಆರೋಪಿಯನ್ನು ಕಾಪು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

    ಬಂಧಿತ ಆರೋಪಿಯನ್ನು ಅಭಿಜಿತ್ (34) ಎಂದು ಗುರುತಿಸಲಾಗಿದ್ದು, ಈತನನ್ನು ಪುಂಜಾಲಕಟ್ಟೆಯಲ್ಲಿ ಪತ್ತೆ ಹಚ್ಚಿ ವಶಕ್ಕೆ ಪಡೆಯಲಾಗಿದೆ.ಆರೋಪಿಯು 2016ರಲ್ಲಿ ಮಲ್ಲಾರು ಪಕೀರಣಕಟ್ಟೆಯ ಬಳಿ ಮಹಿಳೆಯೊಬ್ಬರ ಮಾನಭಂಗಕ್ಕೆ ಯತ್ನಿಸಿದ್ದ. ಈ ಪ್ರಕರಣದ ವಿಚಾರಣೆ ಹಂತದಲ್ಲಿರುವಾಗ ಆತ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು. ಕಳೆದ ಆರು ವರ್ಷಗಳಿಂದ ಕಾಪು ಪೊಲೀಸರು ಈತನಿಗಾಗಿ ಹುಡುಕಾಟ ನಡೆಸುತ್ತಿದ್ದರು.ಸದ್ಯ ಆರೋಪಿಯನ್ನು ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಮೇ 25ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪ್ರಸ್ತುತ ಆತನನ್ನು ಉಡುಪಿ ಜಿಲ್ಲಾ ಕಾರಾಗೃಹದಲ್ಲಿ ಇರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಆರೋಪಿಯ ವಿರುದ್ಧ ಮೈಸೂರಿನ ನರಸಿಂಹರಾಜಪುರ ಮತ್ತು ಬಜಪೆ ಪೊಲೀಸ್ ಠಾಣೆಗಳಲ್ಲೂ ಪ್ರಕರಣಗಳು ದಾಖಲಾಗಿರುವುದು ಬೆಳಕಿಗೆ ಬಂದಿದೆ. ಆ ಪ್ರಕರಣಗಳಲ್ಲೂ ಈತ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.ಕಾರ್ಕಳ ಉಪವಿಭಾಗದ ಡಿವೈಎಸ್ಪಿ ವಿಜಯ್ ಪ್ರಸಾದ್ ಮತ್ತು ಕಾಪು ವೃತ್ತ ನಿರೀಕ್ಷಕ ಅಜ್ಮತ್ ಅಲಿ ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ. ಕಾಪು ಎಸ್‌ಐಗಳಾದ ತೇಜಸ್ವಿ ಟಿ.ಐ. ಮತ್ತು ಶುಭಕರ (ತನಿಖಾ ವಿಭಾಗ) ನೇತೃತ್ವದ ತಂಡದಲ್ಲಿದ್ದ ಸಿಬ್ಬಂದಿಗಳಾದ ಮೊಹಮ್ಮದ್ ರಫೀಕ್ ಮತ್ತು ರಘು ಅವರು ಕಾರ್ಯಾಚರಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

    Post Views: 116

    karnataka PoliceInvestigation

    Related Posts

    ಬಂಟ್ವಾಳ: ಎರಡು ಬೈಕ್‌ಗಳಲ್ಲಿ ಬೆನ್ನಟ್ಟಿ ಬಂದು ದರೋಡೆ: ₹8 ಲಕ್ಷ ನಗದು ಕಳವು

    August 20, 2026

    ಬಾಳೆಹಣ್ಣಿಗೆ ರಾಸಾಯನಿಕ, ಕೃತಕ ಬಣ್ಣ ಬಳಕೆ ಆರೋಪ; ಅಧಿಕಾರಿಗಳಿಂದ ದಾಳಿ

    August 20, 2026

    ಮುಖವಾಡ ಧರಿಸಿ ಮನೆಗೆ ಬಂದ ವಿದ್ಯಾರ್ಥಿಗಳು: ಪ್ರಾಂಶುಪಾಲೆ ಹತ್ಯೆ ಪ್ರಕರಣ ಬಯಲು

    August 20, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026

    ಮಂಗಳೂರು : ಭಜನೆ ಮಾಡುತ್ತಲೇ ಕುಸಿದು ಬಿದ್ದ ಯುವಕ, ಹೃದಯಾಘಾತದಿಂದ ಸಾವು

    September 5, 2026

    ಕಾಸರಗೋಡು: ರಕ್ತದ ಮಡುವಿನಲ್ಲಿ ಕಾರ್ಮಿಕನ ಮೃತದೇಹ ಪತ್ತೆ- ಕೊಲೆ ಶಂಕಿಸಿ ತನಿಖೆ, ಇಬ್ಬರು ಪರಾರಿ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.