Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪೊಲೀಸ್ ಸಿಬ್ಬಂದಿಯ ಮನೆಯಲ್ಲೇ ಕಳ್ಳತನ: ಲಕ್ಷಾಂತರ ಮೌಲ್ಯದ ಆಭರಣ ಕಳವು
    ಇತ್ತೀಚಿನ ಸುದ್ದಿ

    ಪೊಲೀಸ್ ಸಿಬ್ಬಂದಿಯ ಮನೆಯಲ್ಲೇ ಕಳ್ಳತನ: ಲಕ್ಷಾಂತರ ಮೌಲ್ಯದ ಆಭರಣ ಕಳವು

    May 16, 2026
    Share

    ಬೆಳ್ತಂಗಡಿ: ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಯ ಹೆಡ್‍ಕಾನ್ಸ್ಟೇಬಲ್‍ರೋರ್ವರ ಮನೆಗೆ ಕಳ್ಳರು ನುಗ್ಗಿ ಸುಮಾರು 15.80 ಲಕ್ಷ ರೂ. ಮೌಲ್ಯದ ನಗ- ನಗದನ್ನು ಕದ್ದೊಯ್ದ ಘಟನೆ ಮೇ 15ರಂದು ಬೆಳಗ್ಗೆ ಬೆಳ್ತಂಗಡಿ ತಾಲೂಕಿನ ಪದ್ಮುಂಜದ ಗಾಡಕೋಡಿ ಎಂಬಲ್ಲಿ ಬೆಳಕಿಗೆ ಬಂದಿದೆ.

    ಹಾಸನ ಜಿಲ್ಲೆಯ ರಾಜ್ಯ ಮೀಸಲು ಪೊಲೀಸ್ ಪಡೆಯ (KSRP) ಗುಪ್ತವಾರ್ತೆ ವಿಭಾಗದ ಹೆಡ್ ಕಾನ್ಸ್ಟೇಬಲ್ ಆಗಿರುವ ಕರುಣಾಕರ ಗೌಡ ಎಂಬವರ ಮನೆಯಲ್ಲಿ ಈ ಕೃತ್ಯ ನಡೆದಿದ್ದು, ಸುಮಾರು 13 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ 1 ಲಕ್ಷ ರೂಪಾಯಿ ನಗದು ಹಣವನ್ನು ಕಳ್ಳರು ದೋಚಿ ಪರಾರಿಯಾಗಿದ್ದಾರೆ.

    ಹಾಸನ ಜಿಲ್ಲೆಯ ರಾಜ್ಯ ಮೀಸಲು ಪೊಲೀಸ್ ಪಡೆಯಲ್ಲಿ ಗುಪ್ತವಾರ್ತೆ ಸಂಗ್ರಹದ ಕಾರ್ಯನಿರ್ವಹಿಸುತ್ತಿರುವ ಕರುಣಕಾರ ಗೌಡ ಪದ್ಮುಂಜ ಎಂಬವರ ಮನೆಯಲ್ಲಿ ಈ ಘಟನೆ ನಡೆದಿದ್ದು, ಕರುಣಾಕರ ಗೌಡರು ಗ್ರಾಮದ ತನ್ನ ಮೂಲ ಮನೆಯಲ್ಲಿ ಒಬ್ಬರೇ ಇದ್ದು, ಪತ್ನಿ ಉದ್ಯೋಗ ನಿಮಿತ್ತ ಬೇರೆ ಊರಿನಲ್ಲಿರುವುದರಿಂದ ಮಕ್ಕಳು ಅವರ ಜೊತೆಗಿದ್ದಾರೆ. ಮನೆಯಲ್ಲಿ ಪತ್ನಿ ತನ್ನ ಕೊಠಡಿಯಲ್ಲಿ ಚಿನ್ನಾಭರಣವನ್ನು ಕಪಾಟಿನಲ್ಲಿರಿಸಿ ಅದಕ್ಕೆ ಬೀಗ ಹಾಕಿ ಬೀಗದ ಕೀಯನ್ನು ತನ್ನೊಂದಿಗೆ ಕೊಂಡೊಯ್ದಿದ್ದಾರೆ. ಗುರುವಾರ ರಾತ್ರಿ ಮನೆಯಲ್ಲಿ ಒಂಟಿಯಾಗಿದ್ದ ಕರುಣಾಕರ ಗೌಡ ರವರು ಐಪಿಎಲ್ ಪಂದ್ಯಾಟವನ್ನು ವೀಕ್ಷಿಸಿ ಮಲಗಿದ್ದವರು ಬೆಳಗ್ಗೆ ಎದ್ದಾಗ ಪತ್ನಿಯ ಕೋಣೆಯ ಬೀಗ ಒಡೆದಿ ರುವುದು ಕಂಡು ಬಂದಿದೆ. ಪರಿಶೀಲಿಸಿದಾಗ ಕೋಣೆಯೊಳಗಿದ್ದ ಕಪಾಟಿನ ಬೀಗ ಮುರಿದು ಕಪಾಟಿನೊಳಗಿದ್ದ 14 ಲಕ್ಷ ರೂ. ಮೌಲ್ಯದ ಹನ್ನೆರಡುವರೆ ಪವನ್ ತೂಕದ ಚಿನ್ನಾಭರಣಗಳನ್ನು ಹಾಗೂ 80 ಸಾವಿರ ರೂ. ಮೌಲ್ಯದ ವಜ್ರದ ಆಭರಣವನ್ನು ಮತ್ತು 1 ಲಕ್ಷ ರೂ ನಗದು ಹಣವನ್ನು ಕದ್ದೊಯ್ದಿರುವುದು ಬೆಳಕಿಗೆ ಬಂದಿದೆ. ಪೊಲೀಸ್ ಸಿಬ್ಬಂದಿಯೋರ್ವರು ಮನೆಯಲ್ಲಿ ಮಲಗಿದ್ದ ವೇಳೆಯೇ ಮನೆಯೊಳಗಿಂದ ಬೀಗ ಮುರಿದು ಕಳವು ನಡೆದಿರುವುದು ಆಶ್ಚರ್ಯಕರವೆನಿಸಿದೆ

    Post Views: 150

    karnataka PoliceInvestigation

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.