Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಟ್ರಾಫಿಕ್ ಕಾಟದ ಮಧ್ಯೆ ಮತ್ತೊಂದು ಸಂಕಷ್ಟ: ಆಗುಂಬೆ ಘಾಟಿಯಲ್ಲಿ ಮರ ಬಿದ್ದು ವಾಹನ ದಟ್ಟಣೆ
    ಇತ್ತೀಚಿನ ಸುದ್ದಿ

    ಟ್ರಾಫಿಕ್ ಕಾಟದ ಮಧ್ಯೆ ಮತ್ತೊಂದು ಸಂಕಷ್ಟ: ಆಗುಂಬೆ ಘಾಟಿಯಲ್ಲಿ ಮರ ಬಿದ್ದು ವಾಹನ ದಟ್ಟಣೆ

    May 24, 2026
    Share

    ಹೆಬ್ರಿ: ಕರಾವಳಿ ಮತ್ತು ಮಲೆನಾಡು ಭಾಗವನ್ನು ಸಂಪರ್ಕಿಸುವ ಆಗುಂಬೆ ಘಾಟಿಯ ಉಡುಪಿ ಜಿಲ್ಲಾ ವ್ಯಾಪ್ತಿಯ ಎರಡನೇ ತಿರುವಿನ ಬಳಿ ಶನಿವಾರ ಸಂಜೆ ಬೃಹತ್ ಮರವೊಂದು ರಸ್ತೆಗೆ ಉರುಳಿ ಬಿದ್ದ ಪರಿಣಾಮ ಸುಮಾರು ಒಂದು ಗಂಟೆಗಳ ಕಾಲ ವಾಹನ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿತ್ತು.ಈ ಘಟನೆಯಿಂದಾಗಿ ಈಗಾಗಲೇ ಟ್ರಾಫಿಕ್ ಸಮಸ್ಯೆಯಿಂದ ತತ್ತರಿಸಿದ್ದ ಘಾಟಿ ರಸ್ತೆಯಲ್ಲಿ ವಾಹನ ದಟ್ಟಣೆ ಮತ್ತಷ್ಟು ತೀವ್ರಗೊಂಡಿತು. ಇತ್ತೀಚಿನ ದಿನಗಳಲ್ಲಿ ಈ ಭಾಗಕ್ಕೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದ್ದು, ವಾಹನಗಳ ದಟ್ಟಣೆಯಿಂದಾಗಿ ಪ್ರತಿದಿನ ಇಲ್ಲಿ ಗಂಟೆಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ.ಇದರ ಬೆನ್ನಲ್ಲೇ, ಘಾಟಿಯ ವಿವಿಧ ತಿರುವುಗಳಲ್ಲಿ ಹಲವು ಅಪಾಯಕಾರಿ ಮರಗಳು ರಸ್ತೆಯ ಕಡೆಗೆ ವಾಲಿ ನಿಂತಿರುವುದು ವಾಹನ ಸವಾರರು ಮತ್ತು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಮುಂಬರುವ ದಿನಗಳಲ್ಲಿ ಭಾರಿ ಗಾಳಿ-ಮಳೆಗೆ ಈ ಮರಗಳು ರಸ್ತೆಗೆ ಉರುಳುವ ಸಾಧ್ಯತೆ ಹೆಚ್ಚಾಗಿದೆ. ಇದಲ್ಲದೆ, ಘಾಟಿ ರಸ್ತೆಯುದ್ದಕ್ಕೂ ಬಿದ್ದಿರುವ ತಡೆಗೋಡೆಗಳ ದುರಸ್ತಿ ಕಾರ್ಯವೂ ಇನ್ನೂ ನಡೆದಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಮುಂಗಾರು ಮಳೆ ಇನ್ನೇನು ಕೆಲವೇ ದಿನಗಳಲ್ಲಿ ಆರಂಭವಾಗಲಿದ್ದು, ಸಂಬಂಧಪಟ್ಟ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಸಾರ್ವಜನಿಕರು ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಯಾವುದೇ ದೊಡ್ಡ ಮಟ್ಟದ ಅನಾಹುತ ಸಂಭವಿಸುವ ಮುನ್ನವೇ ಅಧಿಕಾರಿಗಳು ಎಚ್ಚೆತ್ತುಕೊಂಡು ತಕ್ಷಣವೇ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

    Post Views: 130

    karnataka PoliceInvestigation

    Related Posts

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026

    ಮಂಗಳೂರು : ಭಜನೆ ಮಾಡುತ್ತಲೇ ಕುಸಿದು ಬಿದ್ದ ಯುವಕ, ಹೃದಯಾಘಾತದಿಂದ ಸಾವು

    September 5, 2026

    ಕಾಸರಗೋಡು: ರಕ್ತದ ಮಡುವಿನಲ್ಲಿ ಕಾರ್ಮಿಕನ ಮೃತದೇಹ ಪತ್ತೆ- ಕೊಲೆ ಶಂಕಿಸಿ ತನಿಖೆ, ಇಬ್ಬರು ಪರಾರಿ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026

    ಮಂಗಳೂರು : ಭಜನೆ ಮಾಡುತ್ತಲೇ ಕುಸಿದು ಬಿದ್ದ ಯುವಕ, ಹೃದಯಾಘಾತದಿಂದ ಸಾವು

    September 5, 2026

    ಕಾಸರಗೋಡು: ರಕ್ತದ ಮಡುವಿನಲ್ಲಿ ಕಾರ್ಮಿಕನ ಮೃತದೇಹ ಪತ್ತೆ- ಕೊಲೆ ಶಂಕಿಸಿ ತನಿಖೆ, ಇಬ್ಬರು ಪರಾರಿ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.