Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವರದಕ್ಷಿಣೆ ಕಿರುಕುಳ ಕೇಸ್: ಪೊಲೀಸ್ ಕಾನ್ಸ್‌ಟೇಬಲ್ ಪತಿ ಸೇರಿ ಕುಟುಂಬಸ್ಥರ ವಿರುದ್ಧ ಕೇಸ್ ದಾಖಲು
    ಇತ್ತೀಚಿನ ಸುದ್ದಿ

    ವರದಕ್ಷಿಣೆ ಕಿರುಕುಳ ಕೇಸ್: ಪೊಲೀಸ್ ಕಾನ್ಸ್‌ಟೇಬಲ್ ಪತಿ ಸೇರಿ ಕುಟುಂಬಸ್ಥರ ವಿರುದ್ಧ ಕೇಸ್ ದಾಖಲು

    May 24, 2026
    Share

    ಬೆಂಗಳೂರು: ತಂದೆ-ತಾಯಿಗೆ ಮರ್ಯಾದೆ ಕೊಡುವುದಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಪತಿಯೊಂದಿಗೆ ಉಂಟಾದ ಜಗಳದಿಂದ ಮನನೊಂದ ಪೊಲೀಸ್ ಕಾನ್ಸ್‌ಟೇಬಲ್ ಪತ್ನಿ (wife) ಪೊಲೀಸ್ ಕ್ವಾಟ್ರಸ್​​ನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ (death) ಮಾಡಿಕೊಂಡಿರುವಂತಹ ಘಟನೆ ಕೆ.ಆರ್.ಪುರಂನಲ್ಲಿ ನಡೆದಿದೆ. ಹೆಚ್‌ಎಎಲ್ ಪೊಲೀಸ್ ಠಾಣೆ ಕಾನ್ಸ್‌ಟೇಬಲ್ ರಾಜೇಶ್ ಆರಾಧ್ಯ ಪತ್ನಿ ಲಕ್ಷ್ಮೀಪ್ರಿಯಾ (27) ಆತ್ಮಹತ್ಯೆಗೆ ಶರಣಾದ ದುರ್ದೈವಿ.

    ನಡೆದಿದ್ದೇನು?
    ಮೂಲತಃ ಮಂಡ್ಯ ಜಿಲ್ಲೆಯ ಮಳವಳ್ಳಿಯವರಾದ ರಾಜೇಶ್ ಆರಾಧ್ಯ ಮತ್ತು ಲಕ್ಷ್ಮೀಪ್ರಿಯಾ ಅವರಿಗೆ 2023ರಲ್ಲಿ ಮೈಸೂರಿನಲ್ಲಿ ವಿವಾಹವಾಗಿತ್ತು. ಈ ದಂಪತಿಗೆ ಸದ್ಯ 8 ತಿಂಗಳ ಹಸುಗೂಸಿದೆ. ಕೆ.ಆರ್.ಪುರಂನಲ್ಲಿರುವ ಪೊಲೀಸ್ ಕ್ವಾಟ್ರಸ್​ನಲ್ಲಿ ಈ ಕುಟುಂಬ ವಾಸವಾಗಿತ್ತು. ನಿನ್ನೆ (ಮೇ 22) ಬೆಳಿಗ್ಗೆ ದಂಪತಿ ನಡುವೆ ಕೌಟುಂಬಿಕ ವಿಷಯಕ್ಕೆ ದೊಡ್ಡ ಜಗಳ ಉಂಟಾಗಿದೆ. “ನನ್ನ ತಂದೆ-ತಾಯಿಗೆ ನೀನು ಸರಿಯಾಗಿ ಮರ್ಯಾದೆ ಕೊಡುವುದಿಲ್ಲ” ಎಂದು ಪತಿ ರಾಜೇಶ್ ಪತ್ನಿಗೆ ಬೈದಿದ್ದರು. ಇದೇ ಕಾರಣಕ್ಕೆ ತೀವ್ರ ಬೇಸರಗೊಂಡಿದ್ದ ಲಕ್ಷ್ಮೀಪ್ರಿಯಾ, ನಿನ್ನೆ ರಾತ್ರಿ ರಾಜೇಶ್ ನೈಟ್ ಡ್ಯೂಟಿಗೆ ತೆರಳಿದ್ದಾಗ ಇತ್ತ ಕ್ವಾಟ್ರಸ್​​ನಲ್ಲಿ ನೇಣು ಬಿಗಿದುಕೊಂಡು ಪ್ರಾಣ ಬಿಟ್ಟಿದ್ದಾರೆ.

    ಪತಿ ಮತ್ತು ಕುಟುಂಬಸ್ಥರ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ
    ಇನ್ನು ಘಟನೆ ನಡೆದ ಬೆನ್ನಲ್ಲೇ ಮೃತ ಲಕ್ಷ್ಮೀಪ್ರಿಯಾ ಪೋಷಕರು, ರಾಜೇಶ್​ ಮತ್ತು ಅವರ ಕುಟುಂಬದ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಮದುವೆಯಾದಾಗಿನಿಂದಲೂ ರಾಜೇಶ್ ಆರಾಧ್ಯ ಹಾಗೂ ಆತನ ಕುಟುಂಬ ಸದಸ್ಯರು ಲಕ್ಷ್ಮೀಪ್ರಿಯಾಗೆ ವರದಕ್ಷಿಣೆಗಾಗಿ ಮಾನಸಿಕ ಹಾಗೂ ದೈಹಿಕವಾಗಿ ತೀವ್ರ ಹಿಂಸೆ ನೀಡುತ್ತಿದ್ದರು. ನಿನ್ನೆ ನಡೆದ ಜಗಳ ಹಾಗೂ ಈ ಹಿಂದಿನ ಕಿರುಕುಳವೇ ಮಗಳ ಆತ್ಮಹತ್ಯೆಗೆ ನೇರ ಕಾರಣ ಎಂದು ಅವರು ಆರೋಪಿಸಿದ್ದಾರೆ.

    ಕೆ.ಆರ್.ಪುರಂ ಠಾಣೆಯಲ್ಲಿ ಕೇಸ್ ದಾಖಲು
    ಮೃತ ಲಕ್ಷ್ಮೀಪ್ರಿಯಾ ಪೋಷಕರು ನೀಡಿದ ದೂರಿನ ಅನ್ವಯ ಕೆ.ಆರ್.ಪುರಂ ಪೊಲೀಸ್ ಠಾಣೆಯಲ್ಲಿ ಪತಿ ರಾಜೇಶ್ ಆರಾಧ್ಯ ಹಾಗೂ ಆತನ ಕುಟುಂಬಸ್ಥರ ವಿರುದ್ಧ ವರದಕ್ಷಿಣೆ ಕಿರುಕುಳ ಮತ್ತು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಪ್ರಕರಣ ದಾಖಲಾಗಿದೆ. ಪೊಲೀಸರು ಸದ್ಯ ತನಿಖೆ ನಡೆಸಿದ್ದಾರೆ.

    Post Views: 107

    karnataka PoliceInvestigation

    Related Posts

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.